AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರೀ ಮೊತ್ತಕ್ಕೆ ‘ಅಯೋಗ್ಯ 2’ ಆಡಿಯೋ ಹಕ್ಕು ಮಾರಾಟ; ಲೆಕ್ಕ ಕೊಟ್ಟ ಸತೀಶ್

'ಅಯೋಗ್ಯ' ಚಿತ್ರದ ನಿರ್ದೇಶಕ ಮಹೇಶ್ ಕುಮಾರ್ ಅವರೇ 'ಅಯೋಗ್ಯ 2’ ಚಿತ್ರವನ್ನೂ ನಿರ್ದೇಶಿಸುತ್ತಿದ್ದು, ಸತೀಶ್ ನಿನಾಸಂ ಹಾಗೂ ರಚಿತಾ ರಾಮ್ ಜೋಡಿ ಮತ್ತೊಮ್ಮೆ ಪರದೆಯ ಮೇಲೆ ಮೋಡಿ ಮಾಡಲು ಸಜ್ಜಾಗಿದೆ. ಆಡಿಯೋ ಹಾಡಿನ ಹಕ್ಕುಗಳ ಮಾರಾಟದ ಬಗ್ಗೆ ವಿಡಿಯೋ ಮಾಡಿ ಪೋಸ್ಟ್ ಮಾಡಲಾಗಿದೆ. ಈ ವಿಡಿಯೋ ಸಾಕಷ್ಟು ಗಮನ ಸೆಳೆದಿದೆ.

ಭಾರೀ ಮೊತ್ತಕ್ಕೆ 'ಅಯೋಗ್ಯ 2' ಆಡಿಯೋ ಹಕ್ಕು ಮಾರಾಟ; ಲೆಕ್ಕ ಕೊಟ್ಟ ಸತೀಶ್
ಸತೀಶ್
ರಾಜೇಶ್ ದುಗ್ಗುಮನೆ
|

Updated on: May 08, 2026 | 11:54 AM

Share

2018ರಲ್ಲಿ ರಿಲೀಸ್ ಆಗಿ ಕನ್ನಡ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ್ದ ಸಿನಿಮಾ ಎಂದರೆ ಅದು ‘ಅಯೋಗ್ಯ’. ಈ ಚಿತ್ರ ನೀನಾಸಂ ಸತೀಶ್ ವೃತ್ತಿ ಜೀವನಕ್ಕೆ ಸಾಕಷ್ಟು ಮೈಲೇಜ್ ನೀಡಿತ್ತು. ಸತೀಶ್ ಹಾಗೂ ರಚಿತಾ ರಾಮ್ ಕಾಂಬಿನೇಷನ್ ಕಮಾಲ್ ಮಾಡಿತ್ತು. ಈಗ ‘ಅಯೋಗ್ಯ 2’ ರಿಲೀಸ್​​ಗೂ ಮೊದಲೇ ಸಖತ್ ಸೌಂಡ್ ಮಾಡುತ್ತಿದೆ. ಚಿತ್ರೀಕರಣದ ಹಂತದಲ್ಲಿರುವ ಈ ಸಿನಿಮಾ ಈಗ ತನ್ನ ಆಡಿಯೋ ಹಕ್ಕನ್ನು ಮಾರಿದೆ. ಅದು ಕೂಡ 2 ಕೋಟಿ ರೂಪಾಯಿಗೆ.

‘ಅಯೋಗ್ಯ’ ಸಿನಿಮಾ 2018ರಲ್ಲಿ ರಿಲೀಸ್ ಆಯಿತು. ಮಹೇಶ್ ಕುಮಾರ್ ಇದನ್ನು ನಿರ್ದೇಶಿಸಿದ್ದರು. ಅರ್ಜುನ್ ಜನ್ಯ ಸಂಗೀತ ಕಮಾಲ್ ಮಾಡಿತ್ತು. ಮೊದಲ ಭಾಗದ ‘ಏನಮ್ಮಿ ಏನಮ್ಮಿ’ ಹಾಡು ಇಂದಿಗೂ ಕನ್ನಡಿಗರ ಫೇವರೆಟ್. ಅದೇ ಕ್ರೇಜ್ ಈಗ ಎರಡನೇ ಭಾಗಕ್ಕೂ ಮುಂದುವರಿದಿದೆ. ಲೇಟೆಸ್ಟ್ ಮಾಹಿತಿ ಪ್ರಕಾರ, ‘ಅಯೋಗ್ಯ 2’ ಚಿತ್ರದ ಆಡಿಯೋ ಹಕ್ಕುಗಳನ್ನು ಆನಂದ್ ಆಡಿಯೋ ಬರೋಬ್ಬರಿ 2 ಕೋಟಿ ರೂಪಾಯಿ ನೀಡಿ ಖರೀದಿಸಿದೆ. ಈ ಸುದ್ದಿ ಗಾಂಧಿನಗರದಲ್ಲಿ ಸಂಚಲನ ಮೂಡಿಸಿದೆ.

‘ಅಯೋಗ್ಯ’ ಚಿತ್ರದ ನಿರ್ದೇಶಕ ಮಹೇಶ್ ಕುಮಾರ್ ಅವರೇ ‘ಅಯೋಗ್ಯ 2’ ಚಿತ್ರವನ್ನೂ ನಿರ್ದೇಶಿಸುತ್ತಿದ್ದು, ಸತೀಶ್ ನಿನಾಸಂ ಹಾಗೂ ರಚಿತಾ ರಾಮ್ ಜೋಡಿ ಮತ್ತೊಮ್ಮೆ ಪರದೆಯ ಮೇಲೆ ಮೋಡಿ ಮಾಡಲು ಸಜ್ಜಾಗಿದೆ. ಆಡಿಯೋ ಹಾಡಿನ ಹಕ್ಕುಗಳ ಮಾರಾಟದ ಬಗ್ಗೆ ವಿಡಿಯೋ ಮಾಡಿ ಪೋಸ್ಟ್ ಮಾಡಲಾಗಿದೆ.

ಇದನ್ನೂ ಓದಿ: ‘ಅಯೋಗ್ಯ 2’ ಸಿನಿಮಾಗೆ ಮುಹೂರ್ತ; ಸತೀಶ್, ರಚಿತಾ ಚಿತ್ರಕ್ಕೆ ಅಶ್ವಿನಿ ಹಾರೈಕೆ

ನಿರ್ಮಾಪಕ ಎಂ. ಮುನೇಗೌಡ ಅವರು ಈ ಚಿತ್ರವನ್ನು ಅದ್ಧೂರಿಯಾಗಿ ನಿರ್ಮಿಸುತ್ತಿದ್ದು, ಮಳೆಗಾಲದಲ್ಲಿ ಸಿನಿಮಾವನ್ನು ತೆರೆಗೆ ತರಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ. ಮೊದಲ ಭಾಗದ ಹಾಡುಗಳು ಸೂಪರ್ ಹಿಟ್ ಆಗಿದ್ದರಿಂದ, ಎರಡನೇ ಭಾಗದ ಮ್ಯೂಸಿಕ್ ಮೇಲೂ ನಿರೀಕ್ಷೆ ಇದೆ. ಈ ಚಿತ್ರಕ್ಕೆ ಅರ್ಜುನ್ ಜನ್ಯ ಅವರೇ ಸಂಗೀತ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ