AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​-ರಾಧಿಕಾ ಪಂಡಿತ್​ ಪುತ್ರಿ ಆಯ್ರಾ ಹುಟ್ಟುಹಬ್ಬ; 3ನೇ ವರ್ಷದ ಜನ್ಮದಿನ ಆಚರಿಸಿಕೊಂಡ ಸ್ಟಾರ್​ ಕಿಡ್​

Ayra Yash Birthday: ‘ನಿನ್ನ ಕೈ ಹಿಡಿದುಕೊಳ್ಳಲು ಯಾವಾಗಲೂ ಇರುತ್ತೇನೆ. ಹ್ಯಾಪಿ ಬರ್ತ್​ಡೇ ಏಂಜಲ್​’ ಎಂದು ಪುತ್ರಿ ಆಯ್ರಾ ಯಶ್​ ಜನ್ಮದಿನಕ್ಕೆ ರಾಧಿಕಾ ಪಂಡಿತ್​ ಶುಭಾಶಯ ಕೋರಿದ್ದಾರೆ. ಮಗಳ ಮುದ್ದಾದ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ.

ಯಶ್​-ರಾಧಿಕಾ ಪಂಡಿತ್​ ಪುತ್ರಿ ಆಯ್ರಾ ಹುಟ್ಟುಹಬ್ಬ; 3ನೇ ವರ್ಷದ ಜನ್ಮದಿನ ಆಚರಿಸಿಕೊಂಡ ಸ್ಟಾರ್​ ಕಿಡ್​
ಆಯ್ರಾ ಯಶ್, ರಾಧಿಕಾ ಪಂಡಿತ್, ಯಶ್
TV9 Web
| Edited By: |

Updated on: Dec 02, 2021 | 2:02 PM

Share

‘ರಾಕಿಂಗ್​ ಸ್ಟಾರ್​’ ಯಶ್​ (Yash)  ಮತ್ತು ರಾಧಿಕಾ ಪಂಡಿತ್​ (Radhika Pandit) ದಂಪತಿಯ ಪುತ್ರಿ ಆಯ್ರಾ ಯಶ್​ಗೆ (Ayra Yash) ಇಂದು (ಡಿ.2) ಜನ್ಮದಿನದ ಸಂಭ್ರಮ. ಮೂರನೇ ವರ್ಷದ ಹುಟ್ಟುಹಬ್ಬವನ್ನು (Ayra Yash Birthday) ಆಚರಿಸಲಾಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಈಗಾಗಲೇ ಆಯ್ರಾ ತುಂಬ ಫೇಮಸ್​ ಆಗಿದ್ದಾಳೆ. ಆಕೆಯ ಫೋಟೋಗಳು ಸಖತ್​ ವೈರಲ್​ ಆಗುತ್ತವೆ. ರಾಧಿಕಾ ಪಂಡಿತ್​ ಅವರು ಆಗಾಗ ಮಕ್ಕಳ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಹುಟ್ಟುಹಬ್ಬದ ಪ್ರಯುಕ್ತ ಮಗಳ ಜತೆ ಇರುವ ಫೋಟೋವನ್ನು ರಾಧಿಕಾ ಪಂಡಿತ್​ ಇಂದು ಪೋಸ್ಟ್​ ಮಾಡಿದ್ದಾರೆ. ಅದರ ಜತೆಗೆ ಅವರು ಬರೆದುಕೊಂಡಿರುವ ಕ್ಯಾಪ್ಷನ್​ ಗಮನ ಸೆಳೆಯುತ್ತಿದೆ. ‘ನಿನ್ನ ಕೈ ಹಿಡಿದುಕೊಳ್ಳಲು ಯಾವಾಗಲೂ ಇರುತ್ತೇನೆ. ಹ್ಯಾಪಿ ಬರ್ತ್​ಡೇ ಏಂಜಲ್​. ಆಯ್ರಾಗೆ ಇಂದು ಮೂರು ವರ್ಷ ಆಯ್ತು. ಎಷ್ಟು ಬೇಗ ಸಮಯ ಕಳೆಯುತ್ತದೆ’ ಎಂದು ರಾಧಿಕಾ ಪಂಡಿತ್​ ಬರೆದುಕೊಂಡಿದ್ದಾರೆ.

ಮಗಳು ಆಯ್ರಾ ಹಾಗೂ ಮಗ ಯಥರ್ವ್​ ಯಶ್​ ಆರೈಕೆಯಲ್ಲಿ ​ರಾಧಿಕಾ ಪಂಡಿತ್ ಬ್ಯುಸಿ ಆಗಿದ್ದಾರೆ. ಸದ್ಯ ಅವರು ಯಾವುದೇ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಸಂಸಾರದ ಕಡೆಗೆ ರಾಧಿಕಾ ಹೆಚ್ಚು ಗಮನ ನೀಡುತ್ತಿದ್ದಾರೆ. ಆದಷ್ಟು ಬೇಗ ಅವರು ನಟನೆಗೆ ಮರಳಲಿ ಎಂದು ಫ್ಯಾನ್ಸ್​ ಅಪೇಕ್ಷಿಸುತ್ತಿದ್ದಾರೆ. ಒಳ್ಳೆಯ ಕಥೆ ಮತ್ತು ಪಾತ್ರ ಸಿಕ್ಕರೆ ರಾಧಿಕಾ ಶೀಘ್ರವೇ ಖಂಡಿತ ಕಮ್​ಬ್ಯಾಕ್​ ಮಾಡಲಿದ್ದಾರೆ.

ಆಯ್ರಾ ತುಂಬ ಚೂಟಿ ಇದ್ದಾಳೆ. ಅವಳನ್ನು ಕಂಡರೆ ಯಶ್​-ರಾಧಿಕಾ ಪಂಡಿತ್​ ಅಭಿಮಾನಿಗಳಿಗೆ ಸಖತ್​ ಇಷ್ಟ. ಸೋಶಿಯಲ್​​ ಮೀಡಿಯಾದಲ್ಲಿ ರಾಧಿಕಾ ಹಂಚಿಕೊಳ್ಳುವ ಫೋಟೋಗಳಿಗೆ ಫ್ಯಾನ್ಸ್​ ಮೆಚ್ಚುಗೆ ಸೂಚಿಸುತ್ತಾರೆ. ಯಶ್​ ಕೂಡ ಮಕ್ಕಳ ಫೋಟೋ ಮತ್ತು ವಿಡಿಯೋಗಳನ್ನು ಆಗಾಗ ಶೇರ್​ ಮಾಡಿಕೊಳ್ಳುತ್ತಾರೆ. ಸದ್ಯ ಅವರು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಕೊನೇ ಹಂತದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. 2022ರ ಏಪ್ರಿಲ್​ 14ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಶೀಘ್ರದಲ್ಲೇ ಪ್ರಚಾರ ಕಾರ್ಯ ಆರಂಭ ಆಗಲಿದೆ.

ಇದನ್ನೂ ಓದಿ:

ಯಶ್​ ನಡೆದುಕೊಂಡ ರೀತಿ ನನಗೆ ಇಷ್ಟವಾಯಿತು, ನಾನು ಅವರ​ ಬಳಿ ಕ್ಷಮೆ ಕೇಳಿದೆ; ಆಮಿರ್​ ಖಾನ್​

ಸ್ವಿಮ್ಮಿಂಗ್​​ಪೂಲ್​ನಲ್ಲಿ ಆಯ್ರಾ, ಯಥರ್ವ್​​; ಕ್ಯೂಟ್​ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್​

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು