AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕ್ರೆಬೈಲು ಆನೆ ಮರಿಗೆ ಪುನೀತ್​ ಹೆಸರು; ವನ್ಯಜೀವಿಗಳ ಬಗ್ಗೆ ಅಪ್ಪುಗೆ ಇತ್ತು ವಿಶೇಷ ಕಾಳಜಿ

Puneeth Rajkumar: ವನ್ಯಜೀವಿ ಸಂಬಂಧಿತ ಸಾಕ್ಷ್ಯಚಿತ್ರದ ಚಿತ್ರೀಕರಣಕ್ಕಾಗಿ ಕೆಲ ತಿಂಗಳ ಹಿಂದೆಯಷ್ಟೇ ಸಕ್ರೆಬೈಲು ಆನೆ ಬಿಡಾರಕ್ಕೆ ಪುನೀತ್​ ರಾಜ್​ಕುಮಾರ್​ ಭೇಟಿ ನೀಡಿದ್ದರು. ಈ ವೇಳೆ ಮರಿಯಾನೆ ಕಂಡು ಖುಷಿಯಿಂದ ಅವರು ಮುದ್ದಾಡಿದ್ದರು.

ಸಕ್ರೆಬೈಲು ಆನೆ ಮರಿಗೆ ಪುನೀತ್​ ಹೆಸರು; ವನ್ಯಜೀವಿಗಳ ಬಗ್ಗೆ ಅಪ್ಪುಗೆ ಇತ್ತು ವಿಶೇಷ ಕಾಳಜಿ
ಸಕ್ರೆಬೈಲು ಆನೆ ಬಿಡಾರಕ್ಕೆ ಪುನೀತ್​ ರಾಜ್​ಕುಮಾರ್​ ಕೆಲ ತಿಂಗಳ ಹಿಂದೆ ಭೇಟಿ ನೀಡಿದ್ದರು
TV9 Web
| Edited By: |

Updated on: Nov 11, 2021 | 9:19 AM

Share

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರು ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದರು. ಆದರೆ ಅವುಗಳನ್ನು ಅವರು ಎಂದಿಗೂ ಪ್ರಚಾರಕ್ಕಾಗಿ ಬಳಸಿಕೊಂಡವರಲ್ಲ. ವನ್ಯಜೀವಿಗಳ ಬಗ್ಗೆಯೂ ಅವರಿಗೆ ಅಪಾರವಾದ ಪ್ರೀತಿ ಇತ್ತು. ಅರಣ್ಯದ ಮೇಲೆ ಕಾಳಜಿ ಇತ್ತು. ಹಾಗಾಗಿ ಅವರಿಗೆ ಗೌರವ ಸಲ್ಲಿಸಲು ಸಕ್ರೆಬೈಲು ಆನೆ ಬಿಡಾರದ (Sakrebailu Elephant Training Camp) ಆನೆ ಮರಿಗೆ ಪುನೀತ್​ ರಾಜ್​ಕುಮಾರ್​ ಎಂದು ಹೆಸರಿಡಲು ನಿರ್ಧಾರ ಮಾಡಲಾಗಿದೆ. ಇದು ಅಪ್ಪು ಅಭಿಮಾನಿಗಳಿಗೆ ಖುಷಿ ನೀಡಿದೆ. ಜನರು ಹಲವು ರೀತಿಯಲ್ಲಿ ಪುನೀತ್​ ಮೇಲಿನ ಅಭಿಮಾನವನ್ನು ವ್ಯಕ್ತಪಡಿಸುತ್ತಿದ್ದಾರೆ. ಈಗ ಆನೆ ಮರಿಗೆ ಪುನೀತ್​ ಹೆಸರಿಡುವ ಮೂಲಕ ನಮನ ಸಲ್ಲಿಸಲಾಗಿದೆ. ವಿಶೇಷ ಎಂದರೆ ಇದು ಸ್ವತಃ ಪುನೀತ್​ ರಾಜ್​ಕುಮಾರ್​ ಅವರೇ ಮುದ್ದಾಡಿದ್ದ ಆನೆ ಮರಿ. ಅರಣ್ಯ ಇಲಾಖೆಯಿಂದ (Forest Department) ಪುನೀತ್​ಗೆ ವಿಶೇಷ ರೀತಿಯಲ್ಲಿ ಗೌರವ ಸಲ್ಲಿಕೆ ಆಗುತ್ತಿದೆ.

ಶಿವಮೊಗ್ಗದ ಗಾಜನೂರು ಸಮೀಪದ ಸಕ್ರೆಬೈಲು ಆನೆ ಬಿಡಾರದ ನೇತ್ರಾ ಆನೆಗೆ ಕಳೆದ ಎರಡು ವರ್ಷದ ಹಿಂದೆ ಗಂಡು ಮರಿಯಾನೆ ಜನಿಸಿತ್ತು. ಕೆಲ ತಿಂಗಳ ಹಿಂದೆಯಷ್ಟೇ ಸಕ್ರೆಬೈಲು ಆನೆ ಬಿಡಾರಕ್ಕೆ ಪುನೀತ್​ ಭೇಟಿ ನೀಡಿದ್ದರು. ವನ್ಯಜೀವಿ ಸಂಬಂಧಿತ ಸಾಕ್ಷ್ಯಚಿತ್ರದ ಚಿತ್ರೀಕರಣದ ಸಲುವಾಗಿ ಅವರು ಸಕ್ರೆಬೈಲಿಗೆ ಬಂದಿದ್ದರು. ಈ ವೇಳೆ ಮರಿಯಾನೆ ಕಂಡು ಖುಷಿಯಿಂದ ಅವರು ಮುದ್ದಾಡಿದ್ದರು.

ಈಗ ಮರಿ ಆನೆಯನ್ನು ತಾಯಿಯಿಂದ ಬೇರ್ಪಡಿಸುವ ಪ್ರಕ್ರಿಯೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಅದಕ್ಕೆ ಪುನೀತ್​ ಎಂದು ಹೆಸರಿಡಲಾಗಿದೆ. ಅಪ್ಪು ಹೆಸರನ್ನು ಶಾಶ್ವತವಾಗಿಸಲು ಜನರು ಅನೇಕ ಕೆಲಸ ಮಾಡುತ್ತಿದ್ದಾರೆ. ರಸ್ತೆ, ವೃತ್ತ, ಮೈದಾನ, ಕ್ರೀಡಾಂಗಣ, ಪಾರ್ಕ್​​ಗಳಿಗೆ ಪುನೀತ್​ ರಾಜ್​ಕುಮಾರ್​ ಎಂದು ಹೆಸರು ಇಡಲಾಗುತ್ತಿದೆ. ಬೆಂಗಳೂರಿನ ವೆಸ್ಟ್​ ಆಫ್​ ಕಾರ್ಡ್​ ರೋಡ್​, ಬಳ್ಳಾರಿ ರಸ್ತೆಗೂ ಪುನೀತ್ ಹೆಸರು ಇಡಬೇಕು ಎಂಬ ಬಗ್ಗೆ ಮನವಿ ಬಂದಿದೆ. ಈ ಕುರಿತು ಇತ್ತೀಚೆಗೆ ಬಿಬಿಎಂಪಿ ಆಯುಕ್ತರು ಕೂಡ ಪ್ರತಿಕ್ರಿಯೆ ನೀಡಿದ್ದರು.

‘ನಮಗೆ ನೇರವಾಗಿ ಯಾವುದೇ ಮನವಿ ಬಂದಿಲ್ಲ. ಆದರೆ ಮಾಧ್ಯಮಗಳಿಂದ ಈ ಬಗ್ಗೆ ಮಾಹಿತಿ ತಿಳಿದುಕೊಂಡಿದ್ದೇನೆ. ಚರ್ಚೆ ಆಗುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಅಂತಿಮವಾಗಿ ರಾಜ್ಯ ಸರ್ಕಾರ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು. ಜನರ ಭಾವನೆಗಳನ್ನು ಗಮನದಲ್ಲಿ ಇಟ್ಟುಕೊಂಡು ಸರ್ಕಾರದ ಜೊತೆ ನಾವು ಚರ್ಚಿಸುತ್ತೇವೆ. ಶೀಘ್ರವೇ ಈ ಬಗ್ಗೆ ಒಂದು ನಿರ್ಧಾರ ತೆಗೆದುಕೊಳ್ಳಲಾಗುವುದು ಅಂತ ನಾನು ಭಾವಿಸುತ್ತೇನೆ’ ಎಂದು ಗೌರವ್​ ಗುಪ್ತಾ ಹೇಳಿದ್ದರು.

ಇದನ್ನೂ ಓದಿ:

ಪುನೀತ್​ ಸಾವಿನಲ್ಲೂ ಲಾಭ ಮಾಡಲು ಪ್ರಯತ್ನಿಸಿದ್ರಾ ರಜನಿಕಾಂತ್​? ಸಿಟ್ಟಾದ ಜನರಿಂದ ಕಟು ಟೀಕೆ

‘ಅಪ್ಪು ಸರ್​ ವಿಚಾರದಲ್ಲಿ ಮರಣ ಎಂಬ ಪದ ಬಳಸೋಕೆ ನಾನು ಇಷ್ಟಪಡಲ್ಲ’: ರಚಿತಾ ರಾಮ್​​

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ