Sri Murali: ಶೂಟಿಂಗ್ ವೇಳೆ ಪೆಟ್ಟು ಮಾಡಿಕೊಂಡ ಶ್ರೀಮುರಳಿಗೆ ಶಸ್ತ್ರ ಚಿಕಿತ್ಸೆ; 3 ತಿಂಗಳು ಡ್ಯಾನ್ಸ್​, ಫೈಟ್​ ಕಷ್ಟ

Sri Murali surgery | Bagheera: ಶ್ರೀಮುರಳಿ ಅವರಿಗೆ ಇಂದು (ಜ.16) ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಆಸ್ಪತ್ರೆಯಲ್ಲೇ ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ.

Sri Murali: ಶೂಟಿಂಗ್ ವೇಳೆ ಪೆಟ್ಟು ಮಾಡಿಕೊಂಡ ಶ್ರೀಮುರಳಿಗೆ ಶಸ್ತ್ರ ಚಿಕಿತ್ಸೆ; 3 ತಿಂಗಳು ಡ್ಯಾನ್ಸ್​, ಫೈಟ್​ ಕಷ್ಟ
ಶ್ರೀಮುರಳಿ
Follow us
TV9 Web
| Updated By: ಮದನ್​ ಕುಮಾರ್​

Updated on: Jan 16, 2023 | 8:36 PM

ನಟ ‘ರೋರಿಂಗ್​ ಸ್ಟಾರ್​’ ಶ್ರೀಮುರಳಿ (Sri Murali) ಅವರ ಅಭಿಮಾನಿಗಳಿಗೆ ಇದು ಬ್ಯಾಡ್​ ನ್ಯೂಸ್​. ಅವರು ನಟಿಸುತ್ತಿರುವ ‘ಬಘೀರ’ ಸಿನಿಮಾದ (Bagheera Movie) ಕೆಲಸಗಳು ಇನ್ನಷ್ಟು ವಿಳಂಬ ಆಗುವ ಸಾಧ್ಯತೆ ದಟ್ಟವಾಗಿದೆ. ಇತ್ತೀಚೆಗೆ ಈ ಚಿತ್ರದ ಶೂಟಿಂಗ್​ ವೇಳೆ ಶ್ರೀಮುರಳಿ ಅವರ ಕಾಲಿಗೆ ಪೆಟ್ಟಾಗಿತ್ತು. ಅದಕ್ಕೆ ಅವರೀಗ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಇನ್ನು ಮೂರು ತಿಂಗಳುಗಳ ಕಾಲ ಅವರು ವಿಶ್ರಾಂತಿ ಪಡೆಯಬೇಕಿದೆ. ಅಲ್ಲಿಯವರೆಗೂ ಅವರು ಡ್ಯಾನ್ಸ್​ ಮತ್ತು ಫೈಟ್​ ಮಾಡುವುದು ಕಷ್ಟ ಎಂಬ ಮಾಹಿತಿ ಲಭ್ಯವಾಗಿದೆ. ಆದಷ್ಟು ಬೇಗ ಶ್ರೀಮುರಳಿ ಅವರು ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶ್ರೀಮುರಳಿಗೆ ಸರ್ಜರಿ:

ಬಹುನಿರೀಕ್ಷಿತ ‘ಬಘೀರ’ ಸಿನಿಮಾಗೆ ಶ್ರೀಮುರಳಿ ಹೀರೋ. ದೊಡ್ಡ ಬಜೆಟ್​ನಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಈ ಸಿನಿಮಾಗೆ ಬಿರುಸಿನ ಶೂಟಿಂಗ್​ ನಡೆಯುತ್ತಿತ್ತು. ಆದರೆ ಈಗ ಶ್ರೀಮುರಳಿ ಅವರು ಪೆಟ್ಟು ಮಾಡಿಕೊಂಡಿರುವುದರಿಂದ ಕೆಲಸಗಳು ವಿಳಂಬ ಆಗುತ್ತಿವೆ. ಫೈಟಿಂಗ್​ ದೃಶ್ಯದ ವೇಳೆ ಪೆಟ್ಟು ಮಾಡಿಕೊಂಡಿದ್ದ ಶ್ರೀಮುರಳಿ ಅವರು ಬೆಂಗಳೂರಿನ ವಿಕ್ರಮ್​ ಆಸ್ಪತ್ರೆಗೆ ದಾಖಲಾದರು. ಡಾ. ಶಂಕರ್​ ಅವರು ಇಂದು (ಜ.16) ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ.

ಎರಡು ದಿನ ಆಸ್ಪತ್ರೆಯಲ್ಲೇ ವಿಶ್ರಾಂತಿ:

ಶ್ರೀಮುರಳಿ ಅವರು ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವುದರಿಂದ ಆಸ್ಪತ್ರೆಯಲ್ಲೇ ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ. ಆನಂತರ ವಾಕಿಂಗ್​ ಮತ್ತು ರನ್ನಿಂಗ್​ ಮಾಡಲು ಸಲಹೆ ನೀಡಿದ್ದಾರೆ. ಆದರೆ ಮೂರು ತಿಂಗಳವರೆಗೆ ಡ್ಯಾನ್ಸ್​ ಮತ್ತು ಫೈಟಿಂಗ್​ ದೃಶ್ಯಗಳಲ್ಲಿ ನಟಿಸದೇ ಇರುವುದು ಉತ್ತಮ ಎಂದು ವೈದ್ಯರು ತಿಳಿಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ಇದನ್ನೂ ಓದಿ
Image
Samyuktha Hegde: ‘ಕ್ರೀಮ್​’ ಸಿನಿಮಾ ಶೂಟಿಂಗ್​ ವೇಳೆ ಅವಘಡ; ನಟಿ ಸಂಯುಕ್ತಾ ಹೆಗಡೆಗೆ ಗಂಭೀರ ಪೆಟ್ಟು
Image
‘ಲವ್ ಯೂ ರಚ್ಚು’ ಶೂಟಿಂಗ್​ ಅವಘಡ ಪ್ರಕರಣ; ಮೂವರು ಆರೋಪಿಗಳಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ
Image
Shanvi Srivastava: ಸಿನಿಮಾ ಶೂಟಿಂಗ್ ವೇಳೆ ಅವಘಡ; ನಟಿ ಶಾನ್ವಿ ಕೈಗೆ ಪೆಟ್ಟು
Image
Upendra: ನಟ ಉಪೇಂದ್ರ ತಲೆಗೆ ರಾಡ್​ನಿಂದ ಪೆಟ್ಟು! ಕಬ್ಜ ಸಿನಿಮಾ ಶೂಟಿಂಗ್​ ವೇಳೆ ಅವಘಡ

ಇದನ್ನೂ ಓದಿ: ವಿಜಯ್ ರಾಘವೇಂದ್ರ ಹೊಸ ಸಿನಿಮಾಗೆ ಸಹೋದರ ಶ್ರೀಮುರಳಿ ಸಾಥ್

ಸಾಹಸ ದೃಶ್ಯಗಳ ಚಿತ್ರೀಕರಣದ ವೇಳೆ ಶ್ರೀಮುರಳಿ ಹಿಂದೇಟು ಹಾಕುವವರಲ್ಲ. ದೃಶ್ಯಗಳು ಸಾಧ್ಯವಾದಷ್ಟು ರಿಯಲ್​ ಆಗಿ ಮೂಡಿಬರಬೇಕು ಎಂಬ ಉದ್ದೇಶದಿಂದ ಅವರು ಪರಿಶ್ರಮ ಪಡುತ್ತಾರೆ. ಆದರೆ ಇಂಥ ಸನ್ನಿವೇಶಗಳ ಚಿತ್ರೀಕರಣದಲ್ಲಿ ಎಷ್ಟು ಜಾಗರೂಕತೆ ವಹಿಸಿದರೂ ಸಾಲದು. ಎಷ್ಟೇ ಹುಷಾರಾಗಿದ್ದರೂ ಕೂಡ ಕೆಲವೊಮ್ಮೆ ಅವಘಡಗಳು ಸಂಭವಿಸುತ್ತವೆ. ಈಗ ‘ಬಘೀರ’ ಚಿತ್ರದ ಸೆಟ್​ನಲ್ಲಿ ಶ್ರೀಮುರಳಿ ಅವರ ಮೊಣಕಾಲಿಗೆ ಪೆಟ್ಟಾಗಿರುವುದು ಬೇಸರದ ಸಂಗತಿ.

ಇದನ್ನೂ ಓದಿ: Sri Murali: ರೋರಿಂಗ್ ಸ್ಟಾರ್ ಶ್ರೀಮುರಳಿಗೆ ಸಿಂಹ ಗರ್ಜನೆ ತೋರಿಸಿದ ಪುಟಾಣಿ ಪೋರ!

ಹಲವು ಕಾರಣಗಳಿಂದಾಗಿ ‘ಬಘೀರ’ ಸಿನಿಮಾ ಮೇಲೆ ನಿರೀಕ್ಷೆ ಮೂಡಿದೆ. ಪ್ರತಿಷ್ಠಿತ ‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಸ್ಟಾರ್​ ಡೈರೆಕ್ಟರ್​ ಪ್ರಶಾಂತ್​ ನೀಲ್​ ಅವರು ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಪೋಸ್ಟರ್​ಗಳು ಮಾಸ್​ ಆಗಿವೆ. ಶೀರ್ಷಿಕೆ ಕೂಡ ಡಿಫರೆಂಟ್​ ಆಗಿದೆ. ಹಾಗಾಗಿ ಶ್ರೀಮುರಳಿ ಅಭಿಮಾನಿಗಳು ಈ ಚಿತ್ರದ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ