AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sri Murali: ಶ್ರೀಮುರಳಿ ಕಾಲಿಗೆ ಪೆಟ್ಟು: ‘ಬಘೀರ’ ಚಿತ್ರದ ಶೂಟಿಂಗ್​ ವೇಳೆ ಅವಘಡ; ಶೀಘ್ರದಲ್ಲೇ ಸರ್ಜರಿ

Bagheera Movie: ಬಿಗ್​ ಬಜೆಟ್​ನ ‘ಬಘೀರ’ ಸಿನಿಮಾದ ಚಿತ್ರೀಕರಣದ ವೇಳೆ ನಟ ಶ್ರೀಮುರಳಿ ಅವರ ಕಾಲಿಗೆ ಪೆಟ್ಟಾಗಿದೆ. ಸದ್ಯ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ.

Sri Murali: ಶ್ರೀಮುರಳಿ ಕಾಲಿಗೆ ಪೆಟ್ಟು: ‘ಬಘೀರ’ ಚಿತ್ರದ ಶೂಟಿಂಗ್​ ವೇಳೆ ಅವಘಡ; ಶೀಘ್ರದಲ್ಲೇ ಸರ್ಜರಿ
ಶ್ರೀಮುರಳಿ
TV9 Web
| Edited By: |

Updated on:Jan 12, 2023 | 10:33 PM

Share

ಕನ್ನಡ ಚಿತ್ರರಂಗದ ಖ್ಯಾತ ನಟ ಶ್ರೀಮುರಳಿ (Sri Murali) ಅವರು ಮೊಣಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ಬಹುನಿರೀಕ್ಷಿತ ‘ಬಘೀರ’ ಸಿನಿಮಾದ ಶೂಟಿಂಗ್​ ವೇಳೆ ಅವಘಡ ಸಂಭವಿಸಿದೆ. ಗುರುವಾರ (ಜ.12) ಸಾಹಸ ದೃಶ್ಯಗಳ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಅವರ ಕಾಲಿಗೆ ಪೆಟ್ಟಾಗಿದೆ ಎಂದು ತಿಳಿದುಬಂದಿದೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳಿಗೆ ಬೇಸರ ಆಗಿದೆ. ರಾಕ್​ಲೈನ್​ ಸ್ಟುಡಿಯೋದಲ್ಲಿ ‘ಬಘೀರ’ ಸಿನಿಮಾದ (Bagheera Movie) ಶೂಟಿಂಗ್​ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಸಣ್ಣ ಪೆಟ್ಟಾಗಿದೆ ಎನ್ನಲಾಗಿದೆ. ಎರಡು ದಿನಗಳ ನಂತರ ಶ್ರೀಮುರಳಿ ಅವರು ಸರ್ಜರಿ ಮಾಡಿಸಿಕೊಳ್ಳಲಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಈ ಬಗ್ಗೆ ಚಿತ್ರತಂಡದಿಂದ ಇನ್ನಷ್ಟೇ ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ.

ನಟ ಶ್ರೀಮುರಳಿ ಅವರು ಕನ್ನಡ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಬ್ಯಾಕ್​ ಟು ಬ್ಯಾಕ್​ ಆ್ಯಕ್ಷನ್ ಸಿನಿಮಾಗಳಲ್ಲಿ ಅವರು ತೊಡಗಿಕೊಳ್ಳುತ್ತಿದ್ದಾರೆ. ‘ಉಗ್ರಂ’ ಚಿತ್ರದ ಯಶಸ್ಸಿನ ಬಳಿಕ ಅವರ ಇಮೇಜ್​ ಬದಲಾಯಿತು. ಆ ನಂತರ ಅವರು ‘ರಥಾವರ’, ‘ಮಫ್ತಿ’, ‘ಭರಾಟೆ’, ‘ಮದಗಜ’ ಸಿನಿಮಾಗಳಲ್ಲಿ ನಟಿಸಿದರು. ಆ ನಂತರ ಸೆಟ್ಟೇರಿದ ಚಿತ್ರವೇ ‘ಬಘೀರ’. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ಇದನ್ನೂ ಓದಿ: ಶೂಟಿಂಗ್​ ವೇಳೆ ಅವಘಡ: ‘ಕಾಂತಾರ’ ಚಿತ್ರದ ವಕೀಲ ಪಾತ್ರದಾರಿ ನಟ ನವೀನ್ ಡಿ. ಪಡೀಲ್ ಆಸ್ಪತ್ರೆಗೆ ದಾಖಲು

ಇದನ್ನೂ ಓದಿ
Image
Samyuktha Hegde: ‘ಕ್ರೀಮ್​’ ಸಿನಿಮಾ ಶೂಟಿಂಗ್​ ವೇಳೆ ಅವಘಡ; ನಟಿ ಸಂಯುಕ್ತಾ ಹೆಗಡೆಗೆ ಗಂಭೀರ ಪೆಟ್ಟು
Image
‘ಲವ್ ಯೂ ರಚ್ಚು’ ಶೂಟಿಂಗ್​ ಅವಘಡ ಪ್ರಕರಣ; ಮೂವರು ಆರೋಪಿಗಳಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ
Image
Shanvi Srivastava: ಸಿನಿಮಾ ಶೂಟಿಂಗ್ ವೇಳೆ ಅವಘಡ; ನಟಿ ಶಾನ್ವಿ ಕೈಗೆ ಪೆಟ್ಟು
Image
Upendra: ನಟ ಉಪೇಂದ್ರ ತಲೆಗೆ ರಾಡ್​ನಿಂದ ಪೆಟ್ಟು! ಕಬ್ಜ ಸಿನಿಮಾ ಶೂಟಿಂಗ್​ ವೇಳೆ ಅವಘಡ

ಸಾಹಸ ದೃಶ್ಯಗಳ ಚಿತ್ರೀಕರಣದ ವೇಳೆ ಶ್ರೀಮುರಳಿ ಹಿಂದೇಟು ಹಾಕುವವರಲ್ಲ. ದೃಶ್ಯಗಳು ಸಾಧ್ಯವಾದಷ್ಟು ರಿಯಲ್​ ಆಗಿ ಮೂಡಿಬರಬೇಕು ಎಂಬ ಉದ್ದೇಶದಿಂದ ಅವರು ಪರಿಶ್ರಮ ಪಡುತ್ತಾರೆ. ಆದರೆ ಇಂಥ ಸನ್ನಿವೇಶಗಳ ಚಿತ್ರೀಕರಣದಲ್ಲಿ ಎಷ್ಟು ಜಾಗರೂಕತೆ ವಹಿಸಿದರೂ ಸಾಲದು. ಎಷ್ಟೇ ಹುಷಾರಾಗಿದ್ದರೂ ಕೂಡ ಕೆಲವೊಮ್ಮೆ ಅವಘಡಗಳು ಸಂಭವಿಸುತ್ತವೆ. ಈಗ ‘ಬಘೀರ’ ಚಿತ್ರದ ಸೆಟ್​ನಲ್ಲಿ ಶ್ರೀಮುರಳಿ ಅವರ ಮೊಣಕಾಲಿಗೆ ಪೆಟ್ಟಾಗಿರುವುದು ಬೇಸರದ ಸಂಗತಿ.

ಇದನ್ನೂ ಓದಿ: Stunt Master Death: ಸಿನಿಮಾ ಶೂಟಿಂಗ್​ ವೇಳೆ ಕ್ರೇನ್​ ಅವಘಡ; ಹಿರಿಯ ಸಾಹಸ ನಿರ್ದೇಶಕ ನಿಧನ

ಹಲವು ಕಾರಣಗಳಿಂದಾಗಿ ‘ಬಘೀರ’ ಸಿನಿಮಾ ಮೇಲೆ ನಿರೀಕ್ಷೆ ಮೂಡಿದೆ. ಪ್ರತಿಷ್ಠಿತ ‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಸ್ಟಾರ್​ ಡೈರೆಕ್ಟರ್​ ಪ್ರಶಾಂತ್​ ನೀಲ್​ ಅವರು ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಪೋಸ್ಟರ್​ಗಳು ಮಾಸ್​ ಆಗಿವೆ. ಶೀರ್ಷಿಕೆ ಕೂಡ ಡಿಫರೆಂಟ್​ ಆಗಿದೆ. ಹಾಗಾಗಿ ಶ್ರೀಮುರಳಿ ಅಭಿಮಾನಿಗಳು ಈ ಚಿತ್ರದ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಈ ಹಿಂದೆ ‘ಮದಗಜ’ ಸಿನಿಮಾದ ಶೂಟಿಂಗ್​ ಸಂದರ್ಭದಲ್ಲಿಯೂ ಶ್ರೀಮುರಳಿ ಅವರ ಕಾಲಿಗೆ ಪೆಟ್ಟಾಗಿತ್ತು. ಬಳಿಕ ಅವರು ಚೇತರಿಸಿಕೊಂಡು ಚಿತ್ರೀಕರಣ ಮುಂದುವರಿಸಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:33 pm, Thu, 12 January 23

ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ