ತೆಲುಗಿನಲ್ಲಿ ‘ಬಘೀರ’ ಚಿತ್ರ ಮಾಡಿದ ಕಲೆಕ್ಷನ್ ಎಷ್ಟು? ಸಿನಿಮಾದ ಒಟ್ಟಾರೆ ಗಳಿಕೆ ಬಗ್ಗೆ ಇಲ್ಲಿದೆ ವಿವರ 

‘ಬಘೀರ’ ಸಿನಿಮಾ ಅಕ್ಟೋಬರ್ 31ರಂದು ರಿಲೀಸ್ ಆಯಿತು. ಈ ಚಿತ್ರಕ್ಕೆ ಮೊದಲ ದಿನ 3.05 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಎರಡನೇ ದಿನ 3.3 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಮೂರನೇ ದಿನ 3.5 ಕೋಟಿ ರೂಪಾಯಿ ಆಗಿದೆ.

ತೆಲುಗಿನಲ್ಲಿ ‘ಬಘೀರ’ ಚಿತ್ರ ಮಾಡಿದ ಕಲೆಕ್ಷನ್ ಎಷ್ಟು? ಸಿನಿಮಾದ ಒಟ್ಟಾರೆ ಗಳಿಕೆ ಬಗ್ಗೆ ಇಲ್ಲಿದೆ ವಿವರ 
ಬಘೀರ
Follow us
|

Updated on: Nov 04, 2024 | 8:12 PM

ಹೊಂಬಾಳೆ ಫಿಲ್ಮ್ಸ್​ಗೆ ಮತ್ತೊಂದು ಯಶಸ್ಸಿನ ಗರಿ ಸಿಕ್ಕಿದೆ. ಅವರ ನಿರ್ಮಾಣದ ‘ಬಘೀರ’ ಸಿನಿಮಾ ಯಶಸ್ಸು ಕಂಡಿದೆ. ದೀಪಾವಳಿ ಪ್ರಯುಕ್ತ ರಿಲೀಸ್ ಆದ ಈ ಚಿತ್ರ ಭರ್ಜರಿ ಮೆಚ್ಚುಗೆ ಪಡೆಯುತ್ತಿದೆ. ಈ ಸಿನಿಮಾದ ಒಟ್ಟಾರೆ ಗಳಿಕೆ ಎಷ್ಟು? ಚಿತ್ರಕ್ಕೆ ತೆಲುಗಿನಿಂದ ಆದ ಕಲೆಕ್ಷನ್ ಎಷ್ಟು ಎಂಬ ಬಗ್ಗೆ ಈ ಸ್ಟೋರಿಯಲ್ಲಿದೆ ವಿವರ.

‘ಬಘೀರ’ ಸಿನಿಮಾ ಅಕ್ಟೋಬರ್ 31ರಂದು ರಿಲೀಸ್ ಆಯಿತು. ಈ ಚಿತ್ರಕ್ಕೆ ಮೊದಲ ದಿನ 3.05 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಎರಡನೇ ದಿನ 3.3 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಮೂರನೇ ದಿನ 3.5 ಕೋಟಿ ರೂಪಾಯಿ ಆಗಿದೆ. ನಾಲ್ಕನೇ ದಿನ 3.05 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಈ ಮೂಲಕ ಚಿತ್ರ ಪ್ರತಿ ದಿನ ಸರಾಸರಿ 3 ಕೋಟಿ ರೂಪಾಯಿ ಬಾಚಿಕೊಂಡಿದೆ.

‘ಬಘೀರ’ ಚಿತ್ರದ ಒಟ್ಟಾರೆ ಕಲೆಕ್ಷನ್ 12.9 ಕೋಟಿ ರೂಪಾಯಿ ಆಗಿದೆ. ಅಂದರೆ 13 ಕೋಟಿ ರೂಪಾಯಿ ಈ ಚಿತ್ರ ಗಳಿಕೆ ಮಾಡಿದೆ. ಈ ಪೈಕಿ ಕನ್ನಡದಲ್ಲಿ 11.5 ಕೋಟಿ ರೂಪಾಯಿ ಹಾಗೂ ತೆಲುಗಿನಲ್ಲಿ 1.4 ಕೋಟಿ ರೂಪಾಯಿನ ಚಿತ್ರ ಗಳಿಕೆ ಮಾಡಿದೆ. ಇದು ಸಾಧಾರಣ ಗಳಿಕೆಯೇ ಆದರೂ ಸದ್ಯದ ಪರಿಸ್ಥಿತಿಯಲ್ಲಿ ಉತ್ತಮ ಕಲೆಕ್ಷನ್ ಎನ್ನಬಹುದು.

ಸದ್ಯ ಕನ್ನಡದ ಯಾವ ಸಿನಿಮಾಗಳೂ ದೊಡ್ಡ ಮಟ್ಟದಲ್ಲಿ ಗೆಲುವು ಕಾಣುತ್ತಿಲ್ಲ ಎನ್ನುವ ಮಾತಿದೆ. ಕಳೆದ 10 ತಿಂಗಳಲ್ಲಿ ರಿಲೀಸ್ ಆಗಿ ಗೆದ್ದಿದ್ದು ಕೆಲವೇ ಕೆಲವು ಚಿತ್ರಗಳು. ಈಗ ‘ಬಘೀರ’ ಕೂಡ ಗೆಲುವಿನ ನಗೆ ಬೀರಿದೆ ಎನ್ನಬಹುದು. ಈ ಚಿತ್ರದಿಂದ ಶ್ರೀಮುರಳಿ ಗೆಲುವಿನ ನಗು ಬೀರಿದ್ದಾರೆ.

ಇದನ್ನೂ ಓದಿ: ಎರಡನೇ ದಿನಕ್ಕೆ ಹೆಚ್ಚಿತು ‘ಬಘೀರ’ನ ಅಬ್ಬರ; ಇಲ್ಲಿದೆ ಕಲೆಕ್ಷನ್ ವಿವರ

‘ಬಘೀರ’ ಚಿತ್ರಕ್ಕೆ ಡಾ.ಸೂರಿ ನಿರ್ದೇಶನ ಇದೆ. ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿದೆ. ಈ ಚಿತ್ರದಲ್ಲಿ ಶ್ರೀಮುರಳಿಗೆ ಜೊತೆಯಾಗಿ ರುಕ್ಮಿಣಿ ಅವರು ನಟಿಸಿದ್ದಾರೆ. ಪ್ರಕಾಶ್ ರಾಜ್, ಅಚ್ಯುತ್ ಕುಮಾರ್, ಗರುಡ ರಾಮ್ ಮೊದಲಾದವರು ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಡ್ರಮ್​ನಲ್ಲಿ ರಾಕೆಟ್ ಇಟ್ಟು ಪಟಾಕಿ ಸಿಡಿಸಿದ ಐಐಟಿ ವಿದ್ಯಾರ್ಥಿಗಳು
ಡ್ರಮ್​ನಲ್ಲಿ ರಾಕೆಟ್ ಇಟ್ಟು ಪಟಾಕಿ ಸಿಡಿಸಿದ ಐಐಟಿ ವಿದ್ಯಾರ್ಥಿಗಳು
ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಪಟಾಕಿ ಹೊಡೆಯುತ್ತಿದ್ದ ವ್ಯಕ್ತಿ ಸಾವು
ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಪಟಾಕಿ ಹೊಡೆಯುತ್ತಿದ್ದ ವ್ಯಕ್ತಿ ಸಾವು
ಚುನಾವಣೆಗೆ ಸಜ್ಜಾದ ಜಾರ್ಖಂಡ್​ನಲ್ಲಿ ಪ್ರಧಾನಿ ಮೋದಿ ಮೊದಲ ರ್ಯಾಲಿ
ಚುನಾವಣೆಗೆ ಸಜ್ಜಾದ ಜಾರ್ಖಂಡ್​ನಲ್ಲಿ ಪ್ರಧಾನಿ ಮೋದಿ ಮೊದಲ ರ್ಯಾಲಿ
ಲೋಕಾಯುಕ್ತ ನೋಟೀಸ್​​ನಿಂದ ಸಿಎಂ ಸಿದ್ದರಾಮಯ್ಯ ವಿಚಲಿತರಾದಂತೆ ಕಾಣುತ್ತಿದೆ!
ಲೋಕಾಯುಕ್ತ ನೋಟೀಸ್​​ನಿಂದ ಸಿಎಂ ಸಿದ್ದರಾಮಯ್ಯ ವಿಚಲಿತರಾದಂತೆ ಕಾಣುತ್ತಿದೆ!
ಜನರ ಕಷ್ಟ ಗೊತ್ತಿರುವ ಯೋಗೇಶ್ವರ್ ಚನ್ನಪಟ್ಟಣಕ್ಕೆ ರೆಡಿಮೇಡ್ ಗಂಡು: ಡಿಕೆಶಿ
ಜನರ ಕಷ್ಟ ಗೊತ್ತಿರುವ ಯೋಗೇಶ್ವರ್ ಚನ್ನಪಟ್ಟಣಕ್ಕೆ ರೆಡಿಮೇಡ್ ಗಂಡು: ಡಿಕೆಶಿ
ಆಗ್ರಾ ಬಳಿ ಮಿಗ್-29 ಫೈಟರ್ ಜೆಟ್ ಪತನ; ಪೈಲಟ್‌ಗಳು ಪಾರು
ಆಗ್ರಾ ಬಳಿ ಮಿಗ್-29 ಫೈಟರ್ ಜೆಟ್ ಪತನ; ಪೈಲಟ್‌ಗಳು ಪಾರು
ಆರತಿ ತಟ್ಟೆಗೆ ಹಾಕಲು ಮುಖಂಡನೊಬ್ಬ ಹಣ ನೀಡಿದರೂ ತೆಗೆದುಕೊಳ್ಳದ ನಿಖಿಲ್
ಆರತಿ ತಟ್ಟೆಗೆ ಹಾಕಲು ಮುಖಂಡನೊಬ್ಬ ಹಣ ನೀಡಿದರೂ ತೆಗೆದುಕೊಳ್ಳದ ನಿಖಿಲ್
ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದಾಗ ಒಂದು ಗುಂಪು ಅದ್ಯಾಕೆ ಗಲಾಟೆ ಮಾಡಿತೋ!
ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದಾಗ ಒಂದು ಗುಂಪು ಅದ್ಯಾಕೆ ಗಲಾಟೆ ಮಾಡಿತೋ!
ಟೀಂ ಇಂಡಿಯಾದ ಜಿಕೆ ಟೆಸ್ಟ್! ಯಾರು ಎಷ್ಟು ಬುದ್ಧಿವಂತರು ನೀವೇ ನೋಡಿ
ಟೀಂ ಇಂಡಿಯಾದ ಜಿಕೆ ಟೆಸ್ಟ್! ಯಾರು ಎಷ್ಟು ಬುದ್ಧಿವಂತರು ನೀವೇ ನೋಡಿ
ಜನಾರ್ಧನರೆಡ್ಡಿ ಪಕ್ಷಕ್ಕೆ ಸೇರ್ಪಡೆ ನಂತರ ಬಳ್ಳಾರಿ ಬಿಜೆಪಿಯಲ್ಲಿ ಲವಲವಿಕೆ
ಜನಾರ್ಧನರೆಡ್ಡಿ ಪಕ್ಷಕ್ಕೆ ಸೇರ್ಪಡೆ ನಂತರ ಬಳ್ಳಾರಿ ಬಿಜೆಪಿಯಲ್ಲಿ ಲವಲವಿಕೆ