AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮ್ಯಾಗೆ ಅಶ್ಲೀಲ ಕಮೆಂಟ್ ಮಾಡಿದ್ದ 7 ಆರೋಪಿಗಳಿಗೆ ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು

ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಮಾಡುವವರಿಗೆ ರಮ್ಯಾ ಅವರು ಕಾನೂನಿನ ಪಾಠ ಕಲಿಸಿದ್ದಾರೆ. ಅಶ್ಲೀಲ ಮೆಸೇಜ್ ಕಳಿಸಿದವರ ವಿರುದ್ಧ ರಮ್ಯಾ ದೂರು ನೀಡಿದ್ದರು. ಆ ಪೈಕಿ ಹಲವರನ್ನು ಬಂಧಿಸಲಾಗಿತ್ತು. ಈಗ 7 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಪ್ರಕರಣದ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ..

ರಮ್ಯಾಗೆ ಅಶ್ಲೀಲ ಕಮೆಂಟ್ ಮಾಡಿದ್ದ 7 ಆರೋಪಿಗಳಿಗೆ ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು
Ramya Divya Spandana
Ramesha M
| Edited By: |

Updated on: Oct 10, 2025 | 9:08 PM

Share

ಮಾಜಿ ಸಂಸದೆ, ಜನಪ್ರಿಯ ನಟಿ ರಮ್ಯಾ ದಿವ್ಯ ಸ್ಪಂದನಾ (Ramya Divya Spandana) ಅವರಿಗೆ ಅಶ್ಲೀಲ ಕಮೆಂಟ್ ಮಾಡಿದ್ದ ಆರೋಪಿಗಳನ್ನು ಬಂಧಿಸಲಾಗಿತ್ತು. ಈಗ 7 ಆರೋಪಿಗಳಿಗೆ ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಕೆ. ಪ್ರಮೋದ್, ಮಂಜುನಾಥ್, ರಾಜೇಶ್ ಸಿ.ವೈ, ಓಬಣ್ಣ ಟಿ, ಗಂಗಾಧರ್ ಕೆ.ಎಂ, ಚಿನ್ಮಯ್ ಶೆಟ್ಟಿಗೆ ಷರತ್ತುಬದ್ಧ ಜಾಮೀನು ಸಿಕ್ಕಿದೆ. ಮತ್ತೊಬ್ಬ ಆರೋಪಿ ವಿಕಾಸ್ ಬಿ.ಎ.ಗೆ ನಿರೀಕ್ಷಣಾ ಜಾಮೀನು ನೀಡಲಾಗಿದೆ. ಈಗಾಗಲೇ ಆರೋಪಪಟ್ಟಿ ದಾಖಲಾಗಿರುವ ಹಿನ್ನೆಲೆಯಲ್ಲಿ ನ್ಯಾ. ಶಿವಶಂಕರ್ ಅಮರಣ್ಣವರ್ ಅವರಿದ್ದ ಪೀಠದಿಂದ ಜಾಮೀನು (Bail) ಮಂಜೂರಾಗಿದೆ. ಒಂದು ಲಕ್ಷ ಬಾಂಡ್, ಒಬ್ಬರ ಶ್ಯೂರಿಟಿ ಒದಗಿಸುವಂತೆ ಷರತ್ತು ಹಾಕಲಾಗಿದೆ.

ನಟಿ ರಮ್ಯಾ ಅವರು ನಟನೆಯಿಂದ ದೂರ ಇದ್ದಾರೆ. ಹಾಗಿದ್ದರೂ ಚಿತ್ರರಂಗದ ನಂಟು ಉಳಿಸಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಸಕ್ರಿಯರಾಗಿದ್ದಾರೆ. ಸಮಾಜದ ಅನೇಕ ಆಗು-ಹೋಗುಗಳ ಬಗ್ಗೆ ಅವರು ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಾರೆ. ನಟ ದರ್ಶನ್ ಪ್ರಕರಣದ ಬಗ್ಗೆಯೂ ರಮ್ಯಾ ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿದ್ದರು. ಆಗ ದರ್ಶನ್ ಅಭಿಮಾನಿಗಳು ರಮ್ಯಾಗೆ ಅಶ್ಲೀಲವಾಗಿ ಕಮೆಂಟ್ ಮಾಡಿದ್ದರು.

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಹಾಗೂ ಇತರರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದ್ದು ಸೂಕ್ತವಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿತ್ತು. ಆಗ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ ಮೂಡುತ್ತಿದೆ ಎಂದು ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಅದು ದರ್ಶನ್ ಅಭಿಮಾನಿಗಳ ಕೋಪಕ್ಕೆ ಕಾರಣ ಆಗಿತ್ತು.

ರಮ್ಯಾ ಅವರ ಪೋಸ್ಟ್ ನೋಡಿದ ದರ್ಶನ್ ಅಭಿಮಾನಿಗಳು ಇನ್​ಸ್ಟಾಗ್ರಾಮ್​​ನಲ್ಲಿ ಅಸಭ್ಯವಾಗಿ, ಅಶ್ಲೀಲವಾಗಿ ಮೆಸೇಜ್ ಮಾಡಲು ಆರಂಭಿಸಿದ್ದರು. ಅಂಥವರ ಮೆಸೇಜ್​​ಗಳ ಸ್ಕ್ರೀನ್ ಶಾಟ್​​ಗಳನ್ನು ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡರು. ಅಲ್ಲದೇ ತಮಗೆ ಅಸಭ್ಯ, ಅಶ್ಲೀಲ ಕಮೆಂಟ್ ಮಾಡಿದವರ ವಿರುದ್ಧ ದೂರು ನೀಡಿದರು.

ಇದನ್ನೂ ಓದಿ: ರಮ್ಯಾ ಬಗ್ಗೆ ಅವಹೇಳನಾಕಾರಿ ಪೋಸ್ಟ್: ಆರೋಪಿಗಳ ಮೊಬೈಲ್​ FSLಗೆ ರವಾನೆ

40ಕ್ಕೂ ಅಧಿಕ ಸೋಶಿಯಲ್ ಮೀಡಿಯಾ ಖಾತೆಗಳ ವಿರುದ್ಧ ರಮ್ಯಾ ಅವರು ದೂರು ಸಲ್ಲಿಸಿದ್ದರು. ಆ ದೂರಿನ ಆಧಾರದ ಮೇಲೆ ಪೊಲೀಸರು ಕ್ರಮ ಕೈಗೊಂಡಿದ್ದರು. ಆ ಪೈಕಿ ಕೆಲವರನ್ನು ಬಂಧಿಸಲಾಯಿತು. ಈಗ 7 ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ರಮ್ಯಾ ದೂರು ನೀಡಿದ ಬಳಿಕ ಅವರ ಪೋಸ್ಟ್​​ಗಳಿಗೆ ಅಶ್ಲೀಲವಾಗಿ ಕಮೆಂಟ್ ಮಾಡುವವರ ಸಂಖ್ಯೆ ಕಡಿಮೆ ಆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್