ದಿ ಕೇರಳ ಸ್ಟೋರಿ ಸಿನಿಮಾ ವೀಕ್ಷಿಸಲು ಉಚಿತ ವ್ಯವಸ್ಥೆ ಮಾಡಿದ ಶಾಸಕ ಯತ್ನಾಳ್

Basanagouda Patil Yatnal: ದಿ ಕೇರಳ ಸ್ಟೋರಿ ಸಿನಿಮಾವನ್ನು ತಮ್ಮ ಕ್ಷೇತ್ರದ ಜನರಿಗೆ ಉಚಿತವಾಗಿ ತೋರಿಸುತ್ತಿದ್ದಾರೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್. ವಿಜಯಪುರದ ಅಪ್ಸರಾ ಚಿತ್ರಮಂದಿರದಲ್ಲಿ ಮುಂದಿನ ಮೂರು ದಿನಗಳ ಕಾಲ ಮಧ್ಯಾಹ್ನದ ಶೋಕ್ಕೆ ಪ್ರವೇಶ ಉಚಿತ.

ದಿ ಕೇರಳ ಸ್ಟೋರಿ ಸಿನಿಮಾ ವೀಕ್ಷಿಸಲು ಉಚಿತ ವ್ಯವಸ್ಥೆ ಮಾಡಿದ ಶಾಸಕ ಯತ್ನಾಳ್
ದಿ ಕೇರಳ ಸ್ಟೋರಿ
Follow us
ಮಂಜುನಾಥ ಸಿ.
|

Updated on: May 16, 2023 | 5:34 PM

ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal ) ಚುನಾವಣೆಯಲ್ಲಿ ಮತ್ತೊಮ್ಮೆ ವಿಜಯ ಸಾಧಿಸಿ ಶಾಸಕರಾಗಿದ್ದಾರೆ. ಬಾಗಲಕೋಟೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಯತ್ನಾಳ್ ಸಮೀತ ಸ್ಪರ್ಧಿ ಅಬ್ದುಲ್ ಹಮೀಜ್ ಖಾಜಾಸಾಬ್ ಮುಶ್ರಫ್ ಅವರ ಎದುರು ಜಯ ಸಾಧಿಸಿದ್ದಾರೆ. ಹಿಂದುತ್ವದ ಪ್ರಖರ ಪರಿಪಾದಕರಾಗಿರುವ ಯತ್ನಾಳ್ ಈ ಹಿಂದೆ ತಮ್ಮ ಮುಸ್ಲಿಂ ವಿರೋಧಿ ಹೇಳಿಕೆಗಳಿಂದ ಸುದ್ದಿಯಾಗಿದ್ದರು. ಇದೀಗ ಮತ್ತೆ ಚುನಾಯಿತರಾಗುತ್ತಿದ್ದಂತೆ ತಮ್ಮ ಕ್ಷೇತ್ರದ ಜನರಿಗೆ ಉಚಿತ ಸಿನಿಮಾ  (Movie) ಭಾಗ್ಯ ಕಲ್ಪಿಸಿದ್ದಾರೆ. ಆದರೆ ಷರತ್ತು ಅನ್ವಯ.

ಲವ್ ಜಿಹಾದ್ ವಿರುದ್ಧ ಸಿನಿಮಾ ಎನ್ನಲಾಗುತ್ತಿರುವ ದಿ ಕೇರಳ ಸ್ಟೋರಿ (The Kerala Story) ದೇಶದ ಹಲವು ರಾಜ್ಯಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಬಿಜೆಪಿ ಹಾಗೂ ಆರ್​ಎಸ್​ಎಸ್​ ಕಾರ್ಯಕರ್ತರಿಂದ ಸಿನಿಮಾಕ್ಕೆ ಭರಪೂರ ಬೆಂಬಲವೂ ವ್ಯಕ್ತವಾಗಿದೆ. ಈ ಸಿನಿಮಾಕ್ಕೆ ಉಚಿತ ಪ್ರವೇಶವನ್ನು ಬಸನಗೌಡ ಪಾಟೀಲ್ ಯತ್ನಾಳ್ ಕಲ್ಪಿಸಿದ್ದಾರೆ. ವಿಜಯಪುರದ ಅಪ್ಸರಾ ಚಿತ್ರಮಂದಿರದಲ್ಲಿ ದಿ ಕೇರಳ ಸ್ಟೋರಿ ಸಿನಿಮಾ ಪ್ರದರ್ಶನಗೊಳ್ಳುತ್ತಿದ್ದು, ಸಿನಿಮಾದ 12 ಗಂಟೆ ಶೋ ಅನ್ನು ನಗರದ ಜನರು ಉಚಿತವಾಗಿ ನೋಡಬಹುದಾಗಿದೆ. ಮೂರು ದಿನಗಳ ಕಾಲವಷ್ಟೆ ಈ ಉಚಿತ ಶೋ ಇರಲಿದೆ. ಅದೂ ಹಿಂದೂಗಳಿಗೆ ಮಾತ್ರ ಎನ್ನಲಾಗುತ್ತಿದೆ.

ಬಸನಗೌಡ ಪಾಟೀಲ್ ಯತ್ನಾಳ್, ಈ ಹಿಂದೆ ಬಿಡುಗಡೆ ಆಗಿದ್ದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾಕ್ಕೂ ಉಚಿತ ಪ್ರವೇಶ ಕಲ್ಪಿಸಿದ್ದರು. ಒಂದು ವಾರಗಳ ಕಾಲ ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಉಚಿತವಾಗಿ ಪ್ರದರ್ಶಿಸಿದ್ದರು ಯತ್ನಾಳ್. ಇದೀಗ ದಿ ಕೇರಳ ಸ್ಟೋರಿ ಸಿನಿಮಾಕ್ಕೂ ಇದೇ ವ್ಯವಸ್ಥೆ ಮಾಡಿದ್ದಾರೆ ಆದರೆ ಈ ಬಾರಿ ಮೂರು ದಿನ ಮೂರು ಶೋಗಳಿಗೆ ಮಾತ್ರವೇ ಈ ಉಚಿತ ಶೋ ಮೀಸಲಾಗಿರಲಿದೆ.

ಕರ್ನಾಟಕದ ಕೆಲವು ನಗರಗಳಲ್ಲಿ ದಿ ಕೇರಳ ಸ್ಟೋರಿ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಸಿನಿಮಾದ ಪರ ಪ್ರಚಾರವೂ ಜೋರಾಗಿದೆ. ಇದೀಗ ಕೊಲ್ಲೂರು ಮೂಕಾಂಬಿಕಾ ದೇವಾಲಯದ ಬಳಿಯೂ ಸಿನಿಮಾದ ಪ್ರಚಾರ ಮಾಡಲಾಗುತ್ತಿದೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಪ್ರತಿದಿನ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಾರೆ. ಅದರಲ್ಲೂ ಕೇರಳದಿಂದ ಅನೇಕರು ಬಂದು ದೇವಿಯ ದರ್ಶನ ಪಡೆಯುತ್ತಾರೆ. ಮಲಯಾಳಿಗಳನ್ನೇ ಉದ್ದೇಶಿಸಿ ಈ ಬ್ಯಾನರ್​ಗಳನ್ನು ಬರೆಸಲಾಗಿದೆ. ‘ನಿಮ್ಮ ಮುಂದಿನ ಜನಾಂಗ ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಬರಬೇಕೆಂದರೆ ಕೇರಳ ಸ್ಟೋರಿ ನೋಡಿ’ ಎಂದು ಇದರಲ್ಲಿ ಬರೆಯಲಾಗಿದೆ.

ದಿ ಕೇರಳ ಸ್ಟೋರಿ ಸಿನಿಮಾವು ಕೇರಳದಲ್ಲಿ ಆಗಿದೆ ಎನ್ನಲಾದ ಲವ್ ಜಿಹಾದ್ ಕುರಿತಾದ ಕತೆಯನ್ನು ಒಳಗೊಂಡಿದೆ. ಸಿನಿಮಾ ಬಿಡುಗಡೆ ಆಗುವ ಮುನ್ನವೇ ವಿವಾದಗಳನ್ನು ಎಬ್ಬಿಸಿತ್ತು. ಈ ಸಿನಿಮಾವು ಕೇರಳದ ಘನತೆಗೆ ಮಸಿ ಬಳಿಯುವ ಯತ್ನ ಎಂದು ಆಡಳಿತ ಪಕ್ಷ ಹಾಗೂ ಕೆಲವು ವಿಪಕ್ಷಗಳು ಆರೋಪಿಸಿದ್ದವು. ಸಿನಿಮಾದ ಬಿಡುಗಡೆ ತಡೆಯಲು ಯತ್ನಗಳೂ ನಡೆದವು. ಆದರೆ ಅದು ಸಾಧ್ಯವಾಗಲಿಲ್ಲ. ಆ ಬಳಿಕ ತಮಿಳುನಾಡು ಹಾಗೂ ಪಶ್ಚಿಮ ಬಂಗಾಳಗಳಲ್ಲಿ ಸಿನಿಮಾದ ಬಿಡುಗಡೆಯನ್ನು ತಡೆ ಹಿಡಿಯಲಾಯಿತು.

ಏನೇ ವಿರೋದಗಳು ವ್ಯಕ್ತವಾದರೂ ಬಾಕ್ಸ್ ಆಫೀಸ್​ನಲ್ಲಿ ದಿ ಕೇರಳ ಸ್ಟೋರಿ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ವರೆಗೆ ಭಾರತದಾದ್ಯಂತ 110 ಕೋಟಿ ಹಣವನ್ನು ದಿ ಕೇರಳ ಸ್ಟೋರಿ ಸಿನಿಮಾ ಕಲೆಕ್ಷನ್ ಮಾಡಿದೆ. ಸೋಮವಾರ (ಮೇ 15) ರಂದು ಸಹ 10 ಕೋಟಿಗೂ ಹೆಚ್ಚು ಹಣವನ್ನು ಈ ಸಿನಿಮಾ ಗಳಿಕೆ ಮಾಡಿದೆ. ಉತ್ತರ ಪ್ರದೇಶ ಹಾಗೂ ಮಧ್ಯ ಪ್ರದೇಶಗಳಲ್ಲಿ ಈ ಸಿನಿಮಾಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ