ದರ್ಶನ್ ಮತ್ತು ಗ್ಯಾಂಗ್​ಗೆ ಮತ್ತೆ ಜೈಲು ಸೇರುವ ಭಯ; ಜ.24ಕ್ಕೆ ಸುಪ್ರೀಂನಲ್ಲಿ ಅರ್ಜಿ ವಿಚಾರಣೆ

ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದ ಆರೋಪಿ ದರ್ಶನ್ ಅವರು ಪೂರ್ಣ ಪ್ರಮಾಣದ ಜಾಮೀನು ಪಡೆದು ಕೋರ್ಟ್​ನಿಂದ ಹೊರ ಬಂದಿದ್ದಾರೆ. ಅವರ ಜೊತೆ ಆಪ್ತೆ ಪವಿತ್ರಾ ಗೌಡ, ಮ್ಯಾನೇಜರ್ ನಾಗರಾಜು ಸೇರಿ ಅನೇಕರಿಗೆ ಜಾಮೀನು ಸಿಕ್ಕಿದೆ. ದರ್ಶನ್ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಈ ಅರ್ಜಿ ವಿಚಾರಣೆ ಜನವರಿ 24ರಂದು ನಡೆಯಲಿದೆ.

ದರ್ಶನ್ ಮತ್ತು ಗ್ಯಾಂಗ್​ಗೆ ಮತ್ತೆ ಜೈಲು ಸೇರುವ ಭಯ; ಜ.24ಕ್ಕೆ ಸುಪ್ರೀಂನಲ್ಲಿ ಅರ್ಜಿ ವಿಚಾರಣೆ
ದರ್ಶನ್
Follow us
ರಾಚಪ್ಪಾಜಿ ನಾಯ್ಕ್
| Updated By: ರಾಜೇಶ್ ದುಗ್ಗುಮನೆ

Updated on:Jan 17, 2025 | 10:45 AM

ರೇಣುಕಾ ಸ್ವಾಮಿ ಕೊಲೆ ಕೇಸ್​ ಆರೋಪಿ ದರ್ಶನ್ ಹಾಗೂ ಗ್ಯಾಂಗ್​ಗೆ ಜಾಮೀನು ಸಿಕ್ಕ ವಿಚಾರ ಈಗ ಸುಪ್ರೀಂ ಕೋರ್ಟ್ ಅಂಗಳದಲ್ಲಿ ಇದೆ. ದರ್ಶನ್ ಜಾಮೀನು ಅರ್ಜಿ ಪ್ರಶ್ನಿಸಿ ಪೊಲೀಸರು ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿ ವಿಚಾರಣೆ ಜನವರಿ 24ರಂದು ನಡೆಯಲಿದೆ. ಒಂದೊಮ್ಮೆ ಜಾಮೀನು ರದ್ದಾದರೆ ದರ್ಶನ್ ಮತ್ತೆ ಜೈಲು ಸೇರಬೇಕಾಗುತ್ತದೆ.

ಜೂನ್ 11ರಂದು ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದರು. ಆ ಬಳಿಕ ಹಲವು ತಿಂಗಳು ಜೈಲಿನಲ್ಲಿ ಇದ್ದರು. ಕೆಳಹಂತದ ಕೋರ್ಟ್​​ನಲ್ಲಿ ಅವರ ಜಾಮೀನು ಅರ್ಜಿ ವಜಾ ಆಯಿತು. ಆ ಬಳಿಕ ಹೈಕೋರ್ಟ್​ನಲ್ಲಿ ಅನಾರೋಗ್ಯದ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದ ಅವರು ನಂತರ ಪೂರ್ಣ ಪ್ರಮಾಣದ ಜಾಮೀನು ಪಡೆದುಕೊಂಡರು. ದರ್ಶನ್ ಜೊತೆ ಪವಿತ್ರಾಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್, ಜಗದೀಶ್ ಮತ್ತು ಪ್ರದೋಶ್​​​ ಕೂಡ ಜಾಮೀನು ಪಡೆದಿದ್ದಾರೆ. ಇದನ್ನು ಸುಪ್ರೀಂನಲ್ಲಿ ಪ್ರಶ್ನಿಸಲಾಗಿದೆ.

ಸುಪ್ರೀಂಕೋರ್ಟ್​ನಲ್ಲಿ ಜ.24ರಂದು ಅರ್ಜಿ ವಿಚಾರಣೆ ನಡೆಸಲಿದೆ. ದರ್ಶನ್, ಪವಿತ್ರಾ ಸೇರಿ 7 ಆರೋಪಿಗಳ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಜನವರಿ 6ರಂದು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈಗ ಅರ್ಜಿ ವಿಚಾರಣೆಗೆ ದಿನಾಂಕ ನಿಗದಿ ಮಾಡಿದೆ.

ಇದನ್ನೂ ಓದಿ: ದರ್ಶನ್ ಭೇಟಿ ಮಾಡಲು ಬಂದರೆ ಒಪ್ಪುತ್ತೀರಾ? ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ ಇಲ್ಲಿದೆ..

ಕಳೆದ ಡಿಸೆಂಬರ್​ನಲ್ಲಿ ಹೈಕೋರ್ಟ್​​ನಿಂದ ಆರೋಪಿಗಳು ಜಾಮೀನು ಪಡೆದಿದ್ದರು. ಪೊಲೀಸರು ಮೇಲ್ಮನವಿ ಸಲ್ಲಿಸಿರುವುದರಿಂದ ಏಳು ಆರೋಪಿಗಳಿಗೆ ಮತ್ತೆ ಕಂಟಕ ಶುರುವಾಗಿದೆ. ಸುಪ್ರೀಂ ಕೋರ್ಟ್​​ನಲ್ಲಿ ದರ್ಶನ್ ಆ್ಯಂಡ್ ಗ್ಯಾಂಗ್​ಗೆ ರಿಲೀಫ್ ಸಿಗುತ್ತಾ ನೋಡಬೇಕಿದೆ.

ಹೈಕೋರ್ಟ್​ನಲ್ಲಿ ಈ ಮೊದಲು ಸರ್ಕಾರಿ ಪರ ವಕೀಲರಾಗಿ ಪ್ರಸನ್ನ ಕುಮಾರ್ ಅವರು ವಾದ ಮಂಡನೆ ಮಾಡಿದ್ದರು. ಸುಪ್ರೀಂ ಕೋರ್ಟ್​ಗೆ ವಕೀಲರಾಗಿ ಅನಿಲ್ ಸಿ. ನಿಶಾನಿ ನೇಮಕ ಮಾಡಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅವರು ದರ್ಶನ್ ವಿರುದ್ಧ ವಾದ ಮಂಡನೆ ಮಾಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:44 am, Fri, 17 January 25

ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿ ಕನ್ನಡದಲ್ಲೇ ಮಾತನಾಡಿದ ಚಂದ್ರ
ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿ ಕನ್ನಡದಲ್ಲೇ ಮಾತನಾಡಿದ ಚಂದ್ರ
ತಪ್ಪಾದ ಬಸ್ ಹತ್ತಿ ಹೋದ 5 ವರ್ಷದ ಬಾಲಕ, ಮುಂದೇನಾಯ್ತು?
ತಪ್ಪಾದ ಬಸ್ ಹತ್ತಿ ಹೋದ 5 ವರ್ಷದ ಬಾಲಕ, ಮುಂದೇನಾಯ್ತು?
Daily Devotional: ಯಾವ ರಾಶಿಯವರು ಯಾವ ಉದ್ಯೋಗ ಮಾಡಿದರೆ ಉತ್ತಮ?
Daily Devotional: ಯಾವ ರಾಶಿಯವರು ಯಾವ ಉದ್ಯೋಗ ಮಾಡಿದರೆ ಉತ್ತಮ?
ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಬೀದರ್​: ಫೈರಿಂಗ್ ಮಾಡಿ ಎಟಿಎಂ ಹಣದ ಟ್ರಂಕ್ ಹೊತ್ತೊಯ್ದ ವಿಡಿಯೋ ನೋಡಿ
ಬೀದರ್​: ಫೈರಿಂಗ್ ಮಾಡಿ ಎಟಿಎಂ ಹಣದ ಟ್ರಂಕ್ ಹೊತ್ತೊಯ್ದ ವಿಡಿಯೋ ನೋಡಿ
ದರ್ಶನ್ ಭೇಟಿಗೆ ಬಂದರೆ ಒಪ್ಪುತ್ತೀರಾ? ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
ದರ್ಶನ್ ಭೇಟಿಗೆ ಬಂದರೆ ಒಪ್ಪುತ್ತೀರಾ? ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
ಮಂಗಳೂರಿನ ಜೊತೆ ನಟ ಗೋಲ್ಡನ್ ಸ್ಟಾರ್​ ಗಣೇಶ್​ಗೆ ಅವಿನಾಭಾವ ಸಂಬಂಧ
ಮಂಗಳೂರಿನ ಜೊತೆ ನಟ ಗೋಲ್ಡನ್ ಸ್ಟಾರ್​ ಗಣೇಶ್​ಗೆ ಅವಿನಾಭಾವ ಸಂಬಂಧ
ಗೃಹ ಸಚಿವ ಸ್ಟ್ಯಾಂಡಿಂಗ್ ಇನ್ಸಸ್ಟ್ರಕ್ಷನ್​ಗಳ ಬಗ್ಗೆ ಮಾತ್ರ ಮಾತಾಡುತ್ತಾರೆ
ಗೃಹ ಸಚಿವ ಸ್ಟ್ಯಾಂಡಿಂಗ್ ಇನ್ಸಸ್ಟ್ರಕ್ಷನ್​ಗಳ ಬಗ್ಗೆ ಮಾತ್ರ ಮಾತಾಡುತ್ತಾರೆ
ತಮ್ಮ ಬದಲು ರಮೇಶ್ ಜಾರಕಿಹೊಳಿಯನ್ನು ಮಾತಾಡಲು ಬಿಟ್ಟರೇ ಯತ್ನಾಳ್?
ತಮ್ಮ ಬದಲು ರಮೇಶ್ ಜಾರಕಿಹೊಳಿಯನ್ನು ಮಾತಾಡಲು ಬಿಟ್ಟರೇ ಯತ್ನಾಳ್?
ವಿಜಯೇಂದ್ರರನ್ನು ಸಿಎಂ ಮಾಡುವ ಸಂಕಲ್ಪ ತೊಟ್ಟಿದ್ದೇವೆ: ರೇಣುಕಾಚಾರ್ಯ
ವಿಜಯೇಂದ್ರರನ್ನು ಸಿಎಂ ಮಾಡುವ ಸಂಕಲ್ಪ ತೊಟ್ಟಿದ್ದೇವೆ: ರೇಣುಕಾಚಾರ್ಯ