AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋಗಲು ಹೇಗಿದೆ ನೋಡಿ ಪೊಲೀಸರ ಸಿದ್ಧತೆ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್ ಅವರಿಗೆ ನ್ಯಾಯಾಲಯದಿಂದ ಪೂರ್ಣ ಜಾಮೀನು ದೊರೆತಿದೆ. ಆದರೆ, ಪೊಲೀಸರು ಈ ಜಾಮೀನು ವಿರುದ್ಧ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸುವ ಯೋಜನೆ ಹೊಂದಿದ್ದಾರೆ. ದರ್ಶನ್ ಅವರು ಅನಾರೋಗ್ಯದ ನೆಪದಲ್ಲಿ ಮಧ್ಯಂತರ ಜಾಮೀನು ಪಡೆದಿದ್ದರು ಮತ್ತು ಸರ್ಜರಿ ಮಾಡಿಸಿಕೊಂಡಿಲ್ಲ ಎಂಬುದನ್ನು ಪೊಲೀಸರು ಪ್ರಮುಖವಾಗಿ ಪ್ರಸ್ತಾಪಿಸಲಿದ್ದಾರೆ.

ದರ್ಶನ್ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋಗಲು ಹೇಗಿದೆ ನೋಡಿ ಪೊಲೀಸರ ಸಿದ್ಧತೆ
ದರ್ಶನ್
ರಾಜೇಶ್ ದುಗ್ಗುಮನೆ
|

Updated on:Dec 19, 2024 | 10:57 AM

Share

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಆರೋಪಿ ದರ್ಶನ್ ಅವರಿಗೆ ಆರು ತಿಂಗಳ ಬಳಿಕ ಕೋರ್ಟ್​​ನಿಂದ ಪೂರ್ಣಪ್ರಮಾಣದ ಜಾಮೀನು ಸಿಕ್ಕಿದೆ. ಇಷ್ಟು ದಿನಗಳ ಕಾಲ ಜೈಲು ಹಾಗೂ ಆಸ್ಪತ್ರೆಯಲ್ಲಿ ಕಾಲ ಕಳೆದು ಸುಸ್ತಾಗಿದ್ದ ದರ್ಶನ್ ಈಗ ಮನೆಯಲ್ಲಿ ಸಮಯ ಕಳೆಯುತ್ತಿದ್ದಾರೆ. ಬೆಂಗಳೂರಿನ ಹೊಸಕೆರೆಹಳ್ಳಿಯಲ್ಲಿರುವ ವಿಜಯಲಕ್ಷ್ಮೀ ಅವರ ನಿವಾಸದಲ್ಲಿ ದರ್ಶನ್ ಇದ್ದಾರೆ. ಈ ಮಧ್ಯೆ ದರ್ಶನ್ ಹಾಗೂ ಅವರ ಗ್ಯಾಂಗ್ ವಿರುದ್ಧ ಸುಪ್ರೀಂಕೋರ್ಟ್​ ಮೊರೆ ಹೋಗಲು ಬೆಂಗಳೂರು ಪೊಲೀಸರ ಸಿದ್ಧತೆ ಮಾಡಿಕೊಂಡಿದ್ದಾರೆ.

ಜೂನ್ 11ರಂದು ದರ್ಶನ್ ಅವರು ಕೊಲೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾದರು. ಆರಂಭದಲ್ಲಿ ಬೆಂಗಳೂರು ಜೈಲಿನಲ್ಲಿ ಇದ್ದ ಅವರು ನಂತರ ಬಳ್ಳಾರಿ ಜೈಲಿಗೆ ಶಿಫ್ಟ್ ಆದರು. ಬೆಂಗಳೂರು ಜೈಲಿನಲ್ಲಿ ಸಿಗರೇಟ್ ಸೇದುತ್ತಾ, ಟೀ ಹೀರಿದ್ದ ವಿಚಾರದಲ್ಲಿ ಅವರ ಮೇಲೆ ಮತ್ತೊಂದು ಕೇಸ್ ದಾಖಲಾಗಿದೆ. ಈಗ ತನಿಖಾ ತಂಡ ಸಂಪೂರ್ಣ ಕೇಸ್ ಫೈಲ್ ಪರಿಶೀಲನೆ ನಡೆಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್​ಶೀಟ್​ಗಳನ್ನು ಕನ್ನಡದಿಂದ ಇಂಗ್ಲೀಷ್​ಗೆ ತರ್ಜುಮೆ ಮಾಡುವ ಕೆಲಸ ನಡೆದಿದೆ.

ಸುಮಾರು 5 ಸಾವಿರ ಪುಟಗಳ ಇಂಗ್ಲೀಷ್​ ಚಾರ್ಜ್​ಶೀಟ್ ತಯಾರಿ ಆಗಿದೆ. ಚಾರ್ಜ್​ಶೀಟ್ ತರ್ಜುಮೆ ಮಾಡಿ ಲೀಗಲ್ ಸೆಲ್ ಟೀಂ ಜತೆ ಪರಿಶೀಲನೆ ನಡೆಸಲು ಚಿಂತಿಸಲಾಗಿದೆ. ತರ್ಜುಮೆ ವೇಳೆ ಕಂಡು ಬರುವ ಲೋಪದೋಷಗಳ ಬಗ್ಗೆ ಚರ್ಚೆ ನಡೆದು ಅದನ್ನು ತಿದ್ದುವ ಕೆಲಸ ಆಗಲಿದೆ.

ಎರಡು ವಿಚಾರ ಹೈಲೈಟ್

ದರ್ಶನ್ ಕೇಸ್​ನಲ್ಲಿ ಎರಡು ವಿಚಾರಗಳನ್ನು ಹೈಲೈಟ್ ಮಾಡಲು ಪೊಲೀಸರು ಚಿಂತನೆ ನಡೆಸಿದ್ದಾರೆ. ಅನಾರೋಗ್ಯದ ಕಾರಣ ಕೊಟ್ಟು ದರ್ಶನ್ ಮಧ್ಯಂತರ ಜಾಮೀನು ಪಡೆದಿದ್ದರು. ಸರ್ಜರಿ ಅಗತ್ಯ ಇದೆ ಎಂದು ಹೇಳಲಾಗಿತ್ತು. ಆದರೆ, ಯಾವುದೇ ಸರ್ಜರಿ ನಡೆಸಿಲ್ಲ. ಈ ವಿಚಾರವನ್ನು ಸುಪ್ರೀಂನಲ್ಲಿ ಹೈಲೈಟ್ ಮಾಡಲು ಚಿಂತನೆ ನಡೆಸಲಾಗಿದೆ. ಈಗ ಮೆರಿಟ್ ಆಫ್ ಕೇಸ್ ಮೇಲೆ ರೆಗ್ಯುಲರ್ ಬೇಲ್ ಕೂಡ ಮಂಜೂರಾಗಿದೆ. ಈ ಎರಡು ವಿಚಾರ ಮುಂದಿಟ್ಟುಕೊಂಡು ಸುಪ್ರೀಂ ಮೊರೆ ಹೋಗಲು ನಿರ್ಧಾರ ಮಾಡಲಾಗಿದೆ.

ಒಪ್ಪಿಗೆ ಪಡೆಯಬೇಕು

ಸದ್ಯ ಪೊಲೀಸ್ ಇಲಾಖೆ ಅಗತ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದೆ. ಇದಕ್ಕೆ ರಾಜ್ಯ ಗೃಹ ಇಲಾಖೆಯ ಒಪ್ಪಿಗೆಯ ಅಗತ್ಯವಿದೆ. ಹೀಗಾಗಿ, ಗೃಹ ಇಲಾಖೆಯಿಂದ ಒಪ್ಪಿಗೆ ಪಡೆದು ಪೊಲೀಸರು ಕೋರ್ಟ್ ಮೊರೆ ಹೋಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:56 am, Thu, 19 December 24

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!