ಬೆಂಗಳೂರಿನ ರಿಂಗ್ ರಸ್ತೆಗೆ ಪುನೀತ್ ಹೆಸರು; ಫೆ.7ಕ್ಕೆ ಸಿಎಂ ಬೊಮ್ಮಾಯಿ ಉದ್ಘಾಟನೆ

ಫೆಬ್ರವರಿ 7ರಂದು ಸಂಜೆ 6 ಗಂಟೆಗೆ ಪದ್ಮನಾಭನಗರದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಸ್ತೆಯನ್ನು ಉದ್ಘಾಟನೆ ಮಾಡಲಿದ್ದಾರೆ.

ಬೆಂಗಳೂರಿನ ರಿಂಗ್ ರಸ್ತೆಗೆ ಪುನೀತ್ ಹೆಸರು; ಫೆ.7ಕ್ಕೆ ಸಿಎಂ ಬೊಮ್ಮಾಯಿ ಉದ್ಘಾಟನೆ
ಬಸವರಾಜ ಬೊಮ್ಮಾಯಿ-ಪುನೀತ್
Follow us
ರಾಜೇಶ್ ದುಗ್ಗುಮನೆ
|

Updated on: Feb 06, 2023 | 2:04 PM

ನಟ ಪುನೀತ್ ರಾಜ್​ಕುಮಾರ್ (Puneeth Rajkumar) ನಿಧನದ ನಂತರದಲ್ಲಿ ಅವರನ್ನು ಬೇರೆ ಬೇರೆ ರೀತಿಯಲ್ಲಿ ನೆನಪಿಸಿಕೊಳ್ಳುವ ಕಾರ್ಯ ಆಗುತ್ತಿದೆ. ರಸ್ತೆ, ವೃತ್ತ, ಪಾರ್ಕ್​ಗೆ ಪುನೀತ್ ರಾಜ್​ಕುಮಾರ್ ಅವರ ಹೆಸರನ್ನು ಇಡಲಾಗುತ್ತಿದೆ. ಮೈಸೂರು ರಸ್ತೆಯಿಂದ ಬನ್ನೇರುಘಟ್ಟವರೆಗಿನ ರಸ್ತೆಗೆ ಪುನೀತ್ ಹೆಸರು ಇಡುವ ಪ್ರಸ್ತಾವನೆಗೆ ಒಪ್ಪಿಗೆ ಸಿಕ್ಕಿತ್ತು. ಮಂಗಳವಾರ (ಫೆ.7) ಈ ರಸ್ತೆ ಉದ್ಘಾಟನೆಗೊಳ್ಳಲಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಕಂದಾಯ ಇಲಾಖೆ ಸಚಿವ ಆರ್​. ಅಶೋಕ್ (R Ashok) ಮಾಹಿತಿ ನೀಡಿದ್ದಾರೆ.

ಫೆಬ್ರವರಿ 7ರಂದು ಸಂಜೆ 6 ಗಂಟೆಗೆ ಪದ್ಮನಾಭನಗರದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಸ್ತೆಯನ್ನು ಉದ್ಘಾಟನೆ ಮಾಡಲಿದ್ದಾರೆ. ‘ಪುನೀತ್ ರಾಜ್​ಕುಮಾರ್​ ಸಾಮಾಜಿಕ ಕೆಲಸ ಮಾಡಿದ ಹೃದಯವಂತ. ಕಾರ್ಯಕ್ರಮದಲ್ಲಿ ಶಿವರಾಜ್​ಕುಮಾರ್, ರಾಘವೇಂದ್ರ ರಾಜ್​ಕುಮಾರ್ ಸೇರಿ ಅನೇಕರು ಭಾಗಿ ಆಗುತ್ತಿದ್ದಾರೆ. ಪುನೀತ್ ​ಪತ್ನಿ ಅಶ್ವಿನಿಯವರು ಕೂಡ ಪಾಲ್ಗೊಳ್ಳುತ್ತಾರೆ’ ಎಂದು ಆರ್​.ಅಶೋಕ್ ಹೇಳಿದ್ದಾರೆ.

‘ಪುನೀತ್ ಅವರನ್ನು ಕೆಲವರು ದೇವರು ಅಂತ ಕರೀತಾರೆ. ಜಾಹೀರಾತಿಗೆ ಸ್ಟಾರ್​​ಗಳು ಕೋಟ್ಯಾಂತರ ರೂಪಾಯಿ ತೆಗೆದುಕೊಳ್ಳುತ್ತಾರೆ. ಆದರೆ, ನಮ್ಮ ನಂದಿನಿ ಜಾಹೀರಾತಿಗೆ ಅವರು ಒಂದು ನಯಾಪೈಸಾ ತೆಗೆದುಕೊಂಡಿಲ್ಲ. ಫ್ರೀ ಆಗಿ ರಾಯಬಾರಿ ಆಗಿದ್ರು. ರೈತರ ಬೆನ್ನೆಲುಬಾಗಿ ನಾನು ಉಚಿತವಾಗಿ ಮಾಡ್ತೀನಿ ಅಂದಿದ್ರು. ಅವರ ನೆನಪು ಸದಾ ನಮ್ಮೊಂದಿಗೆ ಇರಬೇಕು ಎನ್ನುವ ಕಾರಣಕ್ಕೆ  ಬೆಂಗಳೂರಿನ ರಿಂಗ್ ರಸ್ತೆಗೆ ಪುನೀತ್ ಹೆಸರು ಇಡುತ್ತಿದ್ದೇವೆ’ ಎಂದಿದ್ದಾರೆ ಆರ್. ಅಶೋಕ್.

ರೇಸ್​ಕೋರ್ಸ್ ರಸ್ತೆಗೆ ಅಂಬರೀಷ್ ಹೆಸರು?

ರೇಸ್​ಕೋರ್ಸ್ ರಸ್ತೆಗೆ ಅಂಬರೀಷ್ ಅವರ ಹೆಸರು ಇಡಬೇಕು ಎಂಬುದು ಅವರ ಅಭಿಮಾನಿಗಳ ಕೋರಿಕೆ. ಈ ಸಂಬಂಧ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಈ ಬಗ್ಗೆ ಮಾತನಾಡಿರುವ ಅಶೋಕ್ ಅವರು, ‘ಅಂಬರೀಷ್ ಅವರಿಗೂ ರೇಸ್​ಕೋರ್ಸ್​ ರಸ್ತೆಗೂ ಅವಿನಾಭಾವ ಸಂಬಂಧ ಇದೆ. ಈ ರಸ್ತೆಗೆ ಅಂಬರೀಷ್ ಹೆಸರು ಇಡಬೇಕು ಎಂಬ ಕೋರಿಕೆ ಬಂದಿದೆ. ಅದನ್ನು ಸಿಎಂಗೆ ತಲುಪಿಸುತ್ತೇನೆ. ಮೇನಲ್ಲಿ ನಾವೇ ಇರ್ತೀವಿ. ಆಗ ನೋಡೋಣ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ