AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರೀಕರಣ ವೇಳೆ ನಿಯಮಗಳನ್ನು ಪಾಲಿಸುತ್ತಿಲ್ಲ, ಕಠಿಣ ನಿಯಮಗಳನ್ನು ಜಾರಿ ಮಾಡಿ ಶೀಘ್ರದಲ್ಲೇ ಆದೇಶ; ಸಿಎಂ ಬಸವರಾಜ ಬೊಮ್ಮಾಯಿ

ಈ ಹಿಂದೆಯೂ ಇಂತಹ ಹಲವು ಘಟನೆಗಳು ನಡೆದಿವೆ. ಪ್ರಕರಣದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ. ಇಂತಹ ಘಟನೆ ಮರುಕಳಿಸದಂತೆ ಎಚ್ಚರವಹಿಸಲು ಸೂಚಿಸುತ್ತೇನೆ ಅಂತ ಗೃಹ ಸಚಿವ ಆರಗ ಜ್ಞಾನೇಂದ್ರ ಟಿವಿ9ಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಚಿತ್ರೀಕರಣ ವೇಳೆ ನಿಯಮಗಳನ್ನು ಪಾಲಿಸುತ್ತಿಲ್ಲ, ಕಠಿಣ ನಿಯಮಗಳನ್ನು ಜಾರಿ ಮಾಡಿ ಶೀಘ್ರದಲ್ಲೇ ಆದೇಶ; ಸಿಎಂ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: sandhya thejappa|

Updated on: Aug 10, 2021 | 11:03 AM

Share

ಬೆಂಗಳೂರು: ನಟ ಅಜಯ್ ರಾವ್ (Ajay Rao) ಮತ್ತ ನಟಿ ರಚಿತಾ ರಮ್ (Rachita Ram) ಅಭಿನಯಿಸುತ್ತಿದ್ದ ಲವ್ ಯೂ ರಚ್ಚು ಸಿನಿಮಾ ಚಿತ್ರೀಕರಣದ ವೇಳೆ ಫೈಟರ್ ವಿವೇಕ್ ಸಾವನ್ನಪ್ಪಿದ್ದಾರೆ. ಹೈ ವೋಲ್ಟೇಜ್ ತಂತಿ ತಗುಲಿ ನಿನ್ನೆ (ಆಗಸ್ಟ್ 9) ಫೈಟರ್ ವಿವೇಕ್ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂತಹ ಹಲವು ಘಟನೆಗಳು ಬೆಳಕಿಗೆ ಬರುತ್ತಿವೆ. ಚಿತ್ರೀಕರಣ ವೇಳೆ ಕೆಲವರು ನಿಯಮಗಳನ್ನು ಪಾಲಿಸುತ್ತಿಲ್ಲ. ಹೀಗಾಗಿ ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿ ಮಾಡುತ್ತೇವೆ. ನಾಳೆ ಅಥವಾ ನಾಡಿದ್ದು ಆದೇಶವನ್ನು ಹೊರಡಿಸುತ್ತೇವೆ ಎಂದು ತಿಳಿಸಿದ್ದಾರೆ.

ಈ ಹಿಂದೆಯೂ ಇಂತಹ ಹಲವು ಘಟನೆಗಳು ನಡೆದಿವೆ. ಪ್ರಕರಣದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ. ಇಂತಹ ಘಟನೆ ಮರುಕಳಿಸದಂತೆ ಎಚ್ಚರವಹಿಸಲು ಸೂಚಿಸುತ್ತೇನೆ ಅಂತ ಗೃಹ ಸಚಿವ ಆರಗ ಜ್ಞಾನೇಂದ್ರ ಟಿವಿ9ಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಅಮಾಯಕರು ಮೃತಪಟ್ಟಾಗ ಮನಸ್ಸಿಗೆ ಬೇಸರವಾಗುತ್ತೆ. ತೆರೆ ಹಿಂದೆ ಏನೇನು ನಡೆಯುತ್ತೆ ಎಂದು ಗೊತ್ತಾಗುವುದಿಲ್ಲ. ಎಷ್ಟು ಡೇಂಜರ್​ನಲ್ಲಿ ಕೆಲಸ ಮಾಡ್ತಿದ್ದಾರೆಂದು ಗೊತ್ತಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುತ್ತಾರೆ. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕು ಅಂತ ಅವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಈ ಪ್ರಕರಣಕೆ ಸಂಬಂಧಿಸಿ ಬಿಡದಿ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದು, ಐವರ ವಿರುದ್ಧ ಎಫ್ಐಆರ್ ಹಾಕಿದ್ದಾರೆ. ನಿರ್ದೇಶಕ ಶಂಕರ್ ರಾಜ್ ಎ1, ನಿರ್ಮಾಪಕ ಗುರು ದೇಶಪಾಂಡೆ ಎ2, ಚಿತ್ರದ ಸಾಹಸ ನಿರ್ದೇಶಕ ವಿನೋದ್ ಕುಮಾರ್ ಎ3, ಸಿನಿಮಾ ಪ್ರೊಡಕ್ಷನ್ ಮ್ಯಾನೇಜರ್ ಫರ್ನಾಂಡಿಸ್ ಎ4 ಹಾಗೂ ಕ್ರೇನ್ ಆಪರೇಟರ್ ಮಹದೇವ್ ಎ5 ಎಂದು ಬಿಡದಿ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಆದರೆ ಘಟನೆ ಬಳಿಕ ಗುರು ದೇಶಪಾಂಡೆ ಮತ್ತು ಪ್ರೊಡಕ್ಷನ್ ಮ್ಯಾನೇಜರ್ ಫರ್ನಾಂಡಿಸ್ ಪರಾರಿ ಆಗಿದ್ದು, ಬಿಡದಿ ಪೊಲೀಸರು ಹುಡುಕುತ್ತಿದ್ದಾರೆ.

ಇದನ್ನೂ ಓದಿ

Love You Racchu: ಫೈಟರ್​ ವಿವೇಕ್​ ಸಾವು; ನಿರ್ದೇಶಕ ಶಂಕರ್​, ಸಾಹಸ ನಿರ್ದೇಶಕ ವಿನೋದ್​ ಪೊಲೀಸರ ವಶಕ್ಕೆ

Fighter Vivek Death: ವಿದ್ಯುತ್ ತಂತಿ ಸ್ಪರ್ಶಿಸಿ ಅವಘಡ, ಫೈಟರ್ ವಿವೇಕ್ ಸಾವು

(Basavaraja Bommai said strict rules will be issued soon for cinema shooting in Bengaluru)

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್