ಬಿಗ್​ ಬಾಸ್​ ವಿನ್ನರ್​ ರೂಪೇಶ್​ ಶೆಟ್ಟಿ ಹೊಸ ಸಿನಿಮಾ ‘ಅಧಿಪತ್ರ’: ಹುಟ್ಟುಹಬ್ಬದ ದಿನವೇ ಸಿಹಿ ಸುದ್ದಿ

ರೂಪೇಶ್ ಶೆಟ್ಟಿ ಹೀರೋ ಆಗಿ ನಟಿಸುತ್ತಿರುವ ‘ಅಧಿಪತ್ರ’ ಸಿನಿಮಾದ ಅರ್ಥ ಏನು ಎಂಬ ಕುತೂಹಲ ಅಭಿಮಾನಿಗಳ ಮನದಲ್ಲಿ ಮೂಡಿದೆ. ರೂಪೇಶ್​ ಶೆಟ್ಟಿ ಜೊತೆ ಬೇರೆ ಯಾರೆಲ್ಲ ನಟಿಸುತ್ತಾರೆ ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಕೆ.ಆರ್. ಸಿನಿ ಕಂಬೈನ್ಸ್ ಬ್ಯಾನರ್​ ಮೂಲಕ ಈ ಸಿನಿಮಾ ನಿರ್ಮಾಣ ಆಗಲಿದೆ. ಚಯನ್ ಶೆಟ್ಟಿ ಅವರು ನಿರ್ದೇಶನ ಮಾಡಲಿದ್ದಾರೆ.

ಬಿಗ್​ ಬಾಸ್​ ವಿನ್ನರ್​ ರೂಪೇಶ್​ ಶೆಟ್ಟಿ ಹೊಸ ಸಿನಿಮಾ ‘ಅಧಿಪತ್ರ’: ಹುಟ್ಟುಹಬ್ಬದ ದಿನವೇ ಸಿಹಿ ಸುದ್ದಿ
ರೂಪೇಶ್​ ಶೆಟ್ಟಿ ನಟನೆಯ ಕನ್ನಡ ಸಿನಿಮಾ ಅನೌನ್ಸ್​
Follow us
ಮದನ್​ ಕುಮಾರ್​
|

Updated on: Aug 14, 2023 | 10:01 PM

‘ಬಿಗ್​ ಬಾಸ್​’ ಶೋ ಗೆದ್ದು ಬಂದ ಸ್ಪರ್ಧಿಗಳಿಗೆ ಚಿತ್ರರಂಗದಲ್ಲಿ ಅವಕಾಶ ಹೆಚ್ಚುತ್ತದೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರ ವಿನ್ನರ್​  (BBK 9 Winner) ರೂಪೇಶ್​ ಶೆಟ್ಟಿ ಅವರು ಕೂಡ ಚಿತ್ರರಂಗದಲ್ಲಿ ಸಾಧನೆ ಮಾಡಬೇಕು ಎಂಬ ಕನಸು ಕಂಡಿದ್ದಾರೆ. ಈಗಾಗಲೇ ತುಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಅವರು ಸ್ಯಾಂಡಲ್​ವುಡ್​ನಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ. ಅವರು ನಾಯಕನಾಗಿ ನಟಿಸಲಿರುವ ಹೊಸ ಸಿನಿಮಾ ಘೋಷಣೆ ಆಗಿದೆ. ಅಂದಹಾಗೆ, ರೂಪೇಶ್​ ಶೆಟ್ಟಿ (Roopesh Shetty) ಅವರಿಗೆ ಇಂದು (ಆಗಸ್ಟ್​ 14) ಹುಟ್ಟುಹಬ್ಬದ ಸಂಭ್ರಮ. ಆ ಪ್ರಯುಕ್ತ ನೂತನ ಸಿನಿಮಾ ಅನೌನ್ಸ್​ ಆಗಿರುವುದು ವಿಶೇಷ. ಈ ಚಿತ್ರಕ್ಕೆ ‘ಅಧಿಪತ್ರ’ (Adhipathra Movie) ಎಂದು ಶೀರ್ಷಿಕೆ ಇಡಲಾಗಿದೆ. ಶೀರ್ಷಿಕೆ ವಿನ್ಯಾಸ ಗಮನ ಸೆಳೆಯುತ್ತಿದೆ. ಎಲ್ಲರೂ ರೂಪೇಶ್ ಶೆಟ್ಟಿಗೆ ಅಭಿನಂದನೆ ತಿಳಿಸುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳುವ ಕೌತುಕ ಮೂಡಿದೆ.

ಕಿರುತೆರೆ ಪ್ರೇಕ್ಷಕರಿಗೆ ರೂಪೇಶ್​ ಶೆಟ್ಟಿ ಅವರು ಪರಿಚಿತರಾಗಿದ್ದು ‘ಬಿಗ್ ಬಾಸ್’ ರಿಯಾಲಿಟಿ ಶೋ ಮೂಲಕ. ಆ ಟ್ರೋಫಿ ಗೆದ್ದ ಬಳಿಕ ರೂಪೇಶ್ ಶೆಟ್ಟಿ ಯಾವ ಸಿನಿಮಾ ಮಾಡಲಿದ್ದಾರೆ ಎಂಬ ಪ್ರಶ್ನೆ ಎದುರಾಗಿತ್ತು. ಕನ್ನಡ ಚಿತ್ರದ ತಯಾರಿಯಲ್ಲಿ ಇರುವಾಗಲೇ ಅವರು ತುಳು ಸಿನಿಮಾವೊಂದಕ್ಕೆ ನಿರ್ದೇಶನ ಮಾಡುವಲ್ಲಿ ಬ್ಯುಸಿಯಾದರು. ಹಾಗಾಗಿ ಕನ್ನಡ ಸಿನಿಮಾ ಸೆಟ್ಟೇರುವುದು ತಡವಾಯಿತು. ಈಗ ‘ಅಧಿಪತ್ರ’ ಸಿನಿಮಾದ ಟೈಟಲ್​ ಅನೌನ್ಸ್​ ಆಗಿದೆ. ಸೆಪ್ಟೆಂಬರ್ ವೇಳೆಗೆ ಈ ಸಿನಿಮಾದ ಶೂಟಿಂಗ್​ ಆರಂಭ ಆಗಲಿದೆ.

ರೂಪೇಶ್​ ಶೆಟ್ಟಿ ಇನ್​ಸ್ಟಾಗ್ರಾಮ್​ ಪೋಸ್ಟ್​:

ರೂಪೇಶ್ ಶೆಟ್ಟಿ ಹೀರೋ ಆಗಿ ನಟಿಸುತ್ತಿರುವ ‘ಅಧಿಪತ್ರ’ ಸಿನಿಮಾದ ಅರ್ಥ ಏನು ಎಂಬ ಕುತೂಹಲ ಅಭಿಮಾನಿಗಳ ಮನದಲ್ಲಿ ಮೂಡಿದೆ. ಅದಕ್ಕೆ ಮುಂದಿನ ದಿನಗಳಲ್ಲಿ ಉತ್ತರ ಸಿಗಲಿದೆ. ಈ ಸಿನಿಮಾದಲ್ಲಿ ರೂಪೇಶ್​ ಶೆಟ್ಟಿ ಜೊತೆ ಬೇರೆ ಯಾರೆಲ್ಲ ನಟಿಸುತ್ತಾರೆ ಎಂಬುದು ಕೂಡ ಇನ್ನೂ ಬಹಿರಂಗ ಆಗಿಲ್ಲ. ಕೆ.ಆರ್. ಸಿನಿ ಕಂಬೈನ್ಸ್ ಬ್ಯಾನರ್​ ಮೂಲಕ ಈ ಸಿನಿಮಾ ನಿರ್ಮಾಣ ಆಗಲಿದೆ. ಚಯನ್ ಶೆಟ್ಟಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡಲಿದ್ದಾರೆ. ಹೆಚ್ಚಿನ ಮಾಹಿತಿಯನ್ನು ಹಂತಹಂತವಾಗಿ ಬಿಟ್ಟುಕೊಡಲು ಚಿತ್ರತಂಡ ನಿರ್ಧರಿಸಿದೆ.

ಇದನ್ನೂ ಓದಿ: Roopesh Shetty: ‘ನಾನು ಕೊರಗಜ್ಜನ ಆರಾಧನೆ ಮಾಡ್ತೀನಿ, ಬಿಗ್​ ಬಾಸ್​ನಲ್ಲಿ ಅವರೇ ನನ್ನ ಗೆಲ್ಲಿಸಿದ್ದಾರೆ’: ರೂಪೇಶ್​ ಶೆಟ್ಟಿ

ತುಳು ಸಿನಿಮಾರಂಗದಲ್ಲಿ ರೂಪೇಶ್​ ಶೆಟ್ಟಿ ಅವರಿಗೆ ಸಾಕಷ್ಟು ಅನುಭವ ಇದೆ. ಸಿನಿಮಾದ ನಾನಾ ವಿಭಾಗಳಲ್ಲಿ ಅವರು ಕೆಲಸ ಮಾಡಿದ್ದಾರೆ. ನಟನಾಗಿ ಮತ್ತು ನಿರ್ದೇಶಕನಾಗಿ ಅವರು ಅಲ್ಲಿ ನೆಲೆ ಕಂಡುಕೊಂಡಿದ್ದಾರೆ. ಬಿಗ್​ ಬಾಸ್​ಗೆ ಕಾಲಿಟ್ಟ ಬಳಿಕ ಅವರಿಗೆ ಜನಪ್ರಿಯತೆ ಹೆಚ್ಚಾಯಿತು. ಬಿಗ್​ ಬಾಸ್​ ವಿನ್​ ಆದ ಬಳಿಕ ಅವರು ತುಳು ಭಾಷೆಯ ‘ಸರ್ಕಸ್​’ ಸಿನಿಮಾವನ್ನು ನಿರ್ದೇಶಿಸಿ, ನಿರ್ಮಾಣ ಮಾಡಿದರು. ಆ ಸಿನಿಮಾದಿಂದ ಅವರಿಗೆ ದೊಡ್ಡ ಯಶಸ್ಸು ಸಿಕ್ಕಿತು. ಕನ್ನಡದಲ್ಲಿ ಸ್ವಲ್ಪ ತಡವಾಗಿ ಆದರೂ ಪರವಾಗಿಲ್ಲ, ಒಂದು ಒಳ್ಳೆಯ ಕಥೆಯ ಮೂಲಕ, ಡಿಫರೆಂಟ್​ ಆದಂತಹ ಪಾತ್ರದ ಮೂಲಕ ಪ್ರೇಕ್ಷಕರ ಎದುರು ಬರಬೇಕು ಎಂಬುದು ರೂಪೇಶ್​ ಶೆಟ್ಟಿ ಅವರ ಉದ್ದೇಶ ಆಗಿತ್ತು. ಅದೆಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ಅವರು ‘ಅಧಿಪತ್ರ’ ಸಿನಿಮಾಗೆ ಗ್ರೀನ್​ ಸಿಗ್ನಲ್​ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್