AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ‘ಪುನೀತ್​ ರಾಜ್​ಕುಮಾರ್ ರಸ್ತೆ’ ನಾಮಕರಣಕ್ಕೆ ಬಿಬಿಎಂಪಿ ಅಧಿಕೃತ ಅನುಮೋದನೆ

Puneeth Rajkumar Road: ಸ್ಯಾಂಡಲ್​ವುಡ್​ ನಟ ಪುನೀತ್ ರಾಜ್​ಕುಮಾರ್ ರಸ್ತೆ ನಾಮಕರಣಕ್ಕೆ ಬಿಬಿಎಂಪಿ ಅಧಿಕೃತ ಅನುಮೋದನೆ ನೀಡಿದೆ. ಈ ಸಂಬಂಧ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ನಿರ್ಣಯ ಕೈಗೊಂಡು ಅನುಮೋದನೆ ನೀಡಿದ್ದಾರೆ.

Puneeth Rajkumar: ‘ಪುನೀತ್​ ರಾಜ್​ಕುಮಾರ್ ರಸ್ತೆ’ ನಾಮಕರಣಕ್ಕೆ ಬಿಬಿಎಂಪಿ ಅಧಿಕೃತ ಅನುಮೋದನೆ
ಪುನೀತ್ ರಾಜ್​ಕುಮಾರ್
Follow us
TV9 Web
| Updated By: shivaprasad.hs

Updated on:Feb 17, 2022 | 11:38 AM

ಬೆಂಗಳೂರು: ಪುನೀತ್ ರಾಜ್‍ಕುಮಾರ್ (Puneeth Rajkumar) ರಸ್ತೆ ನಾಮಕರಣಕ್ಕೆ ಅಧಿಕೃತ ಅನುಮೋದನೆ ನೀಡಲಾಗಿದೆ. ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ 12 ಕಿ.ಮೀ. ಉದ್ದದ ವರ್ತುಲ ರಸ್ತೆಗೆ ‘ಶ್ರೀ ಪುನೀತ್ ರಾಜ್‍ಕುಮಾರ್ ರಸ್ತೆ’ (Puneeth Rajkumar Road) ಎಂದು ನಾಮಕಾರಣ ಮಾಡುವ ಬಗ್ಗೆ ನಿರ್ಣಯ ಕೈಗೊಂಡು ಅಧಿಕೃತ ಅನುಮೋದನೆ ನೀಡಿದ್ದಾರೆ. ಮೈಸೂರು ರಸ್ತೆಯ ನಾಯಂಡನ ಹಳ್ಳಿ ಜಂಕ್ಷನ್​ನಿಂದ ಬನ್ನೇರುಘಟ್ಟ ರಸ್ತೆಯ ವೆಗಾಸಿಟಿ ಮಾಲ್ ಜಂಕ್ಷನ್​ವರೆಗಿನ 12 ಕಿ.ಮೀ ಉದ್ದದ ರಸ್ತೆಗೆ ಪುನೀತ್​ ಹೆಸರನ್ನು ಇಡಲಾಗುತ್ತದೆ. ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್​ರಿಂದ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಮತ್ತು ಆಡಳಿತಾಧಿಕಾರಿಗಳಿಗೆ ಮನವಿ ಮಾಡಲಾಗಿತ್ತು. ಪುನೀತ್ ರಾಜ್​ಕುಮಾರ್ ರಸ್ತೆ ಹೊಸಕೆರೆ ಹಳ್ಳಿ, ದೇವೇಗೌಡ ಪೆಟ್ರೋಲ್ ಬಂಕ್ – ಕದಿರೇನ ಹಳ್ಳಿ ಪಾರ್ಕ್ – ಸಾರಕ್ಕಿ ಸಿಗ್ನಲ್ – ಜೆ.ಪಿ.ನಗರವನ್ನು ಸಂಪರ್ಕಿಸಲಿದೆ.

ಇದೇ ರಸ್ತೆಗೆ ಅಂಬರೀಷ್ ಹೆಸರಿಡುವಂತೆ ಮನವಿ ಸಲ್ಲಿಸಿದ್ದ ಅಭಿಮಾನಿಗಳು:

ಪುನೀತ್ ರಾಜ್​ಕುಮಾರ್ ಹೆಸರನ್ನು ರಸ್ತೆಗೆ ನಾಮಕರಣ ಮಾಡುವ ಸಂಬಂಧ ಬಿಬಿಎಂಪಿ ಡಿಸೆಂಬರ್ ಅಂತ್ಯದಲ್ಲಿ ಪತ್ರಿಕಾ ಪ್ರಕಟಣೆ ಹೊರಡಿಸಿತ್ತು. ಆಕ್ಷೇಪಣೆಗಳಿದ್ದಲ್ಲಿ 30 ದಿನಗಳ ಒಳಗೆ ಸಲ್ಲಿಸುವಂತೆ ತಿಳಿಸಲಾಗಿತ್ತು. ರಸ್ತೆಗೆ ‘ಶ್ರೀ.ಪುನೀತ್ ರಾಜ್​ಕುಮಾರ್ ರಸ್ತೆ’ ಎಂದು ನಾಮಕರಣ ಮಾಡಬಹುದಾಗಿತ್ತೆಂದು ರಸ್ತೆಯ ಸಮೀಪದ ಬಡಾವಣೆಗಳಿಗೆ ಸೇರಿರುವ 8 ಸಂಘಸಂಸ್ಥೆಗಳ 700ಕ್ಕೂ ಹೆಚ್ಚು ಜನ ಸಹಿ ಮಾಡಿದ್ದರು.

ಬೆಂಗಳೂರು ಮಹಾನಗರ ಜಿಲ್ಲಾ ಡಾ.ಅಂಬರೀಶ್ ಅಭಿಮಾನಿಗಳ ಸಂಘ ಹಾಗೂ ದೇವರಮಗ ಅಭಿಷೇಕ್ ಅಂಬರೀಶ್ ಟ್ರಸ್ಟ್​​​ ಮನವಿ ಪತ್ರ ಸಲ್ಲಿಸಿ ರಸ್ತೆಗೆ ‘ಡಾ.ಅಂಬರೀಶ್ ರಸ್ತೆ’ ಎಂದು ನಾಮಕರಣ ಮಾಡಲು ಕೋರಿದ್ದರು. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಸಭೆಯ ಅಧಿಕಾರದಿಂದ ರಸ್ತೆಗೆ ‘ಪುನೀತ್ ರಾಜ್​ಕುಮಾರ್ ರಸ್ತೆ’ ಎಂದು ನಾಮಕರಣ ಮಾಡಲು ಅನುಮೋದನೆ ನೀಡಲಾಗಿದೆ.

ಪುನೀತ್- ಅಂಬಿ ನಡುವೆ ಇತ್ತು ಒಳ್ಳೆಯ ಬಾಂಧವ್ಯ:

ಅಂಬರೀಷ್​ ಹಾಗೂ ಪುನೀತ್​ ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಂಬರೀಷ್​ ಅವರನ್ನು ಪುನೀತ್ ಪ್ರೀತಿಯಿಂದ ಮಾಮ ಎಂದು ಕರೆಯುತ್ತಿದ್ದರು​. ಇತ್ತೀಚೆಗೆ ಸುಮಲತಾ ಅಂಬರೀಶ್ ಪುನೀತ್​ಗೆ ಕರ್ನಾಟಕ ರತ್ನ ಪ್ರಶಸ್ತಿ ಸಿಕ್ಕ ಬಗ್ಗೆ ಮಾತನಾಡುತ್ತಾ, ‘ಅಪ್ಪುಗೆ ಪ್ರಶಸ್ತಿ ಸಿಕ್ಕಿದೆ ಎಂದರೆ ಅದು ಅಂಬರೀಶ್​ಗೆ ಸಿಕ್ಕ ಹಾಗೆ’ ಎಂದು ನುಡಿದಿದ್ದರು. ಆದರೆ ರಸ್ತೆಗೆ ಹೆಸರಿಡುವ ವಿಚಾರಕ್ಕೆ ಅಂಬರೀಷ್ ಅಭಿಮಾನಿಗಳು ಆಕ್ಷೇಪ ಸಲ್ಲಿಸಿದ್ದು ತುಸು ಚರ್ಚೆಯಾಗಿತ್ತು. ಇದೀಗ ಬಿಬಿಎಂಪಿ ಪುನೀತ್ ಹೆಸರನ್ನು ರಸ್ತೆಗೆ ಇಡುವ ಬಗ್ಗೆ ನಿರ್ಧಾರ ಕೈಗೊಂಡಿದೆ. ಪಾಲಿಕೆಯ ನಿರ್ಧಾರವನ್ನು ಎಲ್ಲರೂ ಸ್ವಾಗತಿಸಲಿದ್ದಾರೆ ಎಂಬ ಆಶಯವನ್ನು ಅಭಿಮಾನಿಗಳು ಹೊಂದಿದ್ದಾರೆ.

ಇದನ್ನೂ ಓದಿ:

ಅಪ್ಪು-ಅಂಬಿ ಫ್ಯಾನ್ಸ್​ ನಡುವೆ ಮನಸ್ತಾಪ? ರಸ್ತೆಗೆ ಪುನೀತ್​ ಹೆಸರಿಡುವುದಕ್ಕೆ ಅಂಬರೀಷ್​ ಅಭಿಮಾನಿಗಳ ಆಕ್ಷೇಪ

Family Pack: ಪ್ರೈಮ್​​ನಲ್ಲಿ ರಿಲೀಸ್ ಆಯ್ತು ಪುನೀತ್ ನಿರ್ಮಾಣದ ‘ಫ್ಯಾಮಿಲಿ ಪ್ಯಾಕ್’

Published On - 11:24 am, Thu, 17 February 22