AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮಕವಿ K ಕಲ್ಯಾಣ್​ ದಾಂಪತ್ಯದಲ್ಲಿ ಬಿರುಕು, ಪೊಲೀಸ್ ಠಾಣೆ ಮೆಟ್ಟಿಲೇರಿದ ದಂಪತಿ

ಬೆಳಗಾವಿ: ಪ್ರೇಮಕವಿ ಹಾಗೂ ಖ್ಯಾತ ಚಿತ್ರಸಾಹಿತಿ ಕೆ.ಕಲ್ಯಾಣ್​ ದಾಂಪತ್ಯದಲ್ಲಿ ಬಿರುಕು ಮೂಡಿದ್ದು ಇದೀಗ ದಂಪತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ ಎಂದು ತಿಳಿದುಬಂದಿದೆ. ತಮ್ಮ ಪತ್ನಿ ಅಶ್ವಿನಿ ಕಿಡ್ನಾಪ್ ಆಗಿದ್ದಾರೆಂದು ಕೆ.ಕಲ್ಯಾಣ್ ನಗರದ ಮಾಳಮಾರುತಿ ಠಾಣೆಗೆ ದೂರು ನೀಡಿದ್ದರು. ಚಿತ್ರಸಾಹಿತಿಯ ದೂರಿನ ಮೇರೆಗೆ ಸೆಪ್ಟೆಂಬರ್ 30ರಂದು FIR ದಾಖಲಾಗಿತ್ತು. ಕಲ್ಯಾಣ್​ ದೂರಿನ ಮೇರೆಗೆ ಅವರ ಪತ್ನಿ ಅಶ್ವಿನಿಯನ್ನು ಪೊಲೀಸರು ಠಾಣೆಗೆ ಕರೆತಂದಿದ್ದಾರೆ. ಜೊತೆಗೆ, ಪೊಲೀಸರು ಅಶ್ವಿನಿಯಿಂದ ಮಾಹಿತಿ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ. ಆಸ್ತಿಗೋಸ್ಕರ K ಕಲ್ಯಾಣ್ ನನ್ನನ್ನು ಮದುವೆ […]

ಪ್ರೇಮಕವಿ K ಕಲ್ಯಾಣ್​ ದಾಂಪತ್ಯದಲ್ಲಿ ಬಿರುಕು, ಪೊಲೀಸ್ ಠಾಣೆ ಮೆಟ್ಟಿಲೇರಿದ ದಂಪತಿ
KUSHAL V
|

Updated on:Oct 03, 2020 | 7:28 PM

Share

ಬೆಳಗಾವಿ: ಪ್ರೇಮಕವಿ ಹಾಗೂ ಖ್ಯಾತ ಚಿತ್ರಸಾಹಿತಿ ಕೆ.ಕಲ್ಯಾಣ್​ ದಾಂಪತ್ಯದಲ್ಲಿ ಬಿರುಕು ಮೂಡಿದ್ದು ಇದೀಗ ದಂಪತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ ಎಂದು ತಿಳಿದುಬಂದಿದೆ.

ತಮ್ಮ ಪತ್ನಿ ಅಶ್ವಿನಿ ಕಿಡ್ನಾಪ್ ಆಗಿದ್ದಾರೆಂದು ಕೆ.ಕಲ್ಯಾಣ್ ನಗರದ ಮಾಳಮಾರುತಿ ಠಾಣೆಗೆ ದೂರು ನೀಡಿದ್ದರು. ಚಿತ್ರಸಾಹಿತಿಯ ದೂರಿನ ಮೇರೆಗೆ ಸೆಪ್ಟೆಂಬರ್ 30ರಂದು FIR ದಾಖಲಾಗಿತ್ತು. ಕಲ್ಯಾಣ್​ ದೂರಿನ ಮೇರೆಗೆ ಅವರ ಪತ್ನಿ ಅಶ್ವಿನಿಯನ್ನು ಪೊಲೀಸರು ಠಾಣೆಗೆ ಕರೆತಂದಿದ್ದಾರೆ. ಜೊತೆಗೆ, ಪೊಲೀಸರು ಅಶ್ವಿನಿಯಿಂದ ಮಾಹಿತಿ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ. ಆಸ್ತಿಗೋಸ್ಕರ K ಕಲ್ಯಾಣ್ ನನ್ನನ್ನು ಮದುವೆ ಆಗಿದ್ದಾರೆ -ಪ್ರೇಮಕವಿ ವಿರುದ್ಧ ಪತ್ನಿ ಪ್ರತಿದೂರು ಕಲ್ಯಾಣ್​ ದೈಹಿಕ ಹಿಂಸೆ ನೀಡ್ತಿದ್ದಾರೆ, ನನಗೆ ವಿಚ್ಛೇದನ ಬೇಕು: ಕೋರ್ಟ್​ ಮೊರೆಹೋದ ಪ್ರೇಮಕವಿ ಪತ್ನಿ

ಕೆ.ಕಲ್ಯಾಣ್​ರ ಪತ್ನಿ ಅಶ್ವಿನಿಯನ್ನು ಆಕೆಯ ಪೋಷಕರು ಪುಸಲಾಯಿಸಿ ಅಪಹರಣ ಮಾಡಿದ್ದರು ಎಂದು ಸಾಹಿತಿ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದರು. ಜೊತೆಗೆ, ಅಶ್ವಿನಿ ಅಕೌಂಟ್‌ನಿಂದ 19 ಲಕ್ಷ ರೂಪಾಯಿ ಹಣವನ್ನು ಆಕೆಯ ಪೋಷಕರು ತಮ್ಮ ಅಕೌಂಟ್‌ಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎಂದು ಕಲ್ಯಾಣ್​ ಆರೋಪಿಸಿದ್ದಾರೆ. ಇದಲ್ಲದೆ, ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಬಡಗಿ ಗ್ರಾಮದವರಾದ ತಮ್ಮ ಪತ್ನಿಯ ಸಂಬಂಧಿಗಳಾದ ಶಿವಾನಂದ ವಾಲಿ ಹಾಗೂ ಗಂಗಾ ಕುಲಕರ್ಣಿ ವಿರುದ್ಧ ಕಲ್ಯಾಣ್​ ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಅವರ ಪತ್ನಿ ಅಶ್ವಿನಿಯನ್ನು ಪೊಲೀಸರು ಮಾಳಮಾರುತಿ ಠಾಣೆಗೆ ಕರೆತಂದು ಮಾಹಿತಿ ಪಡೆಯುತ್ತಿದ್ದಾರೆ. ಜೊತೆಗೆ, ಆರೋಪಿ ಶಿವಾನಂದ ವಾಲಿಯನ್ನು ಸಹ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Published On - 5:51 pm, Sat, 3 October 20

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?