ಆರೋಪಿ ದರ್ಶನ್​ಗೆ ಬಳ್ಳಾರಿ ಜೈಲಿನಲ್ಲಿ ಸರ್ಜಿಕಲ್​ ಚೇರ್​ ನೀಡಲು ಸಿಕ್ತು ಅನುಮತಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆಗಿರುವ ದರ್ಶನ್​ಗೆ ಆರೋಗ್ಯ ಸಮಸ್ಯೆ ಇರುವ ಕಾರಣದಿಂದ ಸರ್ಜಿಕಲ್​ ಚೇರ್​ ಬೇಕು ಎಂದು ಮನವಿ ಮಾಡಲಾಗಿತ್ತು. ಬಳ್ಳಾರಿ ಜೈಲಿಗೆ ಶಿಫ್ಟ್​ ಆಗುತ್ತಿದ್ದಂತೆಯೇ ದರ್ಶನ್​ ಮನವಿ ಸಲ್ಲಿಸಿದ್ದರು. ವೈದ್ಯರ ವರದಿಗಳನ್ನು ಪರಿಶೀಲಿಸಿದ ನಂತರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಡೆಯಿಂದ ಸರ್ಜಿಕಲ್​ ಚೇರ್​ ನೀಡಲಾಗುತ್ತಿದೆ.

ಆರೋಪಿ ದರ್ಶನ್​ಗೆ ಬಳ್ಳಾರಿ ಜೈಲಿನಲ್ಲಿ ಸರ್ಜಿಕಲ್​ ಚೇರ್​ ನೀಡಲು ಸಿಕ್ತು ಅನುಮತಿ
ದರ್ಶನ್​
Follow us
| Updated By: ರಾಜೇಶ್ ದುಗ್ಗುಮನೆ

Updated on:Sep 03, 2024 | 3:05 PM

ನಟ ದರ್ಶನ್​ ಬಳ್ಳಾರಿ ಜೈಲಿನಲ್ಲಿ ಸರ್ಜಿಕಲ್​ ಚೇರ್​ ಬೇಕು ಎಂದು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ವೈದ್ಯರು ತಪಾಸಣೆ ನಡೆಸಿ ವರದಿ ನೀಡಿದ್ದರು. ವೈದ್ಯರ ವರದಿಗಳನ್ನು ಪರಿಶೀಲಿಸಿದ ಬಳಿಕ ಸರ್ಜಿಕಲ್ ಚೇರ್​ ನೀಡಲು ಅನುಮತಿ ಸಿಕ್ಕಿದೆ. ಇದಕ್ಕಾಗಿ ಎರಡು ವರದಿಗಳನ್ನು ಪರಿಶೀಲಿಸಲಾಗಿತ್ತು. ದರ್ಶನ್​ ಕುಟುಂಬಸ್ಥರು ನೀಡಿದ ವರದಿ ಹಾಗೂ ಪರಪ್ಪನ ಅಗ್ರಹಾರ ಜೈಲಿನಿಂದ ಕೊಟ್ಟ ವರದಿಯನ್ನೂ ಪರಿಶೀಲಿಸಿದ ಬಳಿಕ ನಟನಿಗೆ ಸರ್ಜಿಕಲ್​ ನೀಡಲು ಅಪ್ರೂವಲ್​ ಸಿಕ್ಕಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ದರ್ಶನ್​ಗೆ ಸರ್ಜಿಕಲ್​ ಚೇರ್​ ನೀಡಲು ಸಿದ್ಧತೆ ನಡೆದಿದೆ. ಬಳ್ಳಾರಿ ಜೈಲಿನಲ್ಲಿ ವೈದ್ಯರು ದರ್ಶನ್​ಗೆ ಹೆಲ್ತ್ ಚೆಕಪ್ ಮಾಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಎಂಬ ವ್ಯಕ್ತಿಯ ಕೊಲೆ ಪ್ರಕರಣದಲ್ಲಿ ದರ್ಶನ್​ ಎ2 ಆಗಿದ್ದು, ಪೊಲೀಸರು ಚಾರ್ಜ್​ಶೀಟ್​ ಸಲ್ಲಿಸುವ ತಯಾರಿಯಲ್ಲಿದ್ದಾರೆ. ತನಿಖೆ ಕೊನೇ ಹಂತದಲ್ಲಿದೆ.

ಪರಪ್ಪನ ಅಗ್ರಹಾರದಲ್ಲಿ ಇದ್ದಾಗ ದರ್ಶನ್​ ವಿವಿಧ ಸವಲತ್ತುಗಳನ್ನು ಪಡೆದುಕೊಂಡಿದ್ದರು. ತಮ್ಮ ಪ್ರಭಾವ ಬಳಸಿ ವಿಐಪಿ ಟ್ರೀಟ್​ಮೆಂಟ್​ ಪಡೆದುಕೊಂಡರು. ಅದಕ್ಕೆ ಸಾಕ್ಷಿ ಎಂಬಂತೆ ಫೋಟೋ ಮತ್ತು ವಿಡಿಯೋಗಳು ವೈರಲ್​ ಆದವು. ಆ ಬಳಿಕ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳನ್ನು ರಾಜ್ಯದ ಬೇರೆ ಬೇರೆ ಜೈಲಿಗೆ ಶಿಫ್ಟ್​ ಮಾಡಲಾಯಿತು.

ಇದನ್ನೂ ಓದಿ: ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್​; ಬಳ್ಳಾರಿ ಜೈಲಿನಲ್ಲಿ ವೈದ್ಯರಿಂದ ಆರೋಗ್ಯ ತಪಾಸಣೆ

ದರ್ಶನ್​ಗೆ ಆರೋಗ್ಯ ಸಮಸ್ಯೆ ಇದೆ. ಜೈಲು ಸೇರುವುದಕ್ಕೂ ಮುನ್ನ ಅವರ ಕೈಗೆ ಸರ್ಜರಿ ಆಗಿತ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾಗ ತೂಕ ಕಳೆದುಕೊಳ್ಳುತ್ತಿದ್ದಾರೆ ಎನ್ನಲಾಗಿತ್ತು. ಹಾಗಾಗಿ ಮನೆ ಊಟಕ್ಕೆ ಮನವಿ ಮಾಡಿದ್ದರು. ಆದರೆ ಜೈಲಿನ ನಿಯಮ ಉಲ್ಲಂಘನೆ ಮಾಡಿದ ವಿಷಯ ಬಹಿರಂಗ ಆದಾಗ ಅನಾರೋಗ್ಯದ ಬಗ್ಗೆ ಅನುಮಾನ ಮೂಡಿವಂತಾಯಿತು.

ಇದು ಹೈ-ಪ್ರೊಫೈಲ್​ ಕೇಸ್​ ಆದ್ದರಿಂದ ತನಿಖೆಯ ಪ್ರತಿ ಹಂತದ ಮೇಲೆ ಕಣ್ಣು ಇಡಲಾಗಿದೆ. ದರ್ಶನ್​ ಬಳ್ಳಾರಿ ಜೈಲಿಗೆ ಸ್ಥಳಾಂತರ ಆಗುವಾಗ ಅವರ ಕೂಲಿಂಗ್​ ಗ್ಲಾಸ್​ ಧರಿಸಿದ್ದಕ್ಕೆ ಕೂಡ ಆಕ್ಷೇಪ ವ್ಯಕ್ತವಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:36 pm, Mon, 2 September 24

ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು