ಇದೇ ತಿಂಗಳ 30ಕ್ಕೆ ಬರುತ್ತಿದ್ದಾರೆ ‘ಬೆಂಗಳೂರು ಬಾಯ್ಸ್’ ಸ್ವಾಗತಿಸಲು ಸಜ್ಜಾಗಿ

Bengaluru Boys: ಹಾಸ್ಯಪ್ರಧಾನ ಬೆಂಗಳೂರು ಬಾಯ್ಸ್ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ ಆಗಿದೆ.

ಇದೇ ತಿಂಗಳ 30ಕ್ಕೆ ಬರುತ್ತಿದ್ದಾರೆ ‘ಬೆಂಗಳೂರು ಬಾಯ್ಸ್’ ಸ್ವಾಗತಿಸಲು ಸಜ್ಜಾಗಿ
ಬೆಂಗಳೂರು ಬಾಯ್ಸ್
Follow us
ಮಂಜುನಾಥ ಸಿ.
|

Updated on: Jun 26, 2023 | 8:35 AM

ಲೋ ಬಜೆಟ್ (Budget), ಹೊಸಬರ ಸಿನಿಮಾಗಳು ಇತ್ತೀಚೆಗೆ ತಮ್ಮ ಮೇಕಿಂಗ್ ಸ್ಟೈಲ್, ನವೀನ ರೀತಿಯ ಪ್ರಚಾರಗಳಿಂದ ಗಮನ ಸೆಳೆಯುತ್ತಿವೆ. ಡೇರ್​ಡೆವಿಲ್ ಮುಸ್ತಾಫಾ (Daredevil Mustafa), ಹಾಸ್ಟೆಲ್ ಹುಡುಗರು (Hostle Hudugaru), ಕಂಬ್ಳಿ ಹುಳ ಇನ್ನಿತರೆ ಸಿನಿಮಾಗಳು ಇದಕ್ಕೆ ಸಾಕ್ಷಿ. ಇದೀಗ ಇದೇ ಸಾಲಿಗೆ ಸೇರುವಂತೆ ಗಮನ ಸೆಳೆವ ಪ್ರಚಾರ, ಫಸ್ಟ್ ಲುಕ್, ಟ್ರೈಲರ್​ಗಳ ಮೂಲಕ ಬೆಂಗಳೂರು ಬಾಯ್ಸ್ ಸಿನಿಮಾ ಕುತೂಹಲ ಕೆರಳಿಸಿದೆ. ಈ ಸಿನಿಮಾ ಇನ್ನು ಕೆಲವೇ ದಿನಗಳಲ್ಲಿ ಪ್ರೇಕ್ಷಕರ ಮುಂದೆ ಬರಲಿದೆ.

ಬೆಂಗಳೂರಿನ ಪ್ರತಿಗಲ್ಲಿಗಳಲ್ಲಿಯೂ ಇರಬಹುದಾದ ಗೆಳೆಯರ ಗುಂಪುಗಳನ್ನೇ ಸ್ಪೂರ್ತಿಯಾಗಿ ಪಡೆದು ಮಾಡಿದ ಸಿನಿಮಾ ಇದಾಗಿದೆ. ಸಿನಿಮಾದಲ್ಲಿ ಹಾಸ್ಯ, ಪ್ರೇಮ, ರೊಮ್ಯಾನ್ಸ್, ಥ್ರಿಲ್ಲರ್ ಅಂಶಗಳು, ಹಾಡು, ಫೈಟ್, ಸಾಧಿಸುವ ಛಲದ ಹುಡುಗರು, ಸಂದೇಶ ಎಲ್ಲವೂ ಅಡಕವಾಗಿದೆ. ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆ ಆಗಿದ್ದು ವೈರಲ್ ಆಗಿದೆ. ಸಿನಿಮಾದ ಪೋಸ್ಟರ್​ಗಳು ಸಹ ವೈರಲ್ ಆಗಿವೆ.

ವಿ ಮೇಕರ್ಸ್ ನಿರ್ಮಾಣದಲ್ಲಿ ಮೂಡಿಬಂದಿರುವ ಬೆಂಗಳೂರು ಬಾಯ್ಸ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಇದೇ 30ರಂದು ರಾಜ್ಯಾದ್ಯಂತ ಚಿತ್ರ ರಿಲೀಸ್ ಆಗಲಿದೆ. ಬಿಡುಗಡೆ ಹೊಸ್ತಿಲಲ್ಲಿರುವ ಬೆಂಗಳೂರು ಬಾಯ್ಸ್ ಸಿನಿಮಾದ ಹೊಸ ಹಾಡು ರಿಲೀಸ್ ಆಗಿದೆ. ಕಾಮಿಡಿ ಕಿಂಗ್ ಚಿಕ್ಕಣ್ಣ ಧ್ವನಿಯಾಗಿರುವ ಟಪಾಸ್ ಹಾಡು ಈಗ ಭಾರೀ ಸದ್ದು ಮಾಡುತ್ತಿದೆ. ಸಾಫ್ಟ್‌ವೇರ್ ಗಳ ಪಾಡು ವಿವರಿಸುವ ಹಾಡು ಇದಾಗಿದೆ. ಧರ್ಮವಿಷ್ ಸಂಗೀತದ ಈ ಹಾಡಿಗೆ ಅರಸು ಅಂಥರೆ ಸಾಹಿತ್ಯ ಬರೆದಿದ್ದಾರೆ.

ಇದನ್ನೂ ಓದಿ:KGF Chapter 2: ರಾಕಿ ಸಾಮ್ರಾಜ್ಯ ವೀಕ್ಷಿಸುತ್ತಿರುವ ಬೆಂಗಳೂರು ಬಾಯ್ಸ್; ಆರ್​ಸಿಬಿ ತಂಡಕ್ಕೆ ‘ಕೆಜಿಎಫ್ ಚಾಪ್ಟರ್ 2’ ವಿಶೇಷ ಪ್ರದರ್ಶನ

ವೇಸ್ಟ್ ಎನಿಸಿಕೊಳ್ಳುವ ಲಾಸ್ಟ್ ಬೆಂಚ್ ಸ್ಟೂಡೆಂಟ್ ಬದುಕಿನಲ್ಲಿ ಸಾಧನೆಯ ಗುರಿಮುಟ್ಟಿದ ಸಾಕಷ್ಟು ಉದಾಹರಣೆಗಳಿವೆ. ಅಂತಹದ್ದೇ ಕಥಾಹಂದರ ಹೊಂದಿರುವ ಸಿನಿಮಾ ಬೆಂಗಳೂರು ಬಾಯ್ಸ್. 90ರ ದಶಕದಲ್ಲಿ ಸೂಪರ್ ಹಿಟ್ ಸಿನಿಮಾಗಳಾದ ರಣಧೀರ, ಅಂತ , ಓಂ ಹಾಗೂ ಎ ಚಿತ್ರಗಳ ಪಾತ್ರದಲ್ಲಿ ಅಭಿಷೇಕ್ ದಾಸ್, ಸಚಿನ್ ಚೆಲುವರಾಯಸ್ವಾಮಿ, ಚಂದನ್ ಆಚಾರ್, ರೋಹಿತ್ ಮಿಂಚಿದ್ದಾರೆ. ಇವರಿಗೆ ಜೋಡಿಯಾಗಿ ಪ್ರಗ್ಯ ನಯನ, ವೈನಿಧಿ ಜಗದೀಶ್, ಜಯಶ್ರೀ ಆಚಾರ್ ಹಾಗೂ ಸೋನಿ ನಟಿಸಿದ್ದಾರೆ.

ಕಾಮಿಡಿ ಕಿಂಗ್ ಚಿಕ್ಕಣ ಪ್ರಮುಖ ಪಾತ್ರವೊಂದ್ರಲ್ಲಿ ನಟಿಸಿದ್ದು, ಐಟಿಬಿಟಿ ಉದ್ಯೋಗಿ ಕಾಣಿಸಿಕೊಂಡಿದ್ದಾರೆ. ಉಮೇಶ್, ಪಿಡಿ ಸತೀಶ್, ಮೋಹನ್ ಜೂನೇಜಾ ಸೇರಿದಂತೆ ಹಿರಿಯ ಕಲಾವಿದರ ದಂಡು ಚಿತ್ರದಲ್ಲಿದೆ. ಬೆಂಗಳೂರು ಬಾಯ್ಸ್ ಸಿನಿಮಾಗೆ ‘ಅಂಬಿ ನಿಂಗೆ ವಯಸ್ಸಾಯ್ತೋ’ ಸಿನಿಮಾ ಖ್ಯಾತಿಯ ಗುರುದತ್‌ ಗಾಣಿಗ ಕ್ರಿಯೇಟಿವ್‌ ನಿರ್ದೇಶಕರಾಗಿ ಕೆಲಸ ಮಾಡಿದ್ದು, ರವಿ ಶ್ರೀರಾಮ್ ಕೋ ಡೈರೆಕ್ಟರ್ ಆಗಿ, ಡಿ ಆರ್ ಶ್ರೀನಿವಾಸ್ ಅಸೋಸಿಯೇಟ್ ಡೈರೆಕ್ಟರ್ ಆಗಿ ದುಡಿದಿದ್ದಾರೆ. ರಿಜೋ ಪಿ ಜಾನ್ ಛಾಯಾಗ್ರಹಣ, ಧರ್ಮ ವಿಶ್ ಟ್ಯೂನ್ ಹಾಕಿದ್ದಾರೆ. ಸಿನಿಮಾ ಆಸಕ್ತಿ ಹೊಂದಿರುವ ತೆಲುಗು ಮೂಲದ ವಿಕ್ರಮ್‌ ಕೆ.ವೈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಪ್ರಶಾಂತ್ ರಾವ್ ಪುರಂ ಸಹ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್