Puneeth Rajkumar: ಪುನೀತ್​ ಬಗ್ಗೆ ಅವಹೇಳನಕಾರಿ ಪೋಸ್ಟ್​ ಮಾಡಿದ್ದ ವ್ಯಕ್ತಿ ಅರೆಸ್ಟ್​; ಸೈಬರ್​ ಪೊಲೀಸರ ಬಲೆಗೆ ಬಿದ್ದ ಕಿಡಿಗೇಡಿ

Bengaluru City Police: ಪುನೀತ್​ ರಾಜ್​ಕುಮಾರ್​ ಬಗ್ಗೆ ಅವಹೇಳನಕಾರಿಯಾಗಿ ‘ರಿತ್ವಿಕ್ಸ್​’ ಎಂಬ ಕಿಡಿಗೇಡಿ ಪೋಸ್ಟ್​ ಮಾಡಿದ್ದ. ಆ ಬಗ್ಗೆ ಟಿವಿ9 ಡಿಜಿಟಲ್​ನಲ್ಲಿ ವರದಿ ಮಾಡಲಾಗಿತ್ತು. ಅದಕ್ಕೆ ‘ಬೆಂಗಳೂರು ಸಿಟಿ ಪೊಲೀಸ್​’ ಸೋಶಿಯಲ್​ ಮೀಡಿಯಾ ಖಾತೆ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

Puneeth Rajkumar: ಪುನೀತ್​ ಬಗ್ಗೆ ಅವಹೇಳನಕಾರಿ ಪೋಸ್ಟ್​ ಮಾಡಿದ್ದ ವ್ಯಕ್ತಿ ಅರೆಸ್ಟ್​; ಸೈಬರ್​ ಪೊಲೀಸರ ಬಲೆಗೆ ಬಿದ್ದ ಕಿಡಿಗೇಡಿ
ಪುನೀತ್​ ಬಗ್ಗೆ ಅವಹೇಳನಕಾರಿ ಪೋಸ್ಟ್​ ಮಾಡಿದ್ದ ವ್ಯಕ್ತಿ ಅರೆಸ್ಟ್
Follow us
TV9 Web
| Updated By: ಮದನ್​ ಕುಮಾರ್​

Updated on:Nov 02, 2021 | 8:37 AM

ನಟ ಪುನೀತ್​ ರಾಜ್​ಕುಮಾರ್​ ಅವರನ್ನು ಕಳೆದುಕೊಂಡು ಅಪಾರ ಸಂಖ್ಯೆಯ ಅಭಿಮಾನಿಗಳು ಕಣ್ಣೀರು ಸುರಿಸುತ್ತಿದ್ದಾರೆ. ಈ ನಡುವೆಯೇ ಕಿಡಿಗೇಡಿಯೊಬ್ಬ ಅಪ್ಪು ಬಗ್ಗೆ ಅವಹೇಳನಕಾರಿಯಾಗಿ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದ. ಆತನ ಕೃತ್ಯಕ್ಕೆ ತೀವ್ರ ಖಂಡನೆ ವ್ಯಕ್ತವಾದ ಬೆನ್ನಲ್ಲೇ ಬೆಂಗಳೂರು ಸೈಬರ್ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಆತನನ್ನು ಬಂಧಿಸಿರುವ ಬಗ್ಗೆ ಬೆಂಗಳೂರು ನಗರ ಪೊಲೀಸ್​ ಆಯುಕ್ತ ಕಮಲ್​ ಪಂತ್​​ ಅವರು ಟ್ವಿಟರ್​ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಕಿಡಿಗೇಡಿಯ ಪೋಸ್ಟ್​ ಬಗ್ಗೆ ಟಿವಿ9 ಡಿಜಿಟಲ್​ನಲ್ಲಿ ಸೋಮವಾರ (ನ.1) ವರದಿ ಮಾಡಲಾಗಿತ್ತು. ಅದಕ್ಕೆ ‘ಬೆಂಗಳೂರು ಸಿಟಿ ಪೊಲೀಸ್​’ ಸೋಶಿಯಲ್​ ಮೀಡಿಯಾ ಖಾತೆ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ‘ಆರೋಪಿಯನ್ನು ಬಂಧಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತದೆ’ ಎಂದು ತಿಳಿಸಲಾಗಿದೆ.

ಪುನೀತ್​ ನಿಧನದ ಬಳಿಕ ಬೆಂಗಳೂರಿನಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿತ್ತು. ಬೆಂಗಳೂರಿನಲ್ಲಿ ನೆಲೆಸಿರುವ ಉತ್ತರ ಭಾರತದ ಮಂದಿಗೆ ಇದರಿಂದ ಕಿರಿಕಿರಿ ಆಗಿತ್ತು. ಹಾಗಾಗಿ ಪುನೀತ್​ ರಾಜ್​ಕುಮಾರ್​​ಗೆ ಅಗೌರವ ತೋರುವಂತಹ ಪೋಸ್ಟ್​ಗಳನ್ನು ಕೆಲವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ರಿತ್ವಿಕ್ಸ್​ (ritvikks) ಎಂಬ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ತೀರಾ ಅಶ್ಲೀಲ ಪದಗಳನ್ನು ಬಳಸಿ ಪುನೀತ್​ ರಾಜ್​ಕುಮಾರ್​ ಅವರಿಗೆ ಅವಮಾನ ಮಾಡಲಾಗಿತ್ತು.

ನಿಷೇಧದ ನಡುವೆಯೂ ರಿತ್ವಿಕ್ಸ್​ ಎಂಬ ಈ ವ್ಯಕ್ತಿಗೆ ಲಿಕ್ಕರ್​ ಸಿಕ್ಕಿತ್ತು. ಬಳಿಕ ಅದನ್ನು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿ, ಅಶ್ಲೀಲ ಪದಗಳಿಂದ ಪುನೀತ್​ ರಾಜ್​ಕುಮಾರ್​ ಅವರನ್ನು ಅವಮಾನಿಸಿದ್ದ. ಬಿಯರ್​ ಬಾಟಲಿಯ ಚಿತ್ರ ಹಂಚಿಕೊಂಡು, ‘ರಾಜ್​ಕುಮಾರ್​​ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ಆತನನ್ನು ನೆನಪಿಟ್ಟುಕೊಳ್ಳಿ. ಮರೆಯಬೇಡಿ. ಯಾಕೆಂದರೆ, ಇದನ್ನು ಕುಡಿದ ಬಳಿಕ ಅವನ ಸಮಾಧಿ ಮೇಲೆ ನಾವು ಮೂ** ಮಾಡುತ್ತೇವೆ’ ಎಂದು ಆತ ಬರೆದುಕೊಂಡಿದ್ದ.

ಕಿಡಿಗೇಡಿಯ ಈ ಪೋಸ್ಟ್​ಗೆ ಜನರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಕಿಚ್ಚ ಸುದೀಪ್​ ಪುತ್ರಿ ಸಾನ್ವಿ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದರು. ‘ಕೇವಲ ಆಲ್ಕೋಹಾಲ್​ಗಾಗಿ ಪುನೀತ್​ ಬಗ್ಗೆ ಇಂಥ ವರ್ತನೆಯೇ? ಜನರಲ್ಲಿ ಮನುಷ್ಯತ್ವ ಉಳಿದಿಲ್ಲವೇ?’ ಎಂದು ಸಾನ್ವಿ ಛೀಮಾರಿ ಹಾಕಿದ್ದರು. ಎಲ್ಲದರ ಫಲವಾಗಿ ಈಗ ಆ ಕಿಡಿಗೇಡಿಯ ಬಂಧನ ಆಗಿದೆ. ಪರ ರಾಜ್ಯದಿಂದ ಬಂದು, ಕನ್ನಡ ಭಾಷೆ ಮತ್ತು ಸಂಸ್ಕೃತಿ ಬಗ್ಗೆ ಕಿಂಚಿತ್ತೂ ಗೌರವ ಇಲ್ಲದಂತೆ ನಡೆದುಕೊಳ್ಳುತ್ತಿರುವ ಇಂಥ ಜನರಿಗೆ ಈ ಘಟನೆಯಿಂದ ತಕ್ಕ ಪಾಠ ಕಲಿಸಬೇಕಿದೆ.

ಅಪ್ಪು ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿತ್ತು. ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದೇ ಇರಲಿ ಎಂಬುದು ಈ ಆದೇಶದ ಹಿಂದಿನ ಉದ್ದೇಶ ಆಗಿತ್ತು. ಕುಡಿದ ಅಮಲಿನಲ್ಲಿ ಅಭಿಮಾನಿಗಳು ಭಾವೋದ್ವೇಗಕ್ಕೆ ಒಳಗಾಗಬಹುದು. ಅದನ್ನು ತಪ್ಪಿಸಲು ಮದ್ಯ ಮಾರಾಟಕ್ಕೆ ಬ್ರೇಕ್​ ಹಾಕಲಾಗಿತ್ತು.

ಇದನ್ನೂ ಓದಿ:

Puneeth Rajkumar: ‘ಪುನೀತ್​ ಅತಿಯಾಗಿ ಜಿಮ್​ ಮಾಡಿದ್ರು’: ಕರಾಳ ಶುಕ್ರವಾರದ ಘಟನೆ ವಿವರಿಸಿದ ಸೆಕ್ಯೂರಿಟಿ ಸಿಬ್ಬಂದಿ

ಪುನೀತ್​ ಅಂತ್ಯಕ್ರಿಯೆ ಮರುದಿನ ಹೇಗಿದೆ ಶಿವಣ್ಣನ ದಿನಚರಿ? ನೋವು ನುಂಗಿಕೊಂಡು ಮುಂದಿನ ಹೆಜ್ಜೆ ಇಟ್ಟ ಶಿವರಾಜ್​ಕುಮಾರ್​

Published On - 8:11 am, Tue, 2 November 21

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ