ಜನವರಿ 29ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮೂರು ಕಡೆಗಳಲ್ಲಿ ಚಿತ್ರ ಪ್ರದರ್ಶನ
ಪ್ರತಿ ವರ್ಷ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಸಿನಿಮೋತ್ಸವ ನಡೆಯುತ್ತದೆ. ಈ ಬಾರಿ ಚಲನಚಿತ್ರೋತ್ಸವದಲ್ಲಿ 60 ದೇಶಗಳ ಸಿನಿಮಾಗಳ ಪ್ರದರ್ಶನ ಆಗಲಿವೆ. ಎಲ್ಲಾ ಸಿನಿಮಾಗಳನ್ನು ಒಂದೇ ಕಡೆ ನೋಡಲು ಅವಕಾಶ ಇರಲಿದೆ. ಆಸ್ಕರ್ ಪ್ರಶಸ್ತಿಗೆ ಶಾರ್ಟ್ ಲಿಸ್ಟ್ ಆಗಿರುವ ಸಿನಿಮಾ ಸಹ ಪ್ರದರ್ಶನ ಆಗಲಿದೆ ಎಂಬುದು ವಿಶೇಷ. ಈ ವರ್ಷ ಮಹಿಳಾ ಸಬಲೀಕರಣ ಥೀಮ್ ಬಗ್ಗೆ ಚರ್ಚೆ ನಡೆಯಲಿದೆ.

ಪ್ರತಿ ಬಾರಿಯೂ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಸಿನಿಮೋತ್ಸವ ನಡೆಯುತ್ತದೆ. ಈ ಸಿನಿಮೋತ್ಸವದಲ್ಲಿ ವಿವಿಧ ಸಿನಿಮಾಗಳು ಪ್ರದರ್ಶನ ಕಾಣುತ್ತವೆ. ಇದರ ಜೊತೆಗೆ ಕನ್ನಡದ ತಂತ್ರಜ್ಞರು, ಕಲಾವಿದರ ಜೊತೆಗೆ ಪರಭಾಷಾ ಕಲಾವಿದರು ಹಾಗೂ ನಿರ್ದೇಶಕರ ಜೊತೆ ಹಲವು ವಿಷಯಗಳನ್ನು ಚರ್ಚಿಸೋ ಅವಕಾಶ ಸಿಗುತ್ತದೆ. ಈಗ 2026ನೇ ಸಾಲಿನ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ದಿನಾಂಕ ನಿಗದಿ ಆಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ಜ.29ರಿಂದ ಫೆ.6ರವರೆಗೆ ಸಿನಿಮೋತ್ಸವ ನಡೆಯಲಿದೆ. ಒಂಭತ್ತು ದಿನಗಳ ಕಾಲ ಈ ಸಿನಿ ಹಬ್ಬ ಇರಲಿದೆ. ಈ ಮೊದಲು ಒರಿಯನ್ ಮಾಲ್ನಲ್ಲಿ ಮಾತ್ರ ಸಿನಿಮೋತ್ಸವ ನಡೆಯುತ್ತಿತ್ತು. ಆದರೆ, ಈ ಬಾರಿ ಮೂರು ಕಡೆಗಳಲ್ಲಿ ಸಿನಿಮಾ ಪ್ರದರ್ಶನ ಕಾಣಲಿದೆ. ಲುಲು ಮಾಲ್, ಚಾಮರಾಜಪೇಟೆಯ ಡಾ.ರಾಜ್ಕುಮಾರ್ ಭವನ ಮತ್ತು ಬನಶಂಕರಿಯ ಸುಚಿತ್ರಾ ಫಿಲ್ಮ್ ಸೊಸೈಟಿಯಲ್ಲಿ ಸಿನಿಮಾ ಪ್ರದರ್ಶನ ಆಗಲಿದೆ.
ಬೆಂಗಳೂರಿನಲ್ಲಿ ನಡೆಯುವ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಇಲ್ಲಿಯವರೆಗೆ 110 ಸಿನಿಮಾಗಳು ಆಯ್ಕೆ ಆಗಿವೆ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಮೂರೂವರೆ ಲಕ್ಷ ಬೆಲೆಯ ಗೌನ್ ಧರಿಸಿ ಕಾನ್ ಸಿನಿಮೋತ್ಸವದಲ್ಲಿ ಮಿಂಚಿದ ಜಾನ್ವಿ ಕಪೂರ್
ಚಲನಚಿತ್ರೋತ್ಸವದಲ್ಲಿ 60 ದೇಶಗಳ ಸಿನಿಮಾಗಳ ಪ್ರದರ್ಶನ ಆಗಲಿವೆ. ಎಲ್ಲಾ ಸಿನಿಮಾಗಳನ್ನು ಒಂದೇ ಕಡೆ ನೋಡಲು ಅವಕಾಶ ಇರಲಿದೆ. ಆಸ್ಕರ್ ಪ್ರಶಸ್ತಿಗೆ ಶಾರ್ಟ್ ಲಿಸ್ಟ್ ಆಗಿರುವ ಸಿನಿಮಾ ಸಹ ಪ್ರದರ್ಶನ ಆಗಲಿದೆ ಎಂಬುದು ವಿಶೇಷ. ಈ ವರ್ಷ ಮಹಿಳಾ ಸಬಲೀಕರಣ ಥೀಮ್ ಬಗ್ಗೆ ಚರ್ಚೆ ನಡೆಯಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.




