AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖೈದಿ ನಂ. 6106 ಹಾಕಿಕೊಂಡು ಆಟೋ ಚಾಲಕನ ಹುಚ್ಚಾಟ; ಬುದ್ಧಿ ಕಲಿಸಿದ ಪೊಲೀಸರು

ಅತಿರೇಕದಿಂದ ವರ್ತಿಸುವ ಮೂಲಕ ದರ್ಶನ್ ಅಭಿಮಾನಿಗಳು ಸುದ್ದಿ ಆಗುತ್ತಿದ್ದಾರೆ. ನ್ಯಾಯಾಂಗ ಬಂಧನದಲ್ಲಿ ಇರುವ ದರ್ಶನ್​ಗೆ 6106 ಖೈದಿ ಸಂಖ್ಯೆ ನೀಡಲಾಗಿದೆ. ಹಲವು ವಾಹನಗಳ ಮೇಲೆ ಈ ಸಂಖ್ಯೆಯ ಸ್ಟಿಕ್ಕರ್​ಗಳನ್ನು ಕೆಲವರು ಹಾಕಿಸಿದ್ದಾರೆ. ಬೆಂಗಳೂರಿನ ಆಟೋ ಚಾಲಕನೊಬ್ಬ ಈ ಸ್ಟಿಕ್ಕರ್​ ಹಾಕಿಸಿಕೊಂಡಿದ್ದೂ ಅಲ್ಲದೇ, ಅಪಾಯಕಾರಿಯಾಗಿ ಆಟೋ ಚಲಾಯಿಸಿದ್ದಾನೆ.

ಖೈದಿ ನಂ. 6106 ಹಾಕಿಕೊಂಡು ಆಟೋ ಚಾಲಕನ ಹುಚ್ಚಾಟ; ಬುದ್ಧಿ ಕಲಿಸಿದ ಪೊಲೀಸರು
ಆಟೋ ಚಾಲಕನ ಬಂಧನ
ಮದನ್​ ಕುಮಾರ್​
|

Updated on: Jul 09, 2024 | 6:47 PM

Share

ಕೊಲೆ ಆರೋಪದಲ್ಲಿ ನಟ ದರ್ಶನ್​ ಅರೆಸ್ಟ್​ ಆದ ಬಳಿಕ ಅವರ ಅಭಿಮಾನಿಗಳಲ್ಲಿ ಕೆಲವರು ಅತಿಯಾಗಿ ವರ್ತಿಸುತ್ತಿದ್ದಾರೆ. ದರ್ಶನ್​ಗೆ ಜೈಲಿನಲ್ಲಿ ನೀಡಿದ ಖೈದಿ ನಂಬರ್​ ಅನ್ನು ಹೆಮ್ಮೆಯ ರೀತಿಯಲ್ಲಿ ಫ್ಯಾನ್ಸ್​ ಬಳಸುತ್ತಿದ್ದಾರೆ. ಅದಕ್ಕೆ ಲೇಟೆಸ್ಟ್​ ಉದಾಹರಣೆ ಎಂಬಂತೆ ಬೆಂಗಳೂರಿನಲ್ಲಿ ಆಟೋ ಚಾಲಕನೊಬ್ಬ ಹುಚ್ಚಾಟ ಪ್ರದರ್ಶಿಸಿದ್ದಾನೆ. ತನ್ನ ಆಟೋ ಮೇಲೆ ‘ಡಿ ಬಾಸ್​ 6106’ ಎಂದು ಸ್ಟಿಕ್ಕರ್​ ಅಂಟಿಸಿಕೊಂಡು ವೀಲ್ಹಿಂಗ್​ ಮಾಡಿದ್ದಾನೆ. ಪೊಲೀಸರು ಆತನನ್ನು ಬಂಧಿಸಿ ಖಡಕ್​ ಎಚ್ಚರಿಕೆ ನೀಡಿದ್ದಾರೆ.

ಜಗದೀಶ್ ಅಲಿಯಾಸ್ ಜಗ್ಗ ಎಂಬ ಆಟೋ ಚಾಲಕನು ಈ ರೀತಿ ಅಪಾಯಕಾರಿಯಾಗಿ ಆಟೋ ಚಾಲನೆ ಮಾಡಿದ್ದಾನೆ. ವಾಹನ ದಟ್ಟಣೆ ಇರುವ ರಸ್ತೆಗಳಲ್ಲಿ ಆಟೋ ವೀಲ್ಹಿಂಗ್​ ಮಾಡಿದ್ದಾನೆ. ಸೋಶಿಯಲ್​ ಮೀಡಿಯಾದಲ್ಲಿ ಆತನ ಹುಚ್ಚಾಟದ ವಿಡಿಯೋ ವೈರಲ್​ ಆಗಿದೆ. ಅದನ್ನು ನೋಡಿದ ಕಾಮಾಕ್ಷಿಪಾಳ್ಯ ಟ್ರಾಫಿಕ್​ ಪೊಲೀಸರು ಆಟೋ ಚಾಲಕನನ್ನು ಬಂಧಿಸಿದ್ದಾರೆ.

ಆಟೋ ಚಾಲಕ ವೀಲ್ಹಿಂಗ್​ ಮಾಡಿದ ದೃಶ್ಯ ವೈರಲ್​ ಆದ ಬಳಿಕ ಜನರಿಂದ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ವಾಹನದ ಸಂಖ್ಯೆಯನ್ನು ಆಧರಿಸಿ ಆರೋಪಿಯ ಪತ್ತೆ ಹಚ್ಚಿದ ಪೊಲೀಸರು ಕೂಡಲೇ ಆತನನ್ನು ಬಂಧಿಸಿದರು. ಆತನಿಗೆ ಎಚ್ಚರಿಕೆ ಕೊಟ್ಟು, ಸ್ಪೇಷನ್​ ಬೇಲ್​ ಮೇಲೆ ಬಿಡುಗಡೆ ಮಾಡಿದ್ದಾರೆ. ಅಲ್ಲದೇ, ಆಟೋ ಹಿಂದೆ ಹಾಕಿಸಿದ್ದ ‘ಡಿ ಬಾಸ್​ 6106’ ಎಂಬ ಸ್ಟಿಕ್ಕರ್ ಅನ್ನು ಪೊಲೀಸರು ತೆಗೆಸಿದ್ದಾರೆ.

ಇದನ್ನೂ ಓದಿ: ಇಡೀ ಪ್ರಕರಣದಲ್ಲಿ ದರ್ಶನ್​ ಎಡವಿದ್ದು ಎಲ್ಲಿ? ಎಳೆಎಳೆಯಾಗಿ ವಿವರಿಸಿದ ಮುಖ್ಯಮಂತ್ರಿ ಚಂದ್ರು

‘ಖೈದಿ ನಂಬರ್​ 6106’ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವೇ ದಿನಗಳ ಹಿಂದೆ ಇನ್ನೊಂದು ಅತಿರೇಕದ ಘಟನೆ ವರದಿ ಆಗಿತ್ತು. ಪುಟ್ಟ ಮಗುವಿಗೆ ಈ ನಂಬರ್​ನ ಬಟ್ಟೆ ಹಾಕಿಸಿ ಫೋಟೋಶೂಟ್​ ಮಾಡಿಸಲಾಗಿತ್ತು. ಅದನ್ನು ಕಂಡು ನೆಟ್ಟಿಗರು ತೀವ್ರ ಟೀಕೆ ವ್ಯಕ್ತಪಡಿಸಿದ್ದರು. ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ದರ್ಶನ್​ ಜೈಲು ವಾಸು ಅನುಭವಿಸುತ್ತಿದ್ದಾರೆ. ಅವರ ಜೊತೆ ಪವಿತ್ರಾ ಗೌಡ ಮುಂತಾದವರು ಕೂಡ ನ್ಯಾಯಾಂಗ ಬಂಧನದಲ್ಲಿದ್ದಾರೆ. ಜೈಲಿನಲ್ಲಿ ಇರುವ ದರ್ಶನ್​ ಆರೋಗ್ಯ ಹದಗೆಡುತ್ತಿದೆ ಎಂಬ ಮಾಹಿತಿ ಕೇಳಿಬರುತ್ತಿದೆ.

ವರದಿ: ಪ್ರದೀಪ್

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಪತ್ನಿ ಸೋನಲ್ ಕಡೆಯಿಂದ ಸಿಕ್ಕ ವಿಶೇಷ ಉಡುಗೊರೆ ಬಗ್ಗೆ ಹೇಳಿದ ತರುಣ್ ಸುಧೀರ್ 
ಪತ್ನಿ ಸೋನಲ್ ಕಡೆಯಿಂದ ಸಿಕ್ಕ ವಿಶೇಷ ಉಡುಗೊರೆ ಬಗ್ಗೆ ಹೇಳಿದ ತರುಣ್ ಸುಧೀರ್ 
ಮಹಾಲಯ ಅಮಾವಾಸ್ಯೆ: ಪಿತೃಗಳಿಗೆ ಕೃತಜ್ಞತೆ ಸಲ್ಲಿಸುವ ಈ ದಿನದ ಮಹತ್ವ
ಮಹಾಲಯ ಅಮಾವಾಸ್ಯೆ: ಪಿತೃಗಳಿಗೆ ಕೃತಜ್ಞತೆ ಸಲ್ಲಿಸುವ ಈ ದಿನದ ಮಹತ್ವ
ಬೆಂಗಳೂರು: ಬ್ರಿಗೇಡ್ ರಸ್ತೆ ಲೇಡಿಸ್​​ ಪಬ್​​ಗಳ ಮೇಲೆ ಪೊಲೀಸರ ದಿಢೀರ್ ದಾಳಿ
ಬೆಂಗಳೂರು: ಬ್ರಿಗೇಡ್ ರಸ್ತೆ ಲೇಡಿಸ್​​ ಪಬ್​​ಗಳ ಮೇಲೆ ಪೊಲೀಸರ ದಿಢೀರ್ ದಾಳಿ
ಮೈಸೂರಿನ ಪ್ರತಿಭೆ ರಿಷಿತಾ ಸಾಧನೆ
ಮೈಸೂರಿನ ಪ್ರತಿಭೆ ರಿಷಿತಾ ಸಾಧನೆ
ಸಿಜೆಪಿ ಪ್ರತಿಭಟನೆ ನಿಷೇಧಿಸಿ: ಎಲ್ಲ ರಾಜ್ಯಗಳಿಗೆ ಗೃಹ ಇಲಾಖೆ ಸೂಚನೆ
ಸಿಜೆಪಿ ಪ್ರತಿಭಟನೆ ನಿಷೇಧಿಸಿ: ಎಲ್ಲ ರಾಜ್ಯಗಳಿಗೆ ಗೃಹ ಇಲಾಖೆ ಸೂಚನೆ
ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ