ದರ್ಶನ್ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ
ನಟ ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್ನಲ್ಲಿ ಜಾಮೀನು ಸಿಕ್ಕು ಹಲವು ದಿನಗಳು ಕಳೆದಿವೆ. ಅನಾರೋಗ್ಯದ ಕಾರಣದಿಂದ ಅವರು ಆಸ್ಪತ್ರೆಗೆ ಹೋಗಿ ಬರುತ್ತಿದ್ದಾರೆ. ಆದರೆ ಈಗ ಜಾಮೀನು ರದ್ದಾಗುವ ಭಯ ಕಾಡುತ್ತಿದೆ. ದರ್ಶನ್ಗೆ ನೀಡಿದ ಜಾಮೀನು ರದ್ದು ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್ಗೆ ಬೆಂಗಳೂರು ಪೊಲೀಸರು ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು ಹತ್ಯೆ ಮಾಡಿದ ಆರೋಪದಲ್ಲಿ ನಟ ದರ್ಶನ್ ಹಾಗೂ ಅವರ ಸಹಚರರು ಜೈಲು ಸೇರಿದ್ದರು. ಕೆಲವು ತಿಂಗಳ ಕಾಲ ಜೈಲು ವಾಸ ಅನುಭವಿಸಿದ್ದ ಅವರಿಗೆ ಇತ್ತೀಚೆಗೆ ಹೈಕೋರ್ಟ್ ಜಾಮೀನು ನೀಡಿತ್ತು. ದರ್ಶನ್ಗೆ ಬೆನ್ನು ನೋವು ಕಾಡುತ್ತಿದೆ. ಹೆಚ್ಚಿನ ಚಿಕಿತ್ಸೆ ಬಗ್ಗೆ ಅವರು ವೈದ್ಯರ ಜೊತೆ ಮಾತುಕತೆ ನಡೆಸಿದ್ದಾರೆ. ಈ ನಡುವೆ ದರ್ಶನ್ ಅವರಿಗೆ ಹೊಸ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ದರ್ಶನ್ಗೆ ನೀಡಿರುವ ಬೇಲ್ ರದ್ದು ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.
ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಒಟ್ಟು 7 ಆರೋಪಿಗಳ ಜಾಮೀನು ರದ್ದು ಮಾಡುವಂತೆ ಕೋರಿ ಪೊಲೀಸರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಮುಂದಿನ ವಾರ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದೆ. ಇದರಿಂದಾಗಿ ದರ್ಶನ್ ಮತ್ತು ಅವರ ಸಹಚರರಿಗೆ ಟೆನ್ಷನ್ ಶುರುವಾಗಿದೆ.
ಪರಪ್ಪನ ಅಗ್ರಹಾರದಲ್ಲಿ ಜೈಲಿನ ನಿಯಮಗಳನ್ನು ಗಾಳಿಗೆ ತೂರಿದ್ದು ಬಹಿರಂಗ ಆದ ಬಳಿಕ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಕಳಿಸಲಾಗಿತ್ತು. ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಇದ್ದಾಗ ದರ್ಶನ್ಗೆ ತೀವ್ರ ಬೆನ್ನು ನೋವು ಕಾಣಿಸಿಕೊಂಡಿತ್ತು. ನಡೆದಾಡಲು ಕೂಡ ಅವರು ಕಷ್ಟಪಡುತ್ತಿದ್ದರು. ಕೂಡಲೇ ಶಸ್ತ್ರ ಚಿಕಿತ್ಸೆಯ ಅಗತ್ಯ ಇದೆ ಎಂದು ವೈದ್ಯರು ಸೂಚನೆ ನೀಡಿದ್ದರು. ಆ ವರದಿಯನ್ನು ಪರಿಗಣಿಸಿ ಮಧ್ಯಂತರ ಜಾಮೀನು ನೀಡಲಾಯಿತು. ಮಧ್ಯಂತರ ಜಾಮೀನು ಅವಧಿ ಮುಗಿಯುತ್ತಿದ್ದಂತೆಯೇ ದರ್ಶನ್ಗೆ ರೆಗ್ಯುಲರ್ ಬೇಲ್ ಸಿಕ್ಕಿತ್ತು.
ಇದನ್ನೂ ಓದಿ: ವಾಸಿಯಾಗದ ನೋವು, ಆಪರೇಷನ್ಗೆ ಒಪ್ಪಿಗೆ ಕೊಟ್ಟ ದರ್ಶನ್; ‘ಡೆವಿಲ್’ ಪರಿಸ್ಥಿತಿ ಏನು?
ಜಾಮೀನು ಸಿಕ್ಕು ಸಾಕಷ್ಟು ದಿನಗಳು ಕಳೆದರೂ ಕೂಡ ದರ್ಶನ್ ಅವರು ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿಲ್ಲ. ಜಾಮೀನು ಸಿಕ್ಕ ಬಳಿಕ ಅವರು ಕೆಂಗೇರಿಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದರು. ಇತ್ತೀಚೆಗೆ ಅವರು ನ್ಯಾಯಾಲಯದಿಂದ ಅನುಮತಿ ಪಡೆದು ಮೈಸೂರಿನ ಆಸ್ಪತ್ರೆಗೆ ಭೇಟಿ ನೀಡಿದ್ದರು. ಅಲ್ಲದೇ, ಮೈಸೂರಿನ ಟಿ. ನರಸೀಪುರ ರಸ್ತೆಯಲ್ಲಿರುವ ಫಾರ್ಮ್ ಹೌಸ್ಗೂ ದರ್ಶನ್ ತೆರಳಿದ್ದರು. ಈಗ ಕೋರ್ಟ್ ಅನುಮತಿ ನೀಡಿದ್ದ ಅವಧಿ ಮುಕ್ತಾಯ ಆದ ಹಿನ್ನೆಲೆಯಲ್ಲಿ ಅವರು ಬೆಂಗಳೂರಿಗೆ ವಾಪಸಾಗಿದ್ದಾರೆ. ಸುಪ್ರೀಂ ಕೋರ್ಟ್ ನೀಡಲಿರುವ ತೀರ್ಪಿನ ಆಧಾರದ ಮೇಲೆ ದರ್ಶನ್ ಹಾಗೂ ಇತರೆ ಆರೋಪಿಗಳ ಭವಿಷ್ಯ ನಿರ್ಧಾರ ಆಗಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.