AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತ ಪ್ರಕರಣದಲ್ಲಿ ನಟ ನಾಗಭೂಷಣ್​ಗೆ ಹೆಚ್ಚಿತು ಸಂಕಷ್ಟ; ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಕೆ

ಆ್ಯಕ್ಸಿಡೆಂಟ್ ಪ್ರಕರಣ ಸಂಬಂಧ ಕುಮಾರಸ್ವಾಮಿ ಲೇಔಟ್​​ ಟ್ರಾಫಿಕ್ ಪೊಲೀಸರು 80 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.  60 ಸಾಕ್ಷಿಗಳನ್ನು ಕಲೆಹಾಕಲಾಗಿದೆ. ಸಿಸಿಟಿವಿ ಮಾತ್ರವಲ್ಲದೆ ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ.

ಅಪಘಾತ ಪ್ರಕರಣದಲ್ಲಿ ನಟ ನಾಗಭೂಷಣ್​ಗೆ ಹೆಚ್ಚಿತು ಸಂಕಷ್ಟ; ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಕೆ
ನಾಗಭೂಷಣ್
ಪ್ರಜ್ವಲ್ ಅಮೀನ್​, ಉಡುಪಿ
| Updated By: ರಾಜೇಶ್ ದುಗ್ಗುಮನೆ|

Updated on:Nov 12, 2023 | 8:27 AM

Share

ಚಿತ್ರರಂಗದಲ್ಲಿ ಈಗತಾನೇ ಹೆಸರು ಮಾಡುತ್ತಿರುವ ನಾಗಭೂಷಣ್ (Naga Bhushan) ಅವರು ತೊಂದರೆ ಒಂದಕ್ಕೆ ಸಿಲುಕಿದ್ದರು. ಅಪಘಾತ ಪ್ರಕರಣದಲ್ಲಿ ಅವರಿಗೆ ಹಿನ್ನಡೆ ಆಗಿದೆ. ಈಗ ಈ ಪ್ರಕರಣದಲ್ಲಿ ನಾಗಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ. ಸದ್ಯ 60 ಸಾಕ್ಷಿಗಳನ್ನು ಪೊಲೀಸರು ಕಲೆಹಾಕಿದ್ದಾರೆ. ಇದರಿಂದ ನಾಗಭೂಷಣ್ ಅವರಿಗೆ ಸಂಕಷ್ಟ ಮತ್ತಷ್ಟು ಹೆಚ್ಚಲಿದೆ. ಮುಂದಿನ ದಿನಗಳಲ್ಲಿ ಪ್ರಕರಣ ಯಾವ ರೀತಿಯಲ್ಲಿ ಸಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಅಕ್ಟೋಬರ್ 30ರಂದು ಬೆಂಗಳೂರಿನ ಕೋಣನ ಕುಂಟೆ ಸಮೀಪ ಅಪಘಾತ ಸಂಭವಿಸಿತ್ತು. ನಾಗಭೂಷಣ್ ಓಡಿಸುತ್ತಿದ್ದ ಕಾರು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಳಿಕ ವಿದ್ಯುತ್ ಕಂಬಕ್ಕೆ ಗುದ್ದಿತ್ತು. ಈ ವೇಳೆ ಪ್ರೇಮಾ ಎಂಬುವವರು ಮೃತಪಟ್ಟರೆ, ಅವರ ಪತಿ ಕೃಷ್ಣ ಅವರಿಗೆ ಗಂಭೀರ ಗಾಯವಾಗಿತ್ತು. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಚೇತರಿಕೆ ಕಂಡಿದ್ದು, ಅವರು ಹೇಳಿಕೆ ದಾಖಲು ಮಾಡಿದ್ದಾರೆ.

ಆ್ಯಕ್ಸಿಡೆಂಟ್ ಪ್ರಕರಣ ಸಂಬಂಧ ಕುಮಾರಸ್ವಾಮಿ ಲೇಔಟ್​ ಟ್ರಾಫಿಕ್ ಪೊಲೀಸರು 80 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.  60 ಸಾಕ್ಷಿಗಳನ್ನು ಕಲೆಹಾಕಲಾಗಿದೆ. ಸಿಸಿಟಿವಿ ಮಾತ್ರವಲ್ಲದೆ ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಅಪಘಾತದ ವೇಳೆ ಪ್ರೇಮ ಅವರು ಮೃತಪಟ್ಟಿದ್ದಾರೆ. ಅವರ ಪತಿ ಕೃಷ್ಣ ಅವರು ಚೇತರಿಕೆ ಕಂಡಿದ್ದಾರೆ. ಈ ಹಿನ್ನೆಲೆ ಮುಖ್ಯವಾಗಿ ಕೃಷ್ಣಾ ಅವರ ಹೇಳಿಕೆಯನ್ನು ಪೊಲೀಸರು ದಾಖಲಿಸಿದ್ದಾರೆ.

ಪ್ರೇಮಾ ಹಾಗೂ ಕೃಷ್ಣ ಅವರು ಪಾದಾಚಾರಿ ಮಾರ್ಗದಿಂದ ನೇರ ರಸ್ತೆಗೆ ಇಳಿದಿದ್ದರು ಎಂದು ಹೇಳಿಕೆ ನೀಡಿದ್ದರು. ಏಕಾಏಕಿ ಕಾರಿಗೆ ಅಡ್ಡಲಾಗಿ ಬಂದ ಕಾರಣ ಕಾರ್ ಕಂಟ್ರೋಲ್ ಸಿಗದೆ ಆ್ಯಕ್ಸಿಡೆಂಟ್ ಅಗಿದೆ ಎಂದು ನಾಗಭೂಷಣ್ ಹೇಳಿಕೆ ನೀಡಿದ್ದರು. ಆದರೆ, ಕೃಷ್ಣ ಅವರ ಹೇಳಿಕೆಯಲ್ಲಿ ಎಲ್ಲವೂ ಉಲ್ಟಾ ಆಗಿದೆ.

ಇದನ್ನೂ ಓದಿ: ‘ತಂದೆಯನ್ನು ಅಪಘಾತದಲ್ಲಿ ಕಳೆದುಕೊಂಡವನು ನಾನು, ಆ ನೋವು ಗೊತ್ತಿದೆ’; ಸುದ್ದಿಗೋಷ್ಠಿಯಲ್ಲಿ ಭಾವುಕರಾದ ನಾಗಭೂಷಣ್

‘ವೇಗವಾಗಿ ಬಂದ ಕಾರು ಫುಟ್​ಪಾತ್‌ ಮೇಲೆ ಹೋಗುತಿದ್ದ ನಾನು ಮತ್ತ ನನ್ನ ಪತ್ನಿ ಪ್ರೇಮ ಅವರಿಗೆ‌ ಡಿಕ್ಕಿ ಯಾಗಿತ್ತು’ ಎಂದು ಕೃಷ್ಣ ಹೇಳಿಕೆ ನೀಡಿದ್ದಾರೆ. ಇನ್ನು, ಆರ್​ಟಿಒ ಅಧಿಕಾರಿಗಳು ವರದಿ ನೀಡಿದ್ದಾರೆ. ಕಾರಿನಲ್ಲಿ ಯಾವ ಲೋಪವೂ ಆಗಿರಲಿಲ್ಲ. ಅಜಾಗರೂಕತೆಯಿಂದ ಮತ್ತು ಅತಿವೇಗದಿಂದ ಅಪಘಾತ ಓಡಿಸಿದ್ದಕ್ಕೆ ಅಪಘಾತವಾಗಿದೆ ಎಂದು ವರದಿ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:07 am, Sun, 12 November 23