AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾತ್ರಿಗೆ ನರ್ತನ್ ಹೊಸ ಸಿನಿಮಾ ಘೋಷಣೆ; ‘ಭೈರತಿ ರಣಗಲ್’ ಆಗಿ ಬಂದ ಶಿವರಾಜ್​ಕುಮಾರ್

ಪಂಚೆ, ಶರ್ಟ್​ ಗೆಟಪ್​ನಲ್ಲಿ ಅವರು ಹೆಚ್ಚು ಅಂಕ ಗಿಟ್ಟಿಸಿಕೊಂಡಿದ್ದರು. ‘ಭೈರತಿ ರಣಗಲ್​’ ಸಿನಿಮಾದಲ್ಲೂ ಈ ಗೆಟಪ್ ಮುಂದುವರಿಯಲಿದೆ.

ಶಿವರಾತ್ರಿಗೆ ನರ್ತನ್ ಹೊಸ ಸಿನಿಮಾ ಘೋಷಣೆ; ‘ಭೈರತಿ ರಣಗಲ್’ ಆಗಿ ಬಂದ ಶಿವರಾಜ್​ಕುಮಾರ್
ಶಿವರಾಜ್​ಕುಮಾರ್
ರಾಜೇಶ್ ದುಗ್ಗುಮನೆ
|

Updated on: Feb 18, 2023 | 1:30 PM

Share

ಶಿವರಾಜ್​ಕುಮಾರ್ (Shivarajkumar) ಅವರು ‘ಮಫ್ತಿ’ ಸಿನಿಮಾದಲ್ಲಿ ಭೈರತಿ ರಣಗಲ್ ಆಗಿ ಮಿಂಚಿದ್ದರು. ಈ ಪಾತ್ರ ಸಾಕಷ್ಟು ಗಮನಸೆಳೆದಿತ್ತು. ಇದೇ ಹೆಸರಲ್ಲಿ ಸಿನಿಮಾ ಬರಲಿದೆ ಎಂಬುದು ಈ ಮೊದಲೇ ಸುದ್ದಿ ಆಗಿತ್ತು. ಇಂದು (ಫೆಬ್ರವರಿ 18) ಶಿವರಾತ್ರಿ ಪ್ರಯುಕ್ತ ಈ ಸಿನಿಮಾ ಘೋಷಣೆ ಆಗಿದೆ. ಶಿವರಾಜ್​ಕುಮಾರ್ ಅವರ ಲುಕ್ ಗಮನ ಸೆಳೆದಿದೆ. ಈ ಸಿನಿಮಾದ ಕಥೆ ಹೇಗಿರಲಿದೆ ಅನ್ನೋದು ಸದ್ಯದ ಕೂತೂಹಲ. ನರ್ತನ್ ಅವರ ಎರಡನೇ ಸಿನಿಮಾ ಇದಾಗಿದ್ದು, ಈ ಕಾರಣದಿಂದಲೂ ಚಿತ್ರ ಗಮನ ಸೆಳೆದಿದೆ.

‘ಮಫ್ತಿ’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಬರೋದು ದ್ವಿತೀಯಾರ್ಧದಲ್ಲಿ. ಅಲ್ಲಿವರೆಗೆ ಕಥೆ ಶ್ರೀಮುರಳಿ ಮೇಲೆ ಸಾಗುತ್ತದೆ. ದ್ವಿತೀಯಾರ್ಧದಲ್ಲಿ ಬಂದರೂ ಭೈರತಿ ರಣಗಲ್ ಆಗಿ ಸಾಕಷ್ಟು ಗಮನ ಸೆಳೆದಿದ್ದರು ಶಿವಣ್ಣ. ಪಂಚೆ, ಶರ್ಟ್​ ಗೆಟಪ್​ನಲ್ಲಿ ಅವರು ಹೆಚ್ಚು ಅಂಕ ಗಿಟ್ಟಿಸಿಕೊಂಡಿದ್ದರು. ‘ಭೈರತಿ ರಣಗಲ್​’ ಸಿನಿಮಾದಲ್ಲೂ ಈ ಗೆಟಪ್ ಮುಂದುವರಿಯಲಿದೆ. ಇದಕ್ಕೆ ಇಂದು ರಿಲೀಸ್ ಆದ ಪೋಸ್ಟರ್ ಸಾಕ್ಷ್ಯ ನೀಡಿದೆ.

‘ಭೈರತಿ ರಣಗಲ್’ ಚಿತ್ರಕ್ಕೆ ಈ ಮೊದಲು ಕೆವಿಎನ್ ಪ್ರೊಡಕ್ಷನ್ಸ್ ಬಂಡವಾಳ ಹೂಡಲಿದೆ ಎನ್ನಲಾಗಿತ್ತು. ಆದರೆ, ಅದು ಸುಳ್ಳಾಗಿದೆ. ಶಿವಣ್ಣ ಅವರ ಹೋಂ ಬ್ಯಾನರ್​ನಲ್ಲಿ ಚಿತ್ರ ಮೂಡಿ ಬರುತ್ತಿದೆ. ‘ಗೀತಾ ಪಿಕ್ಚರ್ಸ್​’ನಲ್ಲಿ ಮೂಡಿ ಬರುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಈ ಮೊದಲು ‘ವೇದ’ ಚಿತ್ರ ‘ಗೀತಾ ಪಿಕ್ಚರ್ಸ್​’ ಮೂಲಕ ಮೂಡಿ ಬಂದಿತ್ತು.

‘ಮಫ್ತಿ’ ಸಿನಿಮಾ ತೆರೆಗೆ ಬಂದಿದ್ದು 2017ರಲ್ಲಿ. ಅಲ್ಲಿಂದ ಇಲ್ಲಿಯವರೆಗೆ ನರ್ತನ್ ಅವರು ಯಾವುದೇ ಸಿನಿಮಾ ಘೋಷಣೆ ಆಗಿಲ್ಲರಲಿಲ್ಲ. ‘ಭೈರತಿ ರಣಗಲ್’ ಸಿನಿಮಾ ಕಾರಣಾಂತರಗಳಿಂದ ವಿಳಂಬ ಆಯಿತು. ಈಗ ಆರು ವರ್ಷಗಳ ಬಳಿಕ ನರ್ತನ್ ಕಡೆಯಿಂದ ಗುಡ್​ನ್ಯೂಸ್ ಸಿಕ್ಕಿದೆ.

ಯಶ್ ಸಿನಿಮಾ ಯಾವಾಗ?

ಯಶ್ ಅವರ 19ನೇ ಚಿತ್ರಕ್ಕೆ ನಿರ್ದೇಶನ ಮಾಡೋದು ಯಾರು ಎನ್ನುವುದು ಯಕ್ಷ ಪ್ರಶ್ನೆ ಆಗಿದೆ. ಈ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಯಶ್ 19ನೇ ಚಿತ್ರಕ್ಕೆ ನರ್ತನ್ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ, ಅದು ಸಾಧ್ಯವಾಗುತ್ತಿಲ್ಲ. ಮೂಲಗಳ ಪ್ರಕಾರ ಯಶ್ ಅವರ 20ನೇ ಸಿನಿಮಾಗೆ ನರ್ತನ್ ಆ್ಯಕ್ಷನ್ ಕಟ್ ಹೇಳಲಿದ್ದಾರಂತೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್