ಮೊದಲ ದಿನ ಭರ್ಜರಿ ಗಳಿಕೆ ಮಾಡಿದ ‘ಭೈರತಿ ರಣಗಲ್’; ರೇಟಿಂಗ್​ನಲ್ಲೂ ಫುಲ್ ಮಾರ್ಕ್ಸ್

ಶಿವರಾಜ್ ಕುಮಾರ್ ಅಭಿನಯದ ‘ಭೈರತಿ ರಣಗಲ್’ ಚಿತ್ರ ಮೊದಲ ದಿನವೇ ಭರ್ಜರಿ ಗಳಿಕೆಯನ್ನು ಮಾಡಿದೆ. ‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿರುವ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮೊದಲ ದಿನ ಭರ್ಜರಿ ಗಳಿಕೆ ಮಾಡಿದ ‘ಭೈರತಿ ರಣಗಲ್’; ರೇಟಿಂಗ್​ನಲ್ಲೂ ಫುಲ್ ಮಾರ್ಕ್ಸ್
Follow us
ರಾಜೇಶ್ ದುಗ್ಗುಮನೆ
|

Updated on: Nov 16, 2024 | 6:58 AM

ಶಿವರಾಜ್​ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ಮೊದಲ ದಿನವೇ ಭರ್ಜರಿ ಗಳಿಕೆ ಮಾಡಿದೆ. ಶಿವಣ್ಣನನ್ನು ಭೈರತಿ ರಣಗಲ್ ಅವತಾರದಲ್ಲಿ ನೋಡಿ ಫ್ಯಾನ್ಸ್ ಖುಷಿ ಪಟ್ಟಿದ್ದಾರೆ. ಮೊದಲ ದಿನ ಸಾರ್ವಜನಿಕರಿಗೆ ಮುಂಜಾನೆ ಶೋ ಇರಲಿಲ್ಲ. ಒಂದೊಮ್ಮೆ ಈ ಶೋಗಳನ್ನು ಇಟ್ಟಿದ್ದರೆ ಹೌಸ್​ಫುಲ್ ಪ್ರದರ್ಶನ ಕಂಡು ಸಿನಿಮಾದ ಗಳಿಕೆ ಮತ್ತಷ್ಟು ಹೆಚ್ಚುತ್ತಿತ್ತು. ಚಿತ್ರದ ಗಳಿಕೆ ಹಾಗೂ ರೇಟಿಂಗ್ ತಿಳಿಯಲು ಈ ಸ್ಟೋರಿ ಓದಿ.

‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿ ‘ಭೈರತಿ ರಣಗಲ್’ ಸಿನಿಮಾ ಮೂಡಿಬಂದಿದೆ. ಈ ಮೊದಲು ‘ಭೈರತಿ ರಣಗಲ್’ ಸಿನಿಮಾ ಮಾಡುವ ಆಲೋಚನೆ ನರ್ತನ್ ಅವರಿಗೆ ಇರಲಿಲ್ಲ. ‘ಮಫ್ತಿ’ ಹಿಟ್ ಆದ ಬಳಿಕ ಅವರಿಗೆ ಆ ರೀತಿಯ ಐಡಿಯಾ ಬಂತು. ಅದಕ್ಕೆ ತಕ್ಕಂತೆ ಉತ್ತಮ ರೀತಿಯಲ್ಲಿ ಕಥೆಯನ್ನು ಹೆಣೆದಿದ್ದಾರೆ. ಈ ಕಾರಣಕ್ಕೆ ಸಿನಿಮಾ ಪ್ರೇಕ್ಷಕರಿಗೆ ಇಷ್ಟ ಆಗಿದೆ.

ಕೆಲವು ವರದಿಗಳ ಪ್ರಕಾರ ‘ಭೈರತಿ ರಣಗಲ್’ ಸಿನಿಮಾ ಮೊದಲ ದಿನ ಎರಡರಿಂದ ಐದು ಕೋಟಿ ರೂಪಾಯಿ ಗಳಿಕೆ ಮಾಡಿದೆಯಂತೆ. ಕೇವಲ ಕನ್ನಡದಲ್ಲಿ ಮಾತ್ರ ರಿಲೀಸ್ ಆಗಿರುವುದರಿಂದ ಇದನ್ನು ಭರ್ಜರಿ ಗಳಿಕೆ ಎಂದೇ ಹೇಳಬಹುದು. ಸಿನಿಮಾಗೆ ಪಾಸಿಟಿವ್ ಪ್ರತಿಕ್ರಿಯೆ ಸಿಕ್ಕಿದ್ದು, ಇಂದು (ನವೆಂಬರ್ 16) ಹಾಗೂ ನಾಳೆ (ನವೆಂಬರ್ 17) ಸಿನಿಮಾ ಉತ್ತಮ ಗಳಿಕೆ ಮಾಡುವುದರಲ್ಲಿ ಯಾವುದೇ ಅನುಮಾನ ಇಲ್ಲ. ಚಿತ್ರಕ್ಕೆ ಉತ್ತಮ ರೇಟಿಂಗ್ ಕೂಡ ಸಿಕ್ಕಿದೆ. ಈವರೆಗೆ (ನವೆಂಬರ್ 16ರ ಬೆಳಿಗ್ಗೆ 7 ಗಂಟೆ) ಎರಡು ಸಾವಿರ ಜನ ರೇಟಿಂಗ್ ನೀಡಿದ್ದು, 9.6 ರೇಟಿಂಗ್ ಸಿಕ್ಕಿದೆ.

‘ಪುಷ್ಪ 2’ ಚಿತ್ರದವರೆಗೆ ಯಾವುದೇ ದೊಡ್ಡ ಸಿನಿಮಾಗಳು ರಿಲೀಸ್ ಆಗುತ್ತಿಲ್ಲ. ಇದು ಚಿತ್ರಕ್ಕೆ ವರದಾನ ಆಗಲಿದೆ. ಅಲ್ಲಿಯವರೆಗೆ ಸಿನಿಮಾ ಉತ್ತಮ ಪ್ರದರ್ಶನ ಕಾಣಲಿದೆ. ನರ್ತನ್ ಅವರ ನಿರ್ದೇಶನದಲ್ಲಿ ‘ಭೈರತಿ ರಣಗಲ್’ ಮೂಡಿ ಬಂದಿದೆ. ಸಿನಿಮಾ ಕೊನೆಯಲ್ಲಿ ‘ಮಫ್ತಿ’ ಚಿತ್ರದಲ್ಲಿ ಏನಾಗಿತ್ತು ಎಂಬುದರ ಝಲಕ್ ತೋರಿಸಲಾಗುತ್ತದೆ.

ಇದನ್ನೂ ಓದಿ: Bhairathi Ranagal Review: ರಣಗಲ್ ಸಾಮ್ರಾಜ್ಯವನ್ನು ಪೂರ್ತಿಯಾಗಿ ಆವರಿಸಿಕೊಂಡ ಶಿವಣ್ಣ

ಳಿರುವ ಪ್ರಕಾರ ಮುಂದಿನ ದಿನಗಳಲ್ಲಿ ‘ಮಫ್ತಿ’ ಚಿತ್ರಕ್ಕೆ ಸೀಕ್ವೆಲ್ ಬರಲಿದೆ. ‘ಮಫ್ತಿ’ ಚಿತ್ರದಲ್ಲಿ ಮಾಡಿದ ತಪ್ಪಿಗೆ ರಣಗಲ್ ಜೈಲು ಸೇರಿದ್ದಾನೆ. ನಂತರ ಏನಾಗುತ್ತದೆ ಎಂಬುದರ ಕಥೆ ‘ಮಫ್ತಿ’ ಸೀಕ್ವೆಲ್​ನಲ್ಲಿ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ