ದಿನ ಕಳೆದಂತೆ ಹೆಚ್ಚಿತು ‘ಭೈರತಿ ರಣಗಲ್’ ಕಲೆಕ್ಷನ್; ಇಲ್ಲಿದೆ ಮೂರು ದಿನಗಳ ಗಳಿಕೆ ಲೆಕ್ಕ

ಶಿವರಾಜ್ ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ. ಮೂರು ದಿನಗಳಲ್ಲಿ ಸಿನಿಮಾ ದೊಡ್ಡ ಗಳಿಕೆ ಮಾಡಿದೆ. ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದ ಈ ಚಿತ್ರದ ಯಶಸ್ಸು ಶಿವರಾಜ್ ಕುಮಾರ್ ಅವರಿಗೆ ಖುಷಿ ನೀಡಿದೆ.

ದಿನ ಕಳೆದಂತೆ ಹೆಚ್ಚಿತು ‘ಭೈರತಿ ರಣಗಲ್’ ಕಲೆಕ್ಷನ್; ಇಲ್ಲಿದೆ ಮೂರು ದಿನಗಳ ಗಳಿಕೆ ಲೆಕ್ಕ
ಶಿವರಾಜ್​ಕುಮಾರ್​
Follow us
ರಾಜೇಶ್ ದುಗ್ಗುಮನೆ
|

Updated on: Nov 18, 2024 | 10:36 AM

ಶಿವರಾಜ್​ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ನವೆಂಬರ್ 15 (ಶುಕ್ರವಾರ) ರಿಲೀಸ್ ಆಯಿತು. ಈ ಚಿತ್ರ ವಿಮರ್ಶಕರಿಂದ ಮೆಚ್ಚುಗೆ ಪಡೆದಿದೆ. ಈ ಸಿನಿಮಾ ಮೂರು ದಿನಗಳಲ್ಲಿ ಭರ್ಜರಿ ಗಳಿಕೆ ಮಾಡಿದೆ. ಇದು ಶಿವರಾಜ್​ಕುಮಾರ್ ಅವರ ಖುಷಿ ಹೆಚ್ಚಿಸಿದೆ. ನಿರ್ಮಾಪಕನಾಗಿ ಹಾಗೂ ನಟನಾಗಿ ಅವರು ಗೆಲುವು ಕಂಡಿದ್ದಾರೆ. ಈ ಚಿತ್ರದ ಕಲೆಕ್ಷನ್ ಬಗ್ಗೆ ಇಲ್ಲಿದೆ ವಿವರ.

‘ಮಫ್ತಿ’ ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಮಟ್ಟದಲ್ಲಿ ಯಶಸ್ಸು ಪಡೆದ ಸಿನಿಮಾ. ಅದರ ಪ್ರೀಕ್ವೆಲ್ ಆಗಿ ‘ಭೈರತಿ ರಣಗಲ್’ ಸಿನಿಮಾ ಮೂಡಿ ಬಂದಿದೆ. ಈ ಚಿತ್ರವನ್ನು ನೋಡಿದವರು ಪಾಸಿಟಿವ್ ಆಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾನ್ಯ ಲಾಯರ್ ಆಗಿದ್ದ ರಣಗಲ್ ನಂತರ ಲಾಂಗ್ ಹಿಡಿಯೋದು ಹೇಗೆ ಎಂಬ ಕಥೆ ‘ಭೈರತಿ ರಣಗಲ್’ ಸಿನಿಮಾದಲ್ಲಿ ಹೇಳಲಾಗಿದೆ. ನರ್ತನ್ ಅವರ ಕಾರ್ಯಕ್ಷಮತೆಯನ್ನು ಎಲ್ಲರೂ ಮೆಚ್ಚಿದ್ದಾರೆ.

‘ಭೈರತಿ ರಣಗಲ್’ ಸಿನಿಮಾ ಮೂರು ದಿನಕ್ಕೆ 7.25 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು sacnilk ವರದಿ ಮಾಡಿದೆ. ಮೊದಲ ದಿನ 2.1 ಕೋಟಿ ರೂಪಾಯಿ, ಎರಡನೇ ದಿನ 2.3 ಕೋಟಿ ರೂಪಾಯಿ ಹಾಗೂ ಮೂರನೇ ದಿನ 2.85 ಕೋಟಿ ರೂಪಾಯಿನ ಚಿತ್ರ ಗಳಿಸಿದೆ. ಈ ಮೂಲಕ ಒಟ್ಟಾರೆ ಗಳಿಕ 10 ಕೋಟಿ ರೂಪಾಯಿ ಸಮೀಪಿಸಿದೆ. ದಿನ ಕಳೆದಂತೆ ಸಿನಿಮಾದ ಕಲೆಕ್ಷನ್ ಹೆಚ್ಚಿದೆ.

ಇದನ್ನೂ ಓದಿ: ಮೊದಲ ದಿನ ಭರ್ಜರಿ ಗಳಿಕೆ ಮಾಡಿದ ‘ಭೈರತಿ ರಣಗಲ್’; ರೇಟಿಂಗ್​ನಲ್ಲೂ ಫುಲ್ ಮಾರ್ಕ್ಸ್

‘ಭೈರತಿ ರಣಗಲ್’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಮುಖ್ಯಭೂಮಿಕೆ ನಿರ್ವಹಿಸಿದರೆ ರುಕ್ಮಿಣಿ ವಸಂತ್ ಈ ಚಿತ್ರದ ನಾಯಕಿ. ರಾಹುಲ್ ಬೋಸ್ ವಿಲನ್ ಪಾತ್ರ ಮಾಡಿದ್ದಾರೆ. ಗೀತಾ ಶಿವರಾಜ್​ಕುಮಾರ್ ನಿರ್ಮಾಣ ಈ ಚಿತ್ರಕ್ಕೆ ಇದೆ. ಈ ಚಿತ್ರವನ್ನು ನರ್ತನ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾಗೆ ಸದ್ಯ ಯಾವುದೇ ಸ್ಪರ್ಧಿಗಳಿಲ್ಲ. ಹೀಗಾಗಿ, ಹಲವು ದಿನಗಳ ಕಾಲ ಚಿತ್ರ ಉತ್ತಮ ಪ್ರದರ್ಶನ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ