AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhajarangi 2 Trailer: ‘ಭಜರಂಗಿ 2’ ಟ್ರೇಲರ್ ಮೂಲಕ ಮೋಡಿ ಮಾಡಿದ ಶಿವರಾಜ್​ಕುಮಾರ್​; ದುಪ್ಪಟ್ಟಾಯಿತು ನಿರೀಕ್ಷೆ

Bhajarangi 2 Trailer: ಟ್ರೇಲರ್​ನಲ್ಲಿ ಬರುವ ಎಲ್ಲಾ ಪಾತ್ರಗಳು ಒಂದಕ್ಕಿಂತ ಒಂದು ಭಿನ್ನವಾಗಿದೆ. ಇಲ್ಲಿ ಹೈಲೈಟ್​ ಆಗಿದ್ದು ಸೆಟ್​. ಟ್ರೆಲರ್​ನಲ್ಲಿ ಕಾಣುವ ಪ್ರತಿ ಸೆಟ್​ ಸಾಕಷ್ಟು ಗಮನ ಸೆಳೆಯುತ್ತಿದೆ.

Bhajarangi 2 Trailer: ‘ಭಜರಂಗಿ 2’ ಟ್ರೇಲರ್ ಮೂಲಕ ಮೋಡಿ ಮಾಡಿದ ಶಿವರಾಜ್​ಕುಮಾರ್​; ದುಪ್ಪಟ್ಟಾಯಿತು ನಿರೀಕ್ಷೆ
ಶಿವರಾಜ್​ಕುಮಾರ್​
TV9 Web
| Edited By: |

Updated on:Oct 21, 2021 | 1:11 PM

Share

‘ಭಜರಂಗಿ 2’ ಸಿನಿಮಾ ಹೇಗಿರಲಿದೆ ಎನ್ನುವ ಕುತೂಹಲ ಪ್ರೇಕ್ಷಕರಲ್ಲಿತ್ತು. ಈಗ ಟ್ರೇಲರ್ ಮೂಲಕ ಇದಕ್ಕೆ ಉತ್ತರ ಕೊಡುವ ಪ್ರಯತ್ನವನ್ನು ಮಾಡಿದ್ದಾರೆ ನಿರ್ದೇಶಕ ಎ.ಹರ್ಷ. ಇಂದು (ಅಕ್ಟೋಬರ್​ 20) ಸಂಜೆ  ‘ಭಜರಂಗಿ 2’ ಟ್ರೇಲರ್​ ರಿಲೀಸ್​ ಆಗಿದೆ. ಇಡೀ ಟ್ರೇಲರ್​ನಲ್ಲಿ ಹಿನ್ನೆಲೆ ಸಂಗೀತ ಹೈಲೈಟ್​ ಆಗಿದೆ. 3 ನಿಮಿಷದ ಟ್ರೇಲರ್ ಹೇಗಿದೆ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಗಣೇಶ ಚತುರ್ಥಿಗೆ ಶಿವರಾಜ್​ಕುಮಾರ್​ ನಟನೆಯ ಬಹುನಿರೀಕ್ಷಿತ ‘ಭಜರಂಗಿ 2’ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಚಿತ್ರಮಂದಿರದಲ್ಲಿ ಶೇ.50ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶ ಇದ್ದಿದ್ದರಿಂದ ಬಿಡುಗಡೆ ದಿನಾಂಕ ಮುಂದೂಡಲಾಗಿತ್ತು. ಈಗ ಚಿತ್ರ ಅಕ್ಟೋಬರ್ 29ರಂದು ತೆರೆಗೆ ಬರುತ್ತಿದೆ. ಅದಕ್ಕೂ ಮೊದಲು ಸಿನಿಮಾದ ಟ್ರೇಲರ್ ರಿಲೀಸ್​ ಆಗಿದೆ.

ಟ್ರೇಲರ್​ನಲ್ಲಿ ಬರುವ ಎಲ್ಲಾ ಪಾತ್ರಗಳು ಒಂದಕ್ಕಿಂತ ಒಂದು ಭಿನ್ನವಾಗಿದೆ. ಇಲ್ಲಿ ಹೈಲೈಟ್​ ಆಗಿದ್ದು ಸೆಟ್​. ಟ್ರೆಲರ್​ನಲ್ಲಿ ಕಾಣುವ ಪ್ರತಿ ಸೆಟ್​ ಸಾಕಷ್ಟು ಗಮನ ಸೆಳೆಯುತ್ತಿದೆ. ಚಿತ್ರತಂಡ ಇದಕ್ಕಾಗಿ ಸಾಕಷ್ಟು ಶ್ರಮ ಹಾಕಿದ್ದು ಕಾಣುತ್ತದೆ. ಶಿವರಾಜ್​ಕುಮಾರ್, ಭಾವನಾ ಸೇರಿ ಎಲ್ಲರೂ ಭಿನ್ನ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಟ್ರೇಲರ್​ ನೋಡಿದವರಿಗೆ ಇಡೀ ಸಿನಿಮಾದ ಕಥೆ ತಂತ್ರ-ಮಂತ್ರಗಳ ಮೇಲೆಯೇ ಸಾಗುತ್ತದೆಯೇ ಎನ್ನುವ ಪ್ರಶ್ನೆ ಕಾಡದೆ ಇರದು. ಇನ್ನು, ಹಿನ್ನೆಲೆ ಸಂಗೀತ ಕೂಡ ಇಲ್ಲಿ ಸಾಕಷ್ಟು ಗಮನ ಸೆಳೆಯುವಂತಿದೆ.

ನಿರ್ದೇಶಕ ಎ. ಹರ್ಷ ಮತ್ತು ಶಿವರಾಜ್​ಕುಮಾರ್​ ಅವರ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ಮೂರನೇ ಸಿನಿಮಾ ಇದಾಗಿದ್ದು, ನಿರೀಕ್ಷೆ ದೊಡ್ಡ ಮಟ್ಟದಲ್ಲಿದೆ. ಈ ಹಿಂದೆ ತೆರೆಕಂಡಿದ್ದ ‘ಭಜರಂಗಿ’ ಚಿತ್ರ ಸೂಪರ್​ ಹಿಟ್​ ಆಗಿತ್ತು. ಹಾಗಾಗಿ ‘ಭಜರಂಗಿ 2’ ಈಗ ಸಖತ್​ ಹೈಪ್​ ಸೃಷ್ಟಿ ಮಾಡಿದೆ. ಟ್ರೇಲರ್​ ಮೂಲಕ ಈ ಹೈಪ್​ ಹೆಚ್ಚಿದೆ.

ಜಯಣ್ಣ ಕಂಬೈನ್ಸ್​ ಬ್ಯಾನರ್​ನಲ್ಲಿ ‘ಭಜರಂಗಿ 2’ ನಿರ್ಮಾಣ ಆಗಿದೆ. ಅ.1ರಿಂದ ಚಿತ್ರಮಂದಿರಗಳಲ್ಲಿ ಹೌಸ್​ಫುಲ್​ ಪ್ರದರ್ಶನಕ್ಕೆ ಸರ್ಕಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಬಹುನಿರೀಕ್ಷಿತ ಸ್ಟಾರ್​ ಸಿನಿಮಾಗಳೆಲ್ಲ ಸಾಲು ಸಾಲಾಗಿ ಬಿಡುಗಡೆ ಆಗುತ್ತಿದೆ. ದುನಿಯಾ ವಿಜಯ್​ ನಟನೆಯ ‘ಸಲಗ’, ಕಿಚ್ಚ ಸುದೀಪ್​ ಅಭಿನಯದ ‘ಕೋಟಿಗೊಬ್ಬ 3’ ಚಿತ್ರಗಳು ಅದ್ದೂರಿ ಓಪನಿಂಗ್ ಕಂಡಿವೆ. ಇದು, ಭಜರಂಗಿ 2ನಲ್ಲೂ ಮುಂದುವರಿಯುವ ಸಾಧ್ಯತೆ ಇದೆ.

ಇದನ್ನೂ ಓದಿ: ಸೇನಾಧಿಕಾರಿ ಲುಕ್​ನಲ್ಲಿ ಶಿವರಾಜ್​ಕುಮಾರ್​; ಹೊಸ ಲುಕ್​ ನೋಡಿ ಅಭಿಮಾನಿಗಳು ಫಿದಾ

ಮುರುಗನ್​ ಅಂದರೆ ದೇವರು, ಅವರು ನಮ್ಮ ಕೈಬಿಡಲ್ಲ; ಕೇಂದ್ರ ಸಚಿವರ ಬಗ್ಗೆ ಶಿವರಾಜ್​ಕುಮಾರ್​ ಮಾತು

Published On - 7:24 pm, Wed, 20 October 21

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ