AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಕಾಂಡದ “ವೀರವ್ವ”ನಾಗಿ ‘ಜಾಕಿ’ ಬೆಡಗಿ ಭಾವನಾ ಮೆನನ್

ಶಿವರಾಜ್ ಕುಮಾರ್, ಡಾಲಿ ಧನಂಜಯ್ ಇನ್ನೂ ಹಲವಾರು ಅತ್ಯುತ್ತಮ ಕಲಾವಿದರು ನಟಿಸುತ್ತಿರುವ ‘ಉತ್ತರಕಾಂಡ’ ಸಿನಿಮಾಕ್ಕೆ ನಟಿ ಭಾವನಾ ಮೆನನ್ ಎಂಟ್ರಿ ಆಗಿದೆ. ‘ವೀರಮ್ಮ’ ಹೆಸರಿನ ಪಾತ್ರದಲ್ಲಿ ಅವರು ನಟಿಸುತ್ತಿದ್ದಾರೆ.

ಉತ್ತರಕಾಂಡದ ವೀರವ್ವನಾಗಿ ‘ಜಾಕಿ’ ಬೆಡಗಿ ಭಾವನಾ ಮೆನನ್
Follow us
ಮಂಜುನಾಥ ಸಿ.
|

Updated on: Jun 08, 2024 | 10:46 PM

ಕನ್ನಡಕ್ಕೆ ಚಿರಪರಿಚಿತವಾಗಿರುವ ಮಲಯಾಳಂ ನಟಿ ಭಾವನಾ ಮೆನನ್ (Bhavana Menon) ಇದೀಗ ‘ಉತ್ತರಕಾಂಡ’ ಸಿನಿಮಾ ಮೂಲಕ ಮತ್ತೊಮ್ಮೆ ಕನ್ನಡ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಪುನೀತ್ ರಾಜ್​ಕುಮಾರ್ ನಟನೆಯ ‘ಜಾಕಿ’ ಸಿನಿಮಾ ಮೂಲಕ ಕನ್ನಡಕ್ಕೆ ಬಂದ ಭಾವನಾ, ಹಲವಾರು ಕನ್ನಡ ಸಿನಿಮಾಗಳಲ್ಲಿ ಕನ್ನಡದ ನಟಿಯೇ ಆಗಿಬಿಟ್ಟಿದ್ದಾರೆ. ಈಗಾಗಲೇ ‘ಪಿಂಕ್ ನೋಟ್’ ಹೆಸರಿನ ಕನ್ನಡ ಸಿನಿಮಾದಲ್ಲಿ ನಟಿಸುತ್ತಿರುವ ಭಾವನಾ, ಈಗ ‘ಉತ್ತರಕಾಂಡ’ಕ್ಕೂ ಎಂಟ್ರಿ ಕೊಟ್ಟಿದ್ದಾರೆ.

ಬಹುಭಾಷಾ‌ ತಾರೆ ಭಾವನಾ ಮೆನನ್ ಉತ್ತರಕಾಂಡ ಸಿನಿಮಾದಲ್ಲಿ ‘ವೀರವ್ವ’ ಹೆಸರಿನ ಪವರ್​ಫುಲ್ ಉತ್ತರ ಕರ್ನಾಟಕ ಮಹಿಳೆಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಭಾವನಾ‌ ಅವರ‌ ಹುಟ್ಟುಹಬ್ಬದ ಅಂಗವಾಗಿ‌ ಚಿತ್ರ ತಂಡ ಇಂದು ಈ ಸುದ್ದಿ ಘೋಷಿಸಿ ಅವರ ಪಾತ್ರದ ಪೋಸ್ಟರ್ ಸಹ ಬಿಡುಗಡೆ ಮಾಡಿದೆ. ಭಾವನಾ ಅವರು ನಟ ಶಿವರಾಜ್ ಕುಮಾರ್ ಅವರ ಜೋಡಿಯಾಗಿ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಇವರಿಬ್ಬರನ್ನು ಮತ್ತೊಮ್ಮೆ ಒಟ್ಟಿಗೆ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಈ ಹಿಂದೆ ಇದೇ ಜೋಡಿ ‘ಟಗರು’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿ, ಆ ಸಿನಿಮಾ ಸೂಪರ್ ಹಿಟ್ ಆಗಿತ್ತು.

ಇದನ್ನೂ ಓದಿ:‘ಉತ್ತರಕಾಂಡ’ ಶೂಟಿಂಗ್​ ಮುಗಿಸಿ ಸವದತ್ತಿ ಯಲ್ಲಮ್ಮನ ದರ್ಶನ ಪಡೆದ ಶಿವರಾಜ್​ಕುಮಾರ್​

‘ಉತ್ತರಕಾಂಡ’ ಸಿನಿಮಾವನ್ನು ರೋಹಿತ್ ಪದಕಿ ನಿರ್ದೇಶನ ಮಾಡಿದ್ದು, ಇದೊಂದು ಆಕ್ಷನ್ ಡ್ರಾಮಾ ಸಿನಿಮಾ ಆಗಿದೆ. ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ನಟರಾಕ್ಷಸ ಡಾಲಿ‌ ಧನಂಜಯ, ಐಶ್ವರ್ಯ ರಾಜೇಶ್, ದಿಗಂತ್ ಮಂಚಾಲೆ, ರಂಗಾಯಣ ರಘು, ಚೈತ್ರ ಆಚಾರ್, ವಿಜಯ್ ಬಾಬು ಇನ್ನೂ ಹಲವು ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಸಿನಿಮಾಕ್ಕೆ ಅಮಿತ್ ತ್ರಿವೇದಿ ಸಂಗೀತ ಸಂಯೋಜನೆ ಮಾಡಲಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿರುತ್ತಾರೆ. ವಿಶ್ವಾಸ್ ಕಶ್ಯಪ್ ಪ್ರೊಡಕ್ಷನ್ ವಿನ್ಯಾಸ ಮಾಡಿದ್ದು, ಅನಿಲ್ ಅನಿರುದ್ಧ್ ಮುಖ್ಯ ಸಂಕಲನಕಾರರಾಗಿರುತ್ತಾರೆ. ಕಾರ್ತಿಕ್ ಗೌಡ ಮತ್ತು ಯೋಗಿ‌ ಜಿ ರಾಜ್ ಕೆ.ಆರ್.ಜಿ. ಸ್ಟೂಡಿಯೋಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿರುತ್ತಾರೆ.

‘ವೀರವ್ವ’ ಪಾತ್ರದಲ್ಲಿ ನಟಿಸಿರುವ ಭಾವನಾ, ‘ಜಾಕಿ’, ‘ವಿಷ್ಣುವರ್ಧನ’, ‘ಯಾರೆ ಕೂಗಾಡಲಿ’, ‘ಟೋಪಿವಾಲ’, ‘ಮೈತ್ರಿ’, ‘ಮುಕುಂದ ಮುರಾರಿ’, ‘ಚೌಕ’, ‘ಟಗರು’, ‘ಭಜರಂಗಿ 2’ ಇತ್ತೀಚೆಗಿನ ‘ಕೇಸ್ ಆಫ್ ಕೊಂಡಾನ’ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?