ಲೈಂಗಿಕ ಕಿರುಕುಳ ಪ್ರಕರಣ; ಐದು ವರ್ಷಗಳ ಬಳಿಕ ಘಟನೆ ನೆನಪಿಸಿಕೊಂಡ ನಟಿ ಭಾವನಾ ಮೆನನ್​

ಲೈಂಗಿಕ ಕಿರುಕುಳ ಪ್ರಕರಣ; ಐದು ವರ್ಷಗಳ ಬಳಿಕ ಘಟನೆ ನೆನಪಿಸಿಕೊಂಡ ನಟಿ ಭಾವನಾ ಮೆನನ್​
ದಿಲೀಪ್​-ಭಾವನಾ

Bhavana Menon: ಭಾವನಾ ಇಲ್ಲಿ ಯಾರ ಹೆಸರನ್ನೂ ತೆಗೆದುಕೊಂಡಿಲ್ಲ. ಯಾರ ಮೇಲೂ ಆರೋಪ ಹೊರಿಸಿಲ್ಲ. ಬದಲಿಗೆ ತಮ್ಮ ಮನಸ್ಸಿನಲ್ಲಿ ಆಗುತ್ತಿದ್ದ ತಳಮಳವನ್ನು ಹೇಳಿಕೊಂಡಿದ್ದಾರೆ.

TV9kannada Web Team

| Edited By: Rajesh Duggumane

Jan 10, 2022 | 3:39 PM

ಕನ್ನಡ, ಮಲಯಾಳಂ, ತಮಿಳು ಮತ್ತು ತೆಲುಗು ಚಿತ್ರಗಳಲ್ಲಿ ಅಭಿನಯಿಸಿರುವ ನಟಿ ಭಾವನಾ ಮೆನನ್ (Bhavna Menon) ಅವರಿಗೆ ಲೈಂಗಿಕ ಕಿರುಕುಳ ನೀಡಲಾಗಿತ್ತು. 2017ರ ಫೆಬ್ರವರಿಯಲ್ಲಿ ಅವರು ಚಿತ್ರೀಕರಣವನ್ನು ಮುಗಿಸಿ ತ್ರಿಶೂರ್‌ನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದಾಗ ಅವರನ್ನು ಅಪಹರಿಸಿ ಎರಡು ಗಂಟೆಗಳ ಕಾಲ ಕಾರಿನಲ್ಲಿಯೇ ಕಿರುಕುಳ ನೀಡಲಾಗಿತ್ತು. ಮಲಯಾಳಂ ನಟ ದಿಲೀಪ್ ವಿರುದ್ಧ ಅವರು ಗಂಭೀರ ಆರೋಪ ಮಾಡಿದ್ದರು. ಈ ಘಟನೆ ನಡೆದು ಐದು ವರ್ಷ ಕಳೆದಿದೆ. ಈಗ ಭಾವನಾ ಆ ಘಟನೆ ಬಗ್ಗೆ ಮಾತನಾಡಿದ್ದಾರೆ.

ಭಾವನಾ ಇಲ್ಲಿ ಯಾರ ಹೆಸರನ್ನೂ ತೆಗೆದುಕೊಂಡಿಲ್ಲ. ಯಾರ ಮೇಲೂ ಆರೋಪ ಹೊರಿಸಿಲ್ಲ. ಬದಲಿಗೆ ತಮ್ಮ ಮನಸ್ಸಿನಲ್ಲಿ ಆಗುತ್ತಿದ್ದ ತಳಮಳವನ್ನು ಹೇಳಿಕೊಂಡಿದ್ದಾರೆ. ‘ಇದು ಸುಲಭದ ಪ್ರಯಾಣವಾಗಿರಲಿಲ್ಲ. ಬಲಿಪಶು ಆಗಿ ನಂತರ ಬದುಕುಳಿಯುವವರೆಗಿನ ಪ್ರಯಾಣ ಇದು. ನಾನು ಅಪರಾಧ ಎಸಗಿದವಳಲ್ಲ. ಆದರೂ, ನನ್ನನ್ನು ಅವಮಾನಿಸುವ, ನನ್ನ ಧ್ವನಿಯನ್ನು ಅಡಗಿಸುವ ಅನೇಕ ಪ್ರಯತ್ನಗಳು ನಡೆದಿವೆ. ಆದರೆ ಅಂತಹ ಸಮಯದಲ್ಲಿ ನನ್ನ ಧ್ವನಿಯನ್ನು ಜೀವಂತವಾಗಿಡಲು ಕೆಲವರು ಮುಂದಾದರು. ಈಗ ಅನೇಕ ಧ್ವನಿಗಳು ನನ್ನ ಪರವಾಗಿ ಮಾತನಾಡುತ್ತಿವೆ. ಇದನ್ನು ನೋಡಿದಾಗ ನ್ಯಾಯಕ್ಕಾಗಿನ ಈ ಹೋರಾಟದಲ್ಲಿ ನಾನು ಒಬ್ಬಂಟಿಯಾಗಿಲ್ಲ ಎಂದು ನನಗೆ ಮನವರಿಕೆ ಆಗಿದೆ’ ಎಂದಿದ್ದಾರೆ ಭಾವನಾ.

‘ನ್ಯಾಯವು ಮೇಲುಗೈ ಸಾಧಿಸಲು, ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಮಾಡಲು ಮತ್ತು ಮತ್ತೆ ಯಾರೂ ಇಂತಹ ಅಗ್ನಿಪರೀಕ್ಷೆಗೆ ಒಳಗಾಗದಂತೆ ನೋಡಿಕೊಳ್ಳಲು, ನಾನು ಈ ಪ್ರಯಾಣವನ್ನು ಮುಂದುವರಿಸುತ್ತೇನೆ. ನನ್ನೊಂದಿಗೆ ನಿಂತಿರುವವರಿಗೆ, ನಿಮ್ಮ ಪ್ರೀತಿಗೆ ಹೃತ್ಪೂರ್ವಕ ಧನ್ಯವಾದಗಳು’ ಎಂದಿದ್ದಾರೆ ಭಾವನಾ.

ಭಾವನಾ ಇತ್ತೀಚೆಗೆ ಸ್ಯಾಂಡಲ್​ವುಡ್​ನಲ್ಲಿ ಹೆಚ್ಚು ಬ್ಯುಸಿ ಆಗಿದ್ದಾರೆ. ಕಳೆದ ವರ್ಷ ಅವರ ನಟನೆಯ ನಾಲ್ಕು ಕನ್ನಡ ಚಿತ್ರಗಳು ತೆರೆಗೆ ಬಂದಿವೆ. ಸದ್ಯ, ಅವರು ಯಾವುದೇ ಹೊಸ ಚಿತ್ರಗಳನ್ನು ಒಪ್ಪಿಕೊಂಡಿಲ್ಲ. ಅವರ ನಟನೆಯ ‘ಭಜರಂಗಿ 2’ ಕಳೆದ ಅಕ್ಟೋಬರ್​ 29ರಂದು ಚಿತ್ರಮಂದಿರದಲ್ಲಿ ರಿಲೀಸ್​ ಆಗಿತ್ತು. ಈಗ ಈ ಸಿನಿಮಾ ಒಟಿಟಿಯಲ್ಲಿ ಬಿಡುಗಡೆ ಆಗಿ ಎಲ್ಲ ಕಡೆಗಳಿಂದ ಮೆಚ್ಚುಗೆ ಗಳಿಸಿಕೊಳ್ಳುತ್ತಿದೆ. ಈ ಸಿನಿಮಾದಲ್ಲಿ ಭಾವನಾ ಹೆಚ್ಚುಹೊತ್ತು ಕಾಣಿಸಿಕೊಳ್ಳುವುದಿಲ್ಲ ಎನ್ನುವ ಕೊರಗು ಅವರ ಅಭಿಮಾನಿಗಳನ್ನು ಕಾಡಿತ್ತು.

ಇದನ್ನೂ ಓದಿ: ಖ್ಯಾತ ಹಿರಿಯ ನಟಿಗೆ ಕೊರೊನಾ ಒಮಿಕ್ರಾನ್​; ರೂಪಾಂತರಿಯಿಂದ ಆದ ಸಮಸ್ಯೆಗಳನ್ನು ವಿವರಿಸಿದ ಹೀರೋಯಿನ್​

Shiva Rajkumar: ಜಗಮೆಚ್ಚಿದ ‘ಭಜರಂಗಿ 2’; ಕನ್ನಡ ಚಿತ್ರಗಳ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಶಿವಣ್ಣ ನಟನೆಯ ಚಿತ್ರ 

Follow us on

Most Read Stories

Click on your DTH Provider to Add TV9 Kannada