AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜ್ಜಿಯ ಹೆಸರನ್ನೇ ಮಗಳಿಗೆ ಇಟ್ಟ ಭಾವನಾ ರಾಮಣ್ಣ; ಅದಕ್ಕಿದೆ ವಿಶೇಷ ಕಾರಣ

ಭಾವನಾ ರಾಮಣ್ಣ ಹಾಗೂ ಭಾವನ ಬೆಳಗೆರೆ ಮಧ್ಯೆ ಒಳ್ಳೆಯ ಗೆಳೆತನ ಇದೆ. ಹೀಗಾಗಿ, ಭಾವನಾ ಅವರು ತಮ್ಮ ಎರಡೂವರೆ ತಿಂಗಳ ಮಗುವಿನೊಂದಿಗೆ ಇತ್ತೀಚೆಗೆ ಭಾವನಾ ಬೆಳಗೆರೆ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಪ್ರೀತಿಯಿಂದ ಮಾತನಾಡಿದ್ದಾರೆ. ಜೊತೆಗೆ ಮಗಳಿಗೆ ರುಕ್ಮಿಣಿ ಹೆಸರು ಇಟ್ಟಿದ್ದೇಕೆ ಎಂಬ ಪ್ರಶ್ನೆಗೆ ಉತ್ತರ ನೀಡಿದ್ದಾರೆ.

ಅಜ್ಜಿಯ ಹೆಸರನ್ನೇ ಮಗಳಿಗೆ ಇಟ್ಟ ಭಾವನಾ ರಾಮಣ್ಣ; ಅದಕ್ಕಿದೆ ವಿಶೇಷ ಕಾರಣ
ಭಾವನಾ
ರಾಜೇಶ್ ದುಗ್ಗುಮನೆ
|

Updated on: Nov 29, 2025 | 10:38 AM

Share

ನಟಿ ಭಾವನಾ ರಾಮಣ್ಣ (Bhavana Ramanna) ಅವರು ಇತ್ತೀಚೆಗೆ ಮಗುವಿಗೆ ಜನ್ಮ ನೀಡಿದ್ದರು. ಅವರು ಐವಿಎಫ್ ತಂತ್ರಜ್ಞಾನದಿಂದ ತಾಯಿ ಆಗಿದ್ದಾರೆ. ಅವರಿಗೆ ಅವಳಿ ಮಕ್ಕಳು  ಜನಿಸಬೇಕಿತ್ತು. ಆದರೆ, ಒಂದು ಮಗು ಹುಟ್ಟುವ ಮೊದಲೇ ನಿಧನ ಹೊಂದಿತ್ತು. ಈಗ ಭಾವನಾ ಅವರು ಮಗಳಿಗೆ ರುಕ್ಮಿಣಿ ಎಂದು ಹೆಸರು ಇಟ್ಟಿದ್ದಾರೆ. ಇದಕ್ಕೆ ಕಾರಣ ಏನು ಎಂಬುದನ್ನು ಭಾವನಾ ರಾಮಣ್ಣ ಗೆಳತಿ ಭಾವನಾ ಬೆಳಗೆರೆ ಅವರು ವಿವರಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದಾರೆ.

ಭಾವನಾ ರಾಮಣ್ಣ ಹಾಗೂ ಭಾವನ ಬೆಳಗೆರೆ ಮಧ್ಯೆ ಒಳ್ಳೆಯ ಗೆಳೆತನ ಇದೆ. ಹೀಗಾಗಿ, ಭಾವನಾ ಅವರು ತಮ್ಮ ಎರಡೂವರೆ ತಿಂಗಳ ಮಗುವಿನೊಂದಿಗೆ ಇತ್ತೀಚೆಗೆ ಭಾವನಾ ಬೆಳಗೆರೆ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಪ್ರೀತಿಯಿಂದ ಮಾತನಾಡಿದ್ದಾರೆ. ಜೊತೆಗೆ ಮಗಳಿಗೆ ರುಕ್ಮಿಣಿ ಹೆಸರು ಇಟ್ಟಿದ್ದೇಕೆ ಎಂಬ ಪ್ರಶ್ನೆಗೆ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ಅವಳಿ ಮಕ್ಕಳ ನಿರೀಕ್ಷೆಯಲ್ಲಿದ್ದ ಭಾವನಾ ರಾಮಣ್ಣಗೆ ಆಘಾತ

‘ಜನ ಯಾರು ಏನು ಮಾತನಾಡಿದ್ದಾರೋ ನನಗೆ ಗೊತ್ತಿಲ್ಲ. ಆದರೆ ನನ್ನನ್ನು ಇಷ್ಟಪಟ್ಟವರು ನನಗೆ ಆಶೀರ್ವಾದ ಮಾಡಿದ್ದಾರೆ. ಮಗುವಿಗೆ ತಿಳುವಳಿಕೆ ಬಂದಾಗ ಮಗುವಿಗೆ ಬೋಲ್ಡ್ ಆಗಿ ಹೇಳ್ತೀನಿ. ಐವಿಎಫ್ ಬೇಬಿ ನೀನು ಎಂದು ಅವಳಿಗೆ ಕನ್ವಿನ್ಸ್ ಮಾಡ್ತೀನಿ. ಆ ಧೈರ್ಯ ನನ್ನಲ್ಲಿದೆ. ಅದು ನನ್ನ ಮಗೂನೇ. ನನ್ನ ಅರ್ಧ ರಕ್ತ ಇದೆ. ನಾನು ಹೊಟ್ಟೆಯಲ್ಲಿ ಇಟ್ಟುಕೊಂಡು ಬೆಳೆಸಿದ್ದೇನೆ’ ಎಂದು ಭಾವನಾ ರಾಮಣ್ಣ ಅವರು ಭಾವನಾ ಬೆಳಗೆರೆ ಬಳಿ ಹೇಳಿದ್ದರಂತೆ. ‘ಏನು ಹೆಸರಿಡುತ್ತೀಯಾ? ಎಂದಿದ್ದಕ್ಕೆ ರುಕ್ಕಿಣಿ ಅಂದಳು. ಅದ್ಯಾಕೆ ಬೇರೆ ಹೊಸ ಹೆಸರು ಇಡಬಹುದಿತ್ತಲ್ಲಾ ಅಂದರೆ ಇಲ್ಲ, ರುಕ್ಮಿಣಿ ಅನ್ನೋದು ನನ್ನ ಅಜ್ಜಿ ಹೆಸರು. ಅವರು ತುಂಬ ರೆಬೆಲ್ ಆಗಿ, ಬೋಲ್ಡ್ ಆಗಿ ಬೆಳೆದವರು. ನಾನು ಅದೇ ಥರಾ ಅಂತ ನನ್ನನ್ನು ಗೇಲಿ ಮಾಡುತ್ತಿದ್ದರು. ಹಾಗಾಗಿ ನನ್ನ ಮಗಳೂ ಕೂಡ ಅಜ್ಜಿ ಥರ ಧೈರ್ಯವಂತೆ, ಬುದ್ಧಿವಂತೆ ಆಗಲಿ ಅಂತ ಆ ಹೆಸರು ಆಯ್ಕೆ ಮಾಡಿದ್ದಾಳಂತೆ. ಮನೆ ಕೆಲಸಕ್ಕೆ ಜನ ಇಟ್ಟುಕೊಂಡರೂ ಅವಳೇ ಮಗುವಿಗೆ ಮಸಾಜ್ ಮಾಡಿ, ಸ್ನಾನ ಮಾಡಿಸಿ ಆರೈಕೆ ಮಾಡುತ್ತಾಳೆ’ ಎಂದು ಭಾವನಾ ಬೆಳಗೆರೆ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ