AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಆಸ್ಪತ್ರೆಯಲ್ಲಿ ಡ್ಯಾನ್ಸ್​ ಮಾಡಿದ ನಟಿ ಹರ್ಷಿಕ ಪೂಣಚ್ಚ, ನಟ ಭುವನ್ ಪೊನ್ನಣ್ಣ; ರೋಗಿಗಳು ಫುಲ್​ ಖುಷ್

Harshika Poonacha - Bhuvan Ponnanna: ಕೊವಿಡ್​ ಬಂದ ನಂತರದಲ್ಲಿ ಅನೇಕರು ಆಸ್ಪತ್ರೆ ಸೇರುತ್ತಾರೆ. ಅಲ್ಲಿಗೆ ತೆರಳಿದ ನಂತರದಲ್ಲಿ ಕೆಲವರು ಭಯಕ್ಕೊಳಗಾಗುತ್ತಾರೆ. ವೈರಸ್​ ಅಂಟಿದವ ಆತ್ಮಸ್ಥೈರ್ಯವನ್ನು ಮತ್ತಷ್ಟು ಕುಗ್ಗಿಸುತ್ತದೆ.

ಕೊವಿಡ್​ ಆಸ್ಪತ್ರೆಯಲ್ಲಿ ಡ್ಯಾನ್ಸ್​ ಮಾಡಿದ ನಟಿ ಹರ್ಷಿಕ ಪೂಣಚ್ಚ, ನಟ ಭುವನ್ ಪೊನ್ನಣ್ಣ; ರೋಗಿಗಳು ಫುಲ್​ ಖುಷ್
ಕೊವಿಡ್​ ಆಸ್ಪತ್ರೆಯಲ್ಲಿ ಭುವನ್​-ಹರ್ಷಿಕಾ
ರಾಜೇಶ್ ದುಗ್ಗುಮನೆ
| Edited By: |

Updated on:May 31, 2021 | 8:01 PM

Share

ಕೊವಿಡ್​ ಹಬ್ಬುತ್ತಿರುವ ವೇಗ ಕಂಡು ಅನೇಕರಿಗೆ ಭಯ ಆರಂಭವಾಗಿದೆ. ಇನ್ನು, ಕೊವಿಡ್​ ಎರಡನೇ ಅಲೆಯಿಂದ ಮೃತಪಡುವವರ ಸಂಖ್ಯೆ ಕೂಡ ಅಧಿಕವಾಗುತ್ತಿದ್ದು, ಜನರ ಆತಂಕ ಮತ್ತಷ್ಟು ಹೆಚ್ಚಾಗಿದೆ. ಇನ್ನು, ಕೊವಿಡ್​ ಬಂದು ಆಸ್ಪತ್ರೆ ಸೇರಿದರೆ ನರಕಯಾತನೆ ಅನುಭವಿಸಬೇಕಾಗುತ್ತದೆ ಎಂಬುದು ಅನೇಕರ ನಂಬಿಕೆ. ಕೊವಿಡ್​ ಪಾಸಿಟಿವ್​ ಬಂದು ಆಸ್ಪತ್ರೆ ಸೇರಿದ ನಂತರದಲ್ಲಿ ಅನೇಕರು ಜೀವನದ ಮೇಲೆ ಉತ್ಸಾಹವನ್ನೇ ಕಳೆದುಕೊಂಡು ಬಿಡುತ್ತಾರೆ. ಈಗ ನಟಿ ಹರ್ಷಿಕಾ ಪೂಣಚ್ಚ, ನಟ ಭುವನ್ ಪೊನ್ನಣ್ಣ ಕೊವಿಡ್ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳನ್ನು ರಂಜಿಸಿದ್ದಾರೆ. ಈ ಮೂಲಕ ಮತ್ತೆ ಅವರಲ್ಲಿ ಜೀವನೋತ್ಸಾಹ ತುಂಬಿದ್ದಾರೆ.

ಕೊವಿಡ್​ ಬಂದ ನಂತರದಲ್ಲಿ ಅನೇಕರು ಆಸ್ಪತ್ರೆ ಸೇರುತ್ತಾರೆ. ಅಲ್ಲಿಗೆ ತೆರಳಿದ ನಂತರದಲ್ಲಿ ಕೆಲವರು ಭಯಕ್ಕೊಳಗಾಗುತ್ತಾರೆ. ವೈರಸ್​ ಅಂಟಿದವರ ಆತ್ಮಸ್ಥೈರ್ಯವನ್ನು ಮತ್ತಷ್ಟು ಕುಗ್ಗಿಸುತ್ತದೆ. ಹೀಗಾಗಬಾರದು ಎನ್ನುವ ಉದ್ದೇಶದಿಂದ ಮಡಿಕೇರಿ ಸರ್ಕಾರಿ ಆಸ್ಪತ್ರೆಯ ಕೊರೊನ ವಾರ್ಡ್​​ಗಳಿಗೆ ಭೇಟಿ ನೀಡಿದ ಹರ್ಷಿಕ ಪೂಣಚ್ಚ, ನಟ ಭುವನ್ ಪೊನ್ನಣ್ಣ ರೋಗಿಗಳಿಗೆ ಧೈರ್ಯ ತುಂಬಿದ್ದಾರೆ.

ಕನ್ನಡದ ಹಾಡಿಗೆ ಹರ್ಷಿಕಾ ಹಾಗೂ ಭುವನ್​ ಹೆಜ್ಜೆ ಹಾಕಿದ್ದಾರೆ. ಈ ಮೂಲಕ ರೋಗಿಗಳಿಗೆ ಮನರಂಜನೆ ನೀಡಿದ್ದಾರೆ. ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. ಅಲ್ಲದೆ, ಇಬ್ಬರ ಕಾರ್ಯಕ್ಕೆ ಅನೇಕ ಕಡೆಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಕೊರೊನಾ ವೈರಸ್​ ಹೆಚ್ಚುತ್ತಿರುವ ಮಧ್ಯೆಯೇ ಅನೇಕ ಸೆಲೆಬ್ರಿಟಿಗಳು ಜನಸಾಮಾನ್ಯರ ಸೇವೆಗೆ ನಿಂತಿದ್ದಾರೆ. ಕೆಲವರು ಮನೆಯಿಂದ ಹೊರ ಬಂದು ಸೇವೆ ನೀಡುತ್ತಿದ್ದರೆ, ಇನ್ನೂ ಕೆಲವರು ಮನೆಯಲ್ಲಿದ್ದುಕೊಂಡೇ ಆರ್ಥಿಕ ಸಹಾಯ ನೀಡುತ್ತಿದ್ದಾರೆ. ನಟ ಭುವನ್​​ ಪೊನ್ನಣ್ಣ ಹಾಗೂ ನಟಿ ಹರ್ಷಿಕಾ ಪೂಣಚ್ಚ ಕೂಡ ಕೊವಿಡ್​ ರೋಗಿಗಳ ಸಹಾಯಕ್ಕೆ ನಿಂತಿದ್ದಾರೆ. ಹೆಲ್ಪ್​​ಲೈನ್​ ಆರಂಭಿಸಿ ಎಲ್ಲರಿಗೂ ಸಹಾಯ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ಕಷ್ಟದಲ್ಲಿರುವ ಹಿರಿಯ ನಟರಿಗೆ ಭುವನ್​ ಸಹಾಯ ಮಾಡಿದ್ದರು.

ಇದನ್ನೂ ಓದಿ: ಭುವನ್​ ಪೊನ್ನಣ್ಣ​ ನಿಜವಾದ ಬಿಗ್​ ಬಾಸ್​; ಕೊವಿಡ್​ ಸಂಕಷ್ಟದಲ್ಲಿ ಮಾಡಿದ ಸಹಾಯ ನೆನೆದು ಭಾವುಕರಾದ ಹಿರಿಯ ನಟ

Published On - 6:58 pm, Mon, 31 May 21

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್