AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಅರೆಸ್ಟ್ ಆದ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್; ಕಾರಣ ಏನು?

ಬಿಗ್ ಬಾಸ್ ಕನ್ನಡದ ಮಾಜಿ ಸ್ಪರ್ಧಿ ರಜತ್ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಮೊದಲು ಮಚ್ಚು ಹಿಡಿದು ರೀಲ್ಸ್ ಮಾಡಿದ ಆರೋಪದ ಮೇಲೆ ಬಂಧಿಸಲಾಗಿತ್ತು, ಆದರೆ ಈಗ ಕೋರ್ಟ್​ಗೆ ಹಾಜರಾಗದ ಕಾರಣ ಅವರ ಬಂಧನವಾಗಿದೆ. ಸಹ ಸ್ಪರ್ಧಿ ವಿನಯ್ ಗೌಡನ ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಮತ್ತೆ ಅರೆಸ್ಟ್ ಆದ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್; ಕಾರಣ ಏನು?
ರಜತ್
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: ರಾಜೇಶ್ ದುಗ್ಗುಮನೆ|

Updated on: Apr 16, 2025 | 12:06 PM

Share

ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಕಾರಣಕ್ಕೆ ಬಿಗ್​ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರನ್ನು ಪೊಲೀಸರು ಬಂಧಿಸಿ, ವಿಚಾರಣೆ ಮಾಡಿದ್ದರು. ಕೆಲ ದಿನಗಳ ಬಳಿಕ ಅವರಿಗೆ ಜಾಮೀನು ಕೂಡ ಸಿಕ್ಕಿತ್ತು. ಈಗ ರಜಯ್ ಅವರನ್ನು ಬೆಂಗಳೂರಿನ ಬಸವೇಶ್ವರನಗರ ಪೊಲೀಸರು ಮತ್ತೆ ಬಂಧಿಸಿದ್ದಾರೆ. ವಿನಯ್​ಗಾಗಿ ಹುಡುಕಾಟ ನಡೆದಿದೆ. ರಜತ್ (Rajath Kishan) ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಕೋರ್ಟ್​ ಎದುರು ಹಾಜರು ಪಡಿಸಲು ಸಿದ್ಧತೆ ನಡೆದಿದೆ. ರಜತ್ ಮತ್ತೆ ಅರೆಸ್ಟ್ ಆಗಲು ಕಾರಣ ಏನು? ಆ ಬಗ್ಗೆ ಇಲ್ಲಿದೆ ವಿವರ.

ರಜತ್ ಹಾಗೂ ವಿನಯ್ ಮಚ್ಚು ಹಿಡಿದು ರೀಲ್ಸ್ ಮಾಡಿದ್ದರು. ಅಕ್ರಮ ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ ರಜತ್ ಹಾಗೂ ವಿನಯ್ ಬಂಧನ ಆಯಿತು. ರೀಲ್ಸ್​ಗೆ ಬಳಕೆ ಮಾಡಿದ್ದ ಶಸ್ತ್ರಾಸ್ತ್ರವನ್ನು ಒಪ್ಪಿಸುವಂತೆ ಪೊಲೀಸರು ಸೂಚಿಸಿದ್ದರು. ಆದರೆ, ಈ ವೇಳೆ ರಬ್ಬರ್ ಮಚ್ಚು ನೀಡಲಾಯಿತು. ಇದು ಕಣ್ತಪ್ಪಿನಿಂದ ಆಗಿದ್ದು, ನಿಜವಾದ ಮಚ್ಚನ್ನು ನೀಡುತ್ತೇವೆ ಎಂದಿದ್ದರು. ಆ ಬಳಿಕ ರೀಲ್ಸ್​ಗೆ ಬಳಕೆ ಆದ ಮಚ್ಚನ್ನು ಎಸೆದಿದ್ದಾಗಿ ರಜತ್ ಒಪ್ಪಿಕೊಂಡಿದ್ದಾರೆ.

ಕೇಸ್​ನಲ್ಲಿ ಇದುವರೆಗೆ  ಬಳಕೆ ಮಾಡಿದ್ದ ಮಾರಕಾಸ್ತ್ರವನ್ನು ಪೊಲೀಸರ ಎದುರು ಹಾಜರು ಪಡಿಸಿಲ್ಲ. ಹೀಗಾಗಿ ಸಾಕ್ಷಿನಾಶ ಎಂದು ಸಹ ಪೋಲಿಸರು ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಅತ್ತ ಕೋರ್ಟ್​ನಲ್ಲಿ ರಜತ್​ಗೆ ಜಾಮೀನು ನೀಡಲಾಗಿದೆ. ಈ ವೇಳೆ ಕೋರ್ಟ್ ಕೆಲ ಷರತ್ತುಗಳನ್ನು ವಿಧಿಸಿತ್ತು. ಇದರಲ್ಲಿ ಅವರು ವಿಚಾರಣೆಗೆ ಹಾಜರಿ ಹಾಕಲೇಬೇಕು ಎಂಬುದು ಕೂಡ ಆಗಿತ್ತು.

ಇದನ್ನೂ ಓದಿ
Image
ಸುಧಾರಾಣಿಗೆ ಶಿವಣ್ಣ ಪ್ರೀತಿಯಿಂದ ಕರೆಯೋದೇನು? ಕೊನೆಗೂ ರಿವೀಲ್ ಆಯ್ತು
Image
‘ಕೊನೆ ಉಸಿರಿನವರೆಗೂ ಐಶ್ವರ್ಯಾ ಪರವಾಗಿ ಹೋರಾಡುತ್ತೇನೆ’; ಅಮಿತಾಭ್
Image
ರಶ್ಮಿಕಾ ಸಸ್ಯಾಹಾರಿಯೋ, ಮಾಂಸಹಾರಿಯೋ? ಈ ತರಕಾರಿ ಕಂಡರೆ ಆಗುವುದೇ ಇಲ್ಲ
Image
ಸೋತ ಅಜಿತ್ ಚಿತ್ರಕ್ಕೆ ಶಾಕ್ ಕೊಟ್ಟ ಇಳಯರಾಜ; 5 ಕೋಟಿಗೆ ಡಿಮ್ಯಾಂಡ್

ಇದನ್ನೂ ಓದಿ: ವಿನಯ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ರಜತ್ ಹೇಳಿದ್ದೇನು? ವಿಡಿಯೋ ನೋಡಿ

ಆದರೆ, ರಜತ್ ಅವರು ಕೋರ್ಟ್ ವಿಚಾರಣೆಗೆ ಹಾಜರಿ ಹಾಕಿಲ್ಲ. ಹೀಗಾಗಿ, ರಜತ್ ವಿರುದ್ಧ ನಾನ್ ಬೇಲೆಬೆಲ್ ವಾರಂಟ್ ಹೊರಡಿಸಿತ್ತು. ಅವರನ್ನು ಬಂಧಿಸಿ ಕೋರ್ಟ್ ಮುಂದೆ ಹಾಜರು ಪಡಿಸುವಂತೆ ಸೂಚಿಸಿತ್ತು. ಕೋರ್ಟ್ ಆದೇಶದಮೇರೆಗೆ ಪೊಲೀಸರು ಮತ್ತೊಮ್ಮೆ ರಜತ್​ನ ಬಂಧಿಸಿದ್ದಾರೆ. ಅವರನ್ನು 24ನೇ ಎಸಿಜೆಎಂ ಕೋರ್ಟ್​ಗೆ ಪೊಲೀಸರು ಹಾಜರುಪಡಿಸಲಿದ್ದಾರೆ. ಈ ಬಗ್ಗೆ ಕೋರ್ಟ್ ಯಾವ ರೀತಿಯ ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ನೋಡಬೇಕಿದೆ.

ವಿನಯ್ ಮನೆಗೆ ಪೊಲೀಸರು..

ಈ ಪ್ರಕರಣದಲ್ಲಿ ವಿನಯ್ ಅವರನ್ನು ಕೂಡ ಬಂಧಿಸೋ ಸಾಧ್ಯತೆ ಇದೆ. ಸದ್ಯ ವಿನಯ್ ಮನೆಗೆ ತೆರಳಿದ್ದು, ಶೀಘ್ರವೇ ಅವರನ್ನು ಕೂಡ ಬಂಧಿಸೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ