AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕದ್ರಿ’ ಸಿನಿಮಾದಲ್ಲಿ ಹೀರೋ ಆದ ಬಿಗ್ ಬಾಸ್ ಖ್ಯಾತಿಯ ಶಮಂತ್ ಬ್ರೋ ಗೌಡ

ಕಿರುತೆರೆಯಲ್ಲಿ ಹೆಸರು ಮಾಡಿರುವ ಶಮಂತ್ ಬ್ರೋ ಗೌಡ ಅವರು ಈಗ ಜಾನಪದ ಹಾರರ್ ಕಥಾಹಂದರದ ‘ಕದ್ರಿ’ ಸಿನಿಮಾದಲ್ಲಿ ಹೀರೋ ಆಗಿದ್ದಾರೆ. ಈ ಸಿನಿಮಾಗೆ ಎಂ. ಆನಂದ್ ರಾಜ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಶೀರ್ಷಿಕೆಗೆ ‘ಕಲ್ಪನೆಗೂ ಮೀರಿದ ಕತ್ತಲೆ, ಕಾಲದಿಂದ ಅಚ್ಚಳಿಯದೆ ಉಳಿದಿರುವ ಭಯ’ ಎಂಬ ಟ್ಯಾಗ್ ಲೈನ್ ಇದೆ.

‘ಕದ್ರಿ’ ಸಿನಿಮಾದಲ್ಲಿ ಹೀರೋ ಆದ ಬಿಗ್ ಬಾಸ್ ಖ್ಯಾತಿಯ ಶಮಂತ್ ಬ್ರೋ ಗೌಡ
Shamanth Bro Gowda
ಮದನ್​ ಕುಮಾರ್​
|

Updated on: Nov 18, 2026 | 9:17 PM

Share

ನಟ ಶಮಂತ್ ಬ್ರೋ ಗೌಡ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ರ ಮೂಲಕ ಖ್ಯಾತಿ ಪಡೆದಿದ್ದರು. ಬಳಿಕ ಅವರು ಧಾರಾವಾಹಿಗಳಲ್ಲಿ ಬ್ಯುಸಿ ಆದರು. ‘ಲಕ್ಷ್ಮೀ ಬಾರಮ್ಮ’, ʻಅಗ್ನಿಸಾಕ್ಷಿ’ ಧಾರಾವಾಹಿಗಳ ಮೂಲಕ ಕಿರುತೆರೆ ವೀಕ್ಷಕರಿಗೆ ಅವರು ಹೆಚ್ಚು ಪರಿಚಿತರಾದರು. ಶಮಂತ್ ಬ್ರೋ ಗೌಡ ಅವರಿಗೆ ಹೊಸ ಹೊಸ ಅವಕಾಶಗಳು ಸಿಗುತ್ತಿವೆ. ಈಗ ಅವರು ಕಿರುತೆರೆಯಿಂದ ಹಿರಿತೆರೆಗೆ ಹೀರೋ ಆಗಿ ಬಡ್ತಿ ಪಡೆಯುತ್ತಿದ್ದಾರೆ.

ಹೌದು, ಶಮಂತ್ ಬ್ರೋ ಗೌಡ ಅವರು ಪೂರ್ಣಪ್ರಮಾಣದ ನಾಯಕನಟನಾಗಿ ಚಂದನವನಕ್ಕೆ ಎಂಟ್ರಿ ನೀಡಲು ಸಜ್ಜಾಗಿದ್ದಾರೆ. ವಿಭಿನ್ನ ಕಥಾಹಂದರದ ‘ರಾಘು’ ಹಾಗೂ ‘ಶೆಫ್ ಚಿದಂಬರ’ ಸಿನಿಮಾಗಳ ಮೂಲಕ ಗಮನ ಸೆಳೆದ ನಿರ್ದೇಶಕ ಎಂ. ಆನಂದ್ ರಾಜ್ ಅವರು ಈಗ ‘ಕದ್ರಿ’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಈ ಸಿನಿಮಾಗೆ ಶಮಂತ್ ಬ್ರೋ ಗೌಡ ಅವರು ಹೀರೋ ಆಗಿದ್ದಾರೆ.

ಶೀರ್ಷಿಕೆಯ ಮೂಲಕ ‘ಕದ್ರಿ’ ಸಿನಿಮಾ ಗಮನ ಸೆಳೆಯುತ್ತಿದೆ. ಕನ್ನಡ ಚಿತ್ರರಂಗದಲ್ಲಿ ಹೊಸದೊಂದು ಪ್ರಯೋಗವಾಗಿ ಈ ಸಿನಿಮಾ ಮೂಡಿಬರಲಿದೆ ಎಂದು ಚಿತ್ರತಂಡ ಹೇಳಿದೆ. ‘ಕನ್ನಡದ ಜಾನಪದ ಹಾರರ್’ ಎಂಬ ಪ್ರಕಾರದಲ್ಲಿ ಈ ಸಿನಿಮಾವನ್ನು ನಿರ್ಮಿಸಲಾಗುತ್ತಿದೆ. ಇದು ಪ್ರೇಕ್ಷಕರಿಗೆ ಹೊಸ ಬಗೆಯ ಭಯಾನಕ ಮತ್ತು ರೋಚಕ ಅನುಭವ ನೀಡುವ ಸುಳಿವು ಸಿಕ್ಕಿದೆ.

‘ಕಲ್ಪನೆಗೂ ಮೀರಿದ ಕತ್ತಲೆ, ಕಾಲದಿಂದ ಅಚ್ಚಳಿಯದೆ ಉಳಿದಿರುವ ಭಯ’ ಎಂಬ ಕುತೂಹಲಕಾರಿ ಅಡಿಬರಹದೊಂದಿಗೆ ‘ಕದ್ರಿ’ ಚಿತ್ರದ ಶೀರ್ಷಿಕೆ ವಿಶೇಷ ಎನಿಸಿಕೊಂಡಿದೆ. ಎಂ. ಆನಂದ್ ರಾಜ್ ಅವರೇ ನಿರ್ದೇಶನದ ಜೊತೆಗೆ ಕಥೆ, ಚಿತ್ರಕಥೆಯ ಜವಾಬ್ದಾರಿ ಹೊತ್ತಿದ್ದಾರೆ. ನಾಗರಾಜ್ ಸಿ. ಅವರೊಂದಿಗೆ ಕೈಜೋಡಿಸಿ ಆನಂದ್ ರಾಜ್ ಅವರೇ ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ.

ಇದನ್ನೂ ಓದಿ: ‘ಗಾನವಿ ನನ್ನ ತಲೆ ಮೇಲೆ ಕಾಲು ಇಟ್ಟಿದ್ದಳು’: ಬಿಗ್ ಬಾಸ್ ಒಳಗಿನ ವಿಷಯ ತೆರೆದಿಟ್ಟ ಸೋನಿಕಾ

ಈ ಸಿನಿಮಾಗೆ ಉದಯ ಲೀಲಾ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ವಿಜಯೇಂದ್ರ ಜೋಡಿದಾರ ಸಂಭಾಷಣೆ ಬರೆದಿದ್ದಾರೆ. ಸೂರಜ್ ಜೋಯಿಸ್ ಮತ್ತು ಜುಬೈರ್ ಮುಹಮ್ಮದ್ ಹಾಡುಗಳಿಗೆ ಸಂಗೀತ ಸಂಯೋಜಿಸುತ್ತಿದ್ದಾರೆ. ಸೂರಜ್ ಜೋಯಿಸ್ ಅವರು ಹಿನ್ನೆಲೆ ಸಂಗೀತ ನೀಡಲಿದ್ದಾರೆ. ನಾಗೇಂದ್ರ ಉಜ್ಜನಿ ಅವರ ಸಂಕಲನ, ಅನಿಲ್ ಕಬೀರ್ ಅವರ ಕಲಾ ನಿರ್ದೇಶನ, ರಾ ಸೀನಾ ಅವರ ಸಾಹಸ ನಿರ್ದೇಶನ, ಅಭಿಷೇಕ್ ಮಠದ್ ಅವರ ನೃತ್ಯ ನಿರ್ದೇಶನ ಈ ಸಿನಿಮಾಗೆ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಹಿತೇಂದ್ರ ಅಧಿಕಾರ ಸ್ವೀಕಾರ
ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಹಿತೇಂದ್ರ ಅಧಿಕಾರ ಸ್ವೀಕಾರ
ಬಾಳಾಸಾಹೇಬ್ ಠಾಕ್ರೆ ಫೋಟೋ ಹರಿದ ಶಿವಸೇನೆ ನಾಯಕಿ; ಭುಗಿಲೆದ್ದ ವಿವಾದ
ಬಾಳಾಸಾಹೇಬ್ ಠಾಕ್ರೆ ಫೋಟೋ ಹರಿದ ಶಿವಸೇನೆ ನಾಯಕಿ; ಭುಗಿಲೆದ್ದ ವಿವಾದ
ದೇವರನ್ನು ಪೂಜಿಸಲ್ಲ,ಹಾಗಂತ ದೇವರಿಲ್ಲ ಅಂತಾ ಹೇಳಲ್ಲ ಎಂದ ಸಿದ್ದರಾಮಯ್ಯ
ದೇವರನ್ನು ಪೂಜಿಸಲ್ಲ,ಹಾಗಂತ ದೇವರಿಲ್ಲ ಅಂತಾ ಹೇಳಲ್ಲ ಎಂದ ಸಿದ್ದರಾಮಯ್ಯ
ತಾವೇ ಖುದ್ದಾಗಿ ತೆರಳಿ ಟ್ರಂಪ್​ಗೆ ಅದ್ದೂರಿ ಸ್ವಾಗತ ಕೋರಿದ ಚೀನಾ ಅಧ್ಯಕ್ಷ
ತಾವೇ ಖುದ್ದಾಗಿ ತೆರಳಿ ಟ್ರಂಪ್​ಗೆ ಅದ್ದೂರಿ ಸ್ವಾಗತ ಕೋರಿದ ಚೀನಾ ಅಧ್ಯಕ್ಷ
ಜಕ್ಕೂರು-ಯಲಹಂಕ ಜನರ ಕನಸು ನನಸು: ಜಕ್ಕೂರು ಫ್ಲೈಓವರ್ ಉದ್ಘಾಟಿಸಿದ ಸಿಎಂ
ಜಕ್ಕೂರು-ಯಲಹಂಕ ಜನರ ಕನಸು ನನಸು: ಜಕ್ಕೂರು ಫ್ಲೈಓವರ್ ಉದ್ಘಾಟಿಸಿದ ಸಿಎಂ
ಸಕ್ಕರೆ ಕಾರ್ಖಾನೆಗಳ ಜಿದ್ದಾಜಿದ್ದಿಯಲ್ಲಿ ಕಬ್ಬು ಬೆಳೆಗಾರರಿಗೆ ಬಂಪರ್
ಸಕ್ಕರೆ ಕಾರ್ಖಾನೆಗಳ ಜಿದ್ದಾಜಿದ್ದಿಯಲ್ಲಿ ಕಬ್ಬು ಬೆಳೆಗಾರರಿಗೆ ಬಂಪರ್
ಲಷ್ಕರ್ ಕಮಾಂಡರ್ ಲತೀಫ್ ಭಟ್ ಹತ್ಯೆ, ಭದ್ರತಾ ಪಡೆಗಳ ಶೌರ್ಯ ಕೊಂಡಾಡಿದ ಶಾ
ಲಷ್ಕರ್ ಕಮಾಂಡರ್ ಲತೀಫ್ ಭಟ್ ಹತ್ಯೆ, ಭದ್ರತಾ ಪಡೆಗಳ ಶೌರ್ಯ ಕೊಂಡಾಡಿದ ಶಾ
"ಬಿಜೆಪಿ ಸರ್ಕಾರವಿದ್ದಾಗಲೇ ಪರಿಹಾರ ಕೊಡದವರು ಈಗ ಕೊಡ್ತಾರಾ?"
'ಕುಮಾರಸ್ವಾಮಿ ಹೇಳಿಕೆ ಸುಳ್ಳು': ಎಂ.ಬಿ. ಪಾಟೀಲ್​​ ತಿರುಗೇಟು
'ಕುಮಾರಸ್ವಾಮಿ ಹೇಳಿಕೆ ಸುಳ್ಳು': ಎಂ.ಬಿ. ಪಾಟೀಲ್​​ ತಿರುಗೇಟು
ಸಿದ್ದರಾಮಯ್ಯ ಕಡೆಗಣನೆ ಆರೋಪಕ್ಕೆ ಡಿಸಿಎಂ ಪರಮೇಶ್ವರ್ ಸ್ಪಷ್ಟನೆ
ಸಿದ್ದರಾಮಯ್ಯ ಕಡೆಗಣನೆ ಆರೋಪಕ್ಕೆ ಡಿಸಿಎಂ ಪರಮೇಶ್ವರ್ ಸ್ಪಷ್ಟನೆ