ಅಂದುಕೊಂಡಂತೆಯೇ ‘ಪಳಾರ್’ ಆದ ಗಿಲ್ಲಿ ನಟ; ಹೊಸ ಸಿನಿಮಾಗೆ ಇದೇ ಟೈಟಲ್

ಬಿಗ್ ಬಾಸ್ ಖ್ಯಾತಿಯ ಗಿಲ್ಲಿ ನಟ ಅವರ ಸಿನಿಮಾಗೆ ‘ಪಳಾರ್’ ಎಂದು ಶೀರ್ಷಿಕೆ ಇಡಲಾಗಿದೆ. ನವೀನ್ ಮತ್ತು ಹರೀಶ್ ನಿರ್ಮಾಣದ ಈ ಚಿತ್ರಕ್ಕೆ ಚಂದ್ರಮೋಹನ್ ನಿರ್ದೇಶನ ಮಾಡುತ್ತಿದ್ದಾರೆ. ವಾಸುಕಿ ವೈಭವ್ ಸಂಗೀತ, ಚಂದ್ರಶೇಖರನ್ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ, ಮೋಹನ್ ಬಿ. ಕೆರೆ ಅವರ ಕಲಾ ನಿರ್ದೇಶನ ಈ ಚಿತ್ರಕ್ಕೆ ಇರಲಿದೆ.

ಅಂದುಕೊಂಡಂತೆಯೇ ‘ಪಳಾರ್’ ಆದ ಗಿಲ್ಲಿ ನಟ; ಹೊಸ ಸಿನಿಮಾಗೆ ಇದೇ ಟೈಟಲ್
Gilli Nata

Updated on: Jun 21, 2026 | 10:05 AM

ಜನಪ್ರಿಯ ಹಾಸ್ಯ ಕಲಾವಿದ ಗಿಲ್ಲಿ ನಟ (Gilli Nata) ಅವರು ಈಗ ಸಿನಿಮಾ ಹೀರೋ ಆಗಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ವಿನ್ನರ್ ಆದ ಅವರಿಗೆ ಸಾಲು ಸಾಲು ಸಿನಿಮಾ ಆಫರ್​ಗಳು ಬರುತ್ತಿವೆ. ಕೆಲವೇ ದಿನಗಳ ಹಿಂದೆ ಅವರು ಪ್ರತಿಷ್ಠಿತ ‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ಜೊತೆ ಕೈ ಜೋಡಿಸಿರುವ ಸುದ್ದಿ ಹೊರಬಿದ್ದಿತ್ತು. ಈಗ ಆ ಸಿನಿಮಾಗೆ ಶೀರ್ಷಿಕೆ ಏನು ಎಂಬುದು ಗೊತ್ತಾಗಿದೆ. ಈ ಚಿತ್ರಕ್ಕೆ ‘ಪಳಾರ್’ (Palar) ಎಂದು ಟೈಟಲ್ ಇಡಲಾಗಿದೆ. ಇದು ಗಿಲ್ಲಿ ನಟ ಅವರ ನೆಚ್ಚಿನ ಟೈಟಲ್. ಬಿಗ್ ಬಾಸ್ ಮನೆಯೊಳಗೆ ಇದ್ದಾಗಲೇ ಅವರು ಈ ಬಗ್ಗೆ ಹೇಳಿಕೊಂಡಿದ್ದರು.

ತಮ್ಮನ್ನು ಎಲ್ಲರೂ ‘ಪಳಾರ್ ಗಿಲ್ಲಿ’ ಅಂತ ಕರೆಯಬೇಕು ಎಂಬ ಆಸೆ ಗಿಲ್ಲಿ ನಟ ಅವರಿಗೆ ಇತ್ತು. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋ ಅಂತಿಮ ಹಂತ ತಲುಪುತ್ತಿರುವ ಸಂದರ್ಭದಲ್ಲಿ ಅವರು ಈ ಕುರಿತು ಮಾತನಾಡಿದ್ದರು. ಈಗ ಅವರು ಹೀರೋ ಆಗಿ ನಟಿಸುತ್ತಿರುವ ಮೊದಲ ಸಿನಿಮಾಗೆ ‘ಪಳಾರ್’ ಎಂದೇ ಶೀರ್ಷಿಕೆ ಇಡಲಾಗಿದೆ.

‘ಕೆವಿಎನ್ ಪ್ರೊಡಕ್ಷನ್ಸ್’ನ ಕಾರ್ಯಕಾರಿ ನಿರ್ಮಾಪಕರಾದ ನವೀನ್ ಮತ್ತು ಹರೀಶ್ ಅವರು ಚೊಚ್ಚಲ ಬಾರಿಗೆ ‘ಪಳಾರ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರವನ್ನು ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಯು ಅರ್ಪಿಸುತ್ತಿದೆ. ಚಿತ್ರಕ್ಕೆ ತಮ್ಮ ಬೆಂಬಲ ಸದಾ ಇರುತ್ತದೆ ಎಂದು ‘ಕೆವಿಎನ್’ ಸಂಸ್ಥೆಯ ಕೆ. ವೆಂಕಟ ನಾರಾಯಣ ಅವರು ಈಗಾಗಲೇ ತಿಳಿಸಿದ್ದಾರೆ.

ವಿಶೇಷ ಏನೆಂದರೆ, ಗಿಲ್ಲಿ ನಟ ಅವರ ಹುಟ್ಟುಹಬ್ಬದ ದಿನವೇ ‘ಪಳಾರ್’ ಸಿನಿಮಾಗೆ ಮುಹೂರ್ತ ಮಾಡಲಾಗಿದೆ. ಹೌದು, ಇಂದು (ಜೂನ್ 21) ಗಿಲ್ಲಿ ನಟ ಅವರಿಗೆ ಜನ್ಮದಿನದ ಸಂಭ್ರಮ. ಈ ಪ್ರಯುಕ್ತ ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಚಿತ್ರಕ್ಕೆ ಮುಹೂರ್ತ ನೆರವೇರಿದೆ. ಈ ವೇಳೆ ಕೇಕ್ ಕತ್ತರಿಸಿ ಗಿಲ್ಲಿ ನಟ ಅವರಿಗೆ ಹುಟ್ಟುಹಬ್ಬದ ಶುಭ ಕೋರಲಾಯಿತು.

ಇದನ್ನೂ ಓದಿ: ‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ನರ್ ಗಿಲ್ಲಿ ನಟನ ಹೊಸ ಸಿನಿಮಾ ‘ಸರ್ವೇ ನಂಬರ್ 45’

ನವೀನ್ ಮತ್ತು ಹರೀಶ್ ಅವರು ‘ರಾಶಿ ಫಿಲ್ಮ್ಸ್’ ಮೂಲಕ ‘ಪಳಾರ್’ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಚಂದ್ರಮೋಹನ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಗಮನ ಸೆಳೆಯುತ್ತಿದೆ. ಪಂಚೆ-ಶರ್ಟ್ ಧರಿಸಿ ಗಿಲ್ಲಿ ನಟ ಅವರು ಕಾಣಿಸಿಕೊಂಡಿದ್ದಾರೆ. ಇದನ್ನು ‘ಪ್ಯಾನ್ ಕರ್ನಾಟಕ ಮೂವೀ’ ಎಂದು ಕರೆಯಲಾಗಿದೆ. ಅದರ ಹಿಂದೆಯೂ ತಮಾಷೆ ಅಡಗಿದೆ. ಅದೇನು ಎಂಬುದನ್ನು ಈಗಾಗಲೇ ಸಿನಿಮಾ ಅನೌನ್ಸ್​ಮೆಂಟ್ ಪ್ರೋಮೋದಲ್ಲಿ ಗಿಲ್ಲಿ ನಟ ವಿವರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us