AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಾನವಿ ಮೆಮೋರಿ ಲಾಸ್ ಸಂಪೂರ್ಣ ಡ್ರಾಮಾ’; ಸೌಂದರ್ಯಾ ಶೆಟ್ಟಿ ಬಿಚ್ಚಿಟ್ಟ ಅಸಲಿ ಕಥೆ

ಬಿಗ್ ಬಾಸ್ ಮನೆಯಲ್ಲಿ ಟಾಸ್ಕ್ ಆಡುವಾಗ ಗಾನವಿ ಕೋಮಾಕ್ಕೆ ಹೋದಂತೆ ನಟಿಸಿ ಎಲ್ಲರನ್ನು ದಾರಿ ತಪ್ಪಿಸಿದ್ದಾರೆ ಎಂದು ಸೌಂದರ್ಯಾ ಗಂಭೀರ ಆರೋಪ ಮಾಡಿದ್ದಾರೆ. ನನಗೆ ಏನೂ ನೆನಪಿಲ್ಲ ಎಂದು ಗಾನವಿ ನಾಟಕ ಆಡುತ್ತಿದ್ದು, ಆಟ ಆಡಲು ಬಾರದೇ ಇದ್ದಾಗ ಇಂತಹ ಸುಳ್ಳು ವರ್ತನೆ ತೋರುತ್ತಾಳೆ ಎಂದು ಸೌಂದರ್ಯಾ ಅಸಲಿ ಕಥೆ ಬಿಚ್ಚಿಟ್ಟಿದ್ದಾರೆ.

‘ಗಾನವಿ ಮೆಮೋರಿ ಲಾಸ್ ಸಂಪೂರ್ಣ ಡ್ರಾಮಾ’; ಸೌಂದರ್ಯಾ ಶೆಟ್ಟಿ ಬಿಚ್ಚಿಟ್ಟ ಅಸಲಿ ಕಥೆ
ಗಾನವಿ-ಸೌಂದರ್ಯಾ
ರಾಜೇಶ್ ದುಗ್ಗುಮನೆ
|

Updated on: Nov 13, 2026 | 7:30 AM

Share

ಮುಖ್ಯಾಂಶಗಳು

  • ಬಿಗ್ ಬಾಸ್ ಮನೆಯಲ್ಲಿ ನಡೆದ ಅಚ್ಚರಿಯ ಘಟನೆ
  • ಕೋಮಾದಲ್ಲಿ ಇದ್ದಂತೆ ಗಾನವಿ ನಾಟಕ
  • ಗಾನವಿಯ ಅಸಲಿ ಮುಖವಾಡ ಬಯಲು ಮಾಡಿದ ಸೌಂದರ್ಯಾ

ಬಿಗ್ ಬಾಸ್ ಮನೆಯಲ್ಲಿ ಟಾಸ್ಕ್ ನಡೆಯುವ ವೇಳೆ ವಿಚಿತ್ರ ಘಟನೆಯೊಂದು ನಡೆದಿದ್ದು, ಸ್ಪರ್ಧಿ ಗಾನವಿ ಅವರ ವರ್ತನೆ ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಟಾಸ್ಕ್ ಆಡುವ ಸಂದರ್ಭದಲ್ಲಿ ಆದ ಸಣ್ಣ ಎಡವಟ್ಟಿನಿಂದ ಪೆಟ್ಟು ತಿಂದವರಂತೆ ಕಂಡುಬಂದ ಗಾನವಿ, ಏಕಾಏಕಿ ಪ್ರಜ್ಞೆ ತಪ್ಪಿ ಕೋಮಾಕ್ಕೆ ಹೋದವರಂತೆ ವರ್ತಿಸಿದ್ದಾರೆ. ಕೆಲವು ಹೊತ್ತು ತಮಗೆ ಎಚ್ಚರವೇ ಇರಲಿಲ್ಲ ಎಂಬಂತೆ ಮೌನವಾಗಿದ್ದ ಅವರು, ಮನೆಯವರಲ್ಲಿ ಆತಂಕ ಮೂಡಿಸುವಂತೆ ನಡೆದುಕೊಂಡಿದ್ದಾರೆ.

ಸ್ವಲ್ಪ ಸಮಯದ ನಂತರ ಎಚ್ಚರಗೊಂಡವರಂತೆ ವರ್ತಿಸಿದ ಗಾನವಿ, ‘ನಾನೆಲ್ಲಿದ್ದೇನೆ? ನನಗೆ ಏನಾಯ್ತು? ನಾನು ಒಳಗಿಂದ ಹೊರಗೆ ಹೇಗೆ ಬಂದೆ?’ ಎಂದೆಲ್ಲ ಪ್ರಶ್ನಿಸಿದ್ದಾರೆ. ತಮಗೆ ಏನೂ ನೆನಪಿಲ್ಲ ಎಂಬಂತೆ ಹಾಗೂ ಎಲ್ಲವನ್ನೂ ಮರೆತು ಹೋಯಿತು ಎಂಬ ರೀತಿಯಲ್ಲಿ ಅವರು ನೀಡಿದ ಪ್ರತಿಕ್ರಿಯೆ ನೋಡಿ ಸಹಸ್ಪರ್ಧಿಗಳು ಕೂಡ ಒಂದು ಕ್ಷಣ ಗೊಂದಲಕ್ಕೀಡಾಗಿದ್ದಾರೆ.

ಆದರೆ ಗಾನವಿ ಅವರ ಈ ಅಚ್ಚರಿಯ ವರ್ತನೆ ಕೇವಲ ಬಿಗ್ ಬಾಸ್ ಮನೆಯ ಸದಸ್ಯರಿಗೆ ಮಾತ್ರವಲ್ಲದೆ, ಹೊರಗಿನ ವೀಕ್ಷಕರಿಗೂ ಇದು ಕೇವಲ ಒಂದು ಡ್ರಾಮಾ ಎಂದು ಅನಿಸಿದೆ. ಗಂಭೀರವಾದ ಪೆಟ್ಟು ಬೀಳದಿದ್ದರೂ ಈ ರೀತಿ ಮೂರ್ಚೆ ಹೋದವರಂತೆ ನಟಿಸಿದ್ದು ಏಕೆ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದ್ದು, ಗಾನವಿ ಅವರ ಈ ನಡೆಗೆ ಸಾಮಾಜಿಕ ಜಾಲತಾಣಗಳಲ್ಲೂ ತರಹೇವಾರಿ ಕಾಮೆಂಟ್‌ಗಳು ವ್ಯಕ್ತವಾಗುತ್ತಿವೆ.

ಈ ಘಟನೆಯ ಬೆನ್ನಲ್ಲೇ ಸಿಕ್ಕ ಅವಕಾಶವನ್ನು ಸೌಂದರ್ಯಾ ಶೆಟ್ಟಿ ಸರಿಯಾಗಿ ಬಳಸಿಕೊಂಡಿದ್ದು, ಗಾನವಿ ಅವರ ನಡೆಗೆ ತೀವ್ರವಾಗಿ ತಿರುಗೇಟು ನೀಡಿದ್ದಾರೆ. ಗಾನವಿ ಅವರಿಗೆ ‘ನೀವು ಕೋಮಾದಲ್ಲಿ ಇದ್ರಿ’ ಎಂದು ನೇರವಾಗಿ ಟೀಕಿಸುವ ಮೂಲಕ ಸೌಂದರ್ಯಾ ಕಾಲೆಳೆದಿದ್ದಾರೆ. ಈ ಮೂಲಕ ಗಾನವಿ ಅವರ ನಾಟಕವನ್ನು ಬಯಲಿಗೆಳೆಯುವ ಪ್ರಯತ್ನವನ್ನು ಸೌಂದರ್ಯಾ ಮಾಡಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಕನ್ನಡ: ಮಂಜನ ಎಂಟ್ರಿ ಬಳಿಕ ಮನೆಯಲ್ಲಿ ಮತ್ತೆ ಮಾತಿನ ಚಕಮಕಿ

ಕೊನೆಗೆ ಗಾನವಿ ಯಾಕೆ ಈ ರೀತಿ ವರ್ತಿಸುತ್ತಾರೆ ಎಂಬ ಅಸಲಿ ಕಥೆಯನ್ನು ಸೌಂದರ್ಯಾ ಬಿಚ್ಚಿಟ್ಟಿದ್ದಾರೆ. ಟಾಸ್ಕ್‌ನಲ್ಲಿ ಅವಳ ಬಳಿ ಆಡಲು ಸಾಧ್ಯವಾಗದೇ ಇದ್ದಾಗ ಮತ್ತು ಸೋಲುವ ಭಯ ಎದುರಾದಾಗ ಗಾನವಿ ಈ ರೀತಿಯ ನಾಟಕ ಆಡುತ್ತಾಳೆ ಎಂದು ಸೌಂದರ್ಯಾ ಗಂಭೀರ ಆರೋಪ ಮಾಡಿದ್ದಾರೆ. ಸದ್ಯ ಈ ಕೋಮಾ ಡ್ರಾಮಾ ವಿಚಾರ ಬಿಗ್ ಬಾಸ್ ಮನೆಯಲ್ಲಿ ಹೊಸ ಕಿಚ್ಚು ಹಚ್ಚಿದ್ದು, ಮುಂದೆ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಡಾ.ರಮ್ಯಾ ಬರೆದಿರುವ ‘ಚಲಿಸುವ ಬಂಡೆ’ ಪುಸ್ತಕದಲ್ಲಿ ಯಾವೆಲ್ಲಾ ವಿಚಾರಗಳಿವೆ?
ಡಾ.ರಮ್ಯಾ ಬರೆದಿರುವ ‘ಚಲಿಸುವ ಬಂಡೆ’ ಪುಸ್ತಕದಲ್ಲಿ ಯಾವೆಲ್ಲಾ ವಿಚಾರಗಳಿವೆ?
ಲೀಲಾವತಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ವಿನೋದ್ ರಾಜ್ ಬೇಸರ
ಲೀಲಾವತಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ವಿನೋದ್ ರಾಜ್ ಬೇಸರ
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು
ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್
ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು
ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು
ಸಚಿವರ ಭಾಷಣಕ್ಕೆ ಕೋಕ್​​: ಕೃಷ್ಣ ಭೈರೇಗೌಡ ಅಸಮಾಧಾನ
ಸಚಿವರ ಭಾಷಣಕ್ಕೆ ಕೋಕ್​​: ಕೃಷ್ಣ ಭೈರೇಗೌಡ ಅಸಮಾಧಾನ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ