AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘BBK 13’ ಶೋಗೆ ವಿಘ್ನ; ಜಾಲಿವುಡ್‌ ಸ್ಟುಡಿಯೋಗೆ ಅನುಮತಿ ನೀಡದಂತೆ ದೂರು

ಸೆಪ್ಟೆಂಬರ್ 6 ರಿಂದ ಆರಂಭವಾಗಲಿರುವ ಬಿಗ್ ಬಾಸ್ ಸೀಸನ್ 13 ಶೋಗೆ ಹೊಸ ವಿಘ್ನ ಎದುರಾಗಿದೆ. ಪರಿಸರ ನಿಯಮ ಉಲ್ಲಂಘನೆ ಹಾಗೂ ಎಸ್‌ಟಿಪಿ ನಿಯಮ ಪಾಲಿಸದ ಜಾಲಿವುಡ್ ಸ್ಟುಡಿಯೋದಲ್ಲಿ ಶೋ ನಡೆಸಲು ಅನುಮತಿ ನೀಡಬಾರದು ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಮಾಲಿನ್ಯ ನಿಯಂತ್ರಣ ಮಂಡಳಿಗೆ ದೂರು ನೀಡಿದ್ದಾರೆ.

‘BBK 13’ ಶೋಗೆ ವಿಘ್ನ; ಜಾಲಿವುಡ್‌ ಸ್ಟುಡಿಯೋಗೆ ಅನುಮತಿ ನೀಡದಂತೆ ದೂರು
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Sep 02, 2026 | 10:41 AM

Share

ಮುಖ್ಯಾಂಶಗಳು

  • ಬಿಗ್ ಬಾಸ್ ಆರಂಭಕ್ಕೂ ಮುನ್ನವೇ ಶಾಕ್
  • ಮಾಲಿನ್ಯ ನಿಯಂತ್ರಣ ಮಂಡಳಿಗೆ ಕಲ್ಲಹಳ್ಳಿ ದೂರು
  • ಹಳೆಯ ದಂಡ, ಎಸ್‌ಟಿಪಿ ಲೋಪ

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಸೀಸನ್ 13’ (BBk 13) ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗಲೇ ಮತ್ತೊಂದು ಕಾನೂನು ತೊಡಕು ಎದುರಾಗಿದೆ. ಬಿಡದಿ ಬಳಿಯಿರುವ ‘ಜಾಲಿವುಡ್ ಸ್ಟುಡಿಯೋ’ದಲ್ಲಿ ಈ ಬಾರಿಯ ಬಿಗ್ ಬಾಸ್ ಕಾರ್ಯಕ್ರಮವನ್ನು ನಡೆಸಲು ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಅಧಿಕೃತ ದೂರು ನೀಡಿದ್ದಾರೆ.

ದೂರಿನಲ್ಲಿ ಉಲ್ಲೇಖಿಸಿರುವ ಪ್ರಕಾರ, ‘ಕಳೆದ ವರ್ಷ ಜಾಲಿವುಡ್ ಸ್ಟುಡಿಯೋದಲ್ಲಿ ನಡೆದಿದ್ದ ಪರಿಸರ ನಿಯಮಗಳ ಉಲ್ಲಂಘನೆ ಹಾಗೂ ಅದಕ್ಕಾಗಿ ವಿಧಿಸಲಾಗಿದ್ದ ಹಳೆಯ ದಂಡವನ್ನು ಇದುವರೆಗೂ ಇತ್ಯರ್ಥಪಡಿಸಿಲ್ಲ. ತ್ಯಾಜ್ಯ ನೀರು ಸಂಸ್ಕರಣಾ ಘಟಕ ಸೇರಿದಂತೆ ಕಡ್ಡಾಯ ಪರಿಸರ ನಿಯಮಗಳನ್ನು ಜಾಲಿವುಡ್ ಸ್ಟುಡಿಯೋ ಸಮರ್ಪಕವಾಗಿ ಪಾಲಿಸುತ್ತಿಲ್ಲ’ ಎಂಬ ಗಂಭೀರ ಆರೋಪವನ್ನು ಅವರು ಮಾಡಿದ್ದಾರೆ.

ಸ್ಟುಡಿಯೋದಲ್ಲಿ ಪ್ರಸ್ತುತ ಸಮರ್ಪಕ ಒಳಚರಂಡಿ ವ್ಯವಸ್ಥೆ ಹಾಗೂ ತ್ಯಾಜ್ಯ ವಿಲೇವಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆಯೇ ಎಂಬುದನ್ನು ಮಂಡಳಿಯ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ತೆರಳಿ ಪರಿಶೀಲಿಸಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ. ನಿಯಮ ಪಾಲನೆಯಾಗದ ಹೊರತು ಶೋಗೆ ಅನುಮತಿ ನೀಡಬಾರದು ಎಂದು ಒತ್ತಾಯಿಸಲಾಗಿದೆ.

ಇದನ್ನೂ ಓದಿ: ಯಬಿಗ್ ಬಾಸ್ ಶೋ ಅನುಮತಿಗಾಗಿ ಯಾವುದೇ ಅರ್ಜಿ ಬಂದಿಲ್ಲ; ಜಿಲ್ಲಾಧಿಕಾರಿ ಹೇಳಿಕೆ

ಸೆಪ್ಟೆಂಬರ್ 6 ರಂದು ‘ಬಿಗ್ ಬಾಸ್ ಸೀಸನ್ 13’ ಅದ್ಧೂರಿಯಾಗಿ ಚಾಲನೆ ಪಡೆಯಲಿದೆ ಆದರೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸಲ್ಲಿಕೆಯಾಗಿರುವ ಈ ದೂರಿನಿಂದಾಗಿ ಪ್ರಸಾರಕರಿಗೆ ಹಾಗೂ ಸ್ಟುಡಿಯೋ ಆಡಳಿತ ಮಂಡಳಿಗೆ ಬಿಗ್ ಶಾಕ್ ಎದುರಾಗಿದ್ದು, ಶೋ ನಿಗದಿತ ಸಮಯಕ್ಕೆ ಆರಂಭವಾಗಲಿದೆಯೇ ಎಂಬ ಆತಂಕ ಅಭಿಮಾನಿಗಳಲ್ಲಿ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ