ಬಿಗ್ ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅರೆಸ್ಟ್; ಕಾರಣ ಕೇಳಿದ್ರೆ ಶಾಕ್ ಆಗ್ತೀರಾ

Sonu Srinivas Gowda Arrest: ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ಸೋನು ಶ್ರೀನಿವಾಸ್ ಗೌಡ ಬಂಧನ ಮಾಡಿದ್ದಾರೆ. ಮಗು ದತ್ತು ಪಡೆದಿರುವುದಾಗಿ ಸೋನು ಗೌಡ ಇತ್ತೀಚೆಗೆ ಹೇಳಿಕೊಂಡಿದ್ದರು. 6ರಿಂದ 8 ವರ್ಷದ ಮಗುವನ್ನು ಕಾನೂನು ಬಾಹಿರವಾಗಿ ಅವರು ದತ್ತು ಪಡೆದಿದ್ದರು.

ಬಿಗ್ ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅರೆಸ್ಟ್; ಕಾರಣ ಕೇಳಿದ್ರೆ ಶಾಕ್ ಆಗ್ತೀರಾ
ಸೋನು
Edited By:

Updated on: Mar 22, 2024 | 10:09 AM

‘ಬಿಗ್ ಬಾಸ್ ಕನ್ನಡ ಒಟಿಟಿ’ (Bigg Boss OTT) ಸೀಸನ್ ಮೂಲಕ ಫೇಮಸ್ ಆದ ಸೋನು ಶ್ರೀನಿವಾಸ್ ಗೌಡ ಅವರು ಅರೆಸ್ಟ್ ಆಗಿದ್ದಾರೆ. ಈ ವಿಚಾರ ಸೆನ್ಸೇಷನ್ ಸೃಷ್ಟಿ ಮಾಡಿದೆ. ಹಾಗಾದರೆ ಅವರು ಬಂಧನಕ್ಕೆ ಒಳಗಾಗೋಕೆ ಕಾರಣ ಏನು? ಅದಕ್ಕೆ ಉತ್ತರ ಕೇಳಿದ್ರೆ ನಿಮಗೆ ಶಾಕ್ ಆಗೋದು ಗ್ಯಾರಂಟಿ. ಕಾನೂನು ಬಾಹಿರವಾಗಿ ಅವರು ಮಗುವನ್ನು ದತ್ತು ಪಡೆದಿದ್ದಾರೆ. ಈ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ. ಇತ್ತೀಚೆಗೆ ಮಗುವಿನ ಫೋಟೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ಸೋನು ಶ್ರೀನಿವಾಸ್ ಗೌಡ ಬಂಧನ ಮಾಡಿದ್ದಾರೆ. ಮಗು ದತ್ತು ಪಡೆದಿರುವುದಾಗಿ ಸೋನು ಗೌಡ ಇತ್ತೀಚೆಗೆ ಹೇಳಿಕೊಂಡಿದ್ದರು. ಏಳು ವರ್ಷದ ಮಗುವನ್ನು ಕಾನೂನು ಬಾಹಿರವಾಗಿ ಅವರು ದತ್ತು ಪಡೆದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ದೂರು ನೀಡಿದ್ದರು. ಜೆ.ಜೆ.ಆ್ಯಕ್ಟ್ ಅಡಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಿಸಿಕೊಂಡು ಬಂಧಿಸಿದ್ದಾರೆ.

‘ಮೂರು ತಿಂಗಳಿಂದ ಪಾಸಿಟಿವ್ ಆಗಿ ಎಲ್ಲರೂ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಬಹುಶಃ ಇವಳನ್ನು ದತ್ತು ತೆಗೆದುಕೊಂಡಿದ್ದಕ್ಕೋ ಏನೋ’ ಎಂದು ಸೋನು ಶ್ರೀನಿವಾಸ್ ಗೌಡ ಯೂಟ್ಯೂಬ್ ವಿಡಿಯೋದಲ್ಲಿ ಹೇಳಿದ್ದರು. ‘ನಾನು ಅಪಾರ್ಟ್​ಮೆಂಟ್ ಕೆಳಗೆ ನಾಯಿಗೆ ಬಿಸ್ಕಿಟ್ ಹಾಕುವಾಗ ಇವಳು ಸಿಕ್ಕಿದ್ದಳು. ಅವಳಿಗೆ ಚಾಕೋಲೇಟ್ ಕೊಡಿಸಿದೆ. ನಂತರ ಶಾಪಿಂಗ್ ಹೋದೆವು. ಮನೆಗೆ ಕರೆದುಕೊಂಡು ಹೋಗಿ ಎಂದು ಕೇಳಿದಳು. ನಾನು ದತ್ತು ತೆಗೆದುಕೊಳ್ಳುವುದಕ್ಕೂ ಮೊದಲೇ ಅವಳಿಗೆ ಚೈನ್ ಕೊಡಿಸಿದ್ದೆ’ ಎಂದು ಹೇಳಿಕೊಂಡಿದ್ದರು ಸೋನು ಶ್ರೀನಿವಾಸ್ ಗೌಡ.

ಇದನ್ನೂ ಓದಿ: ಬಿಗ್ ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅರೆಸ್ಟ್; ಕಾರಣ ಕೇಳಿದ್ರೆ ಶಾಕ್ ಆಗ್ತೀರಾ

‘ನಾನು ಅವಳ ಅಮ್ಮನ ಬಳಿ ದತ್ತು ಕೊಡುವಂತೆ ಕೇಳಿದೆ. ಇದನ್ನು ಕೇಳಿ ಅವಳ ತಾಯಿ ರಾಯಚೂರಿಗೆ ಹೋದರು. ಮಗುವಿಗೆ ನಾನಿಲ್ಲದೆ ಜ್ವರ ಬಂದಿತ್ತು. ಫೋನ್ ಮೂಲಕ ಸೇವಂತಿ ಬಳಿ ಮಾತನಾಡಿದೆ. ನಂತರ ಅವಳನ್ನು ಕರೆದುಕೊಂಡು ಬಂದೆ. ಕಾನೂನಾತ್ಮಕವಾಗಿ ದತ್ತು ತೆಗೆದುಕೊಳ್ಳಲು 3 ತಿಂಗಳು ಬೇಕು. ಅವಳ ಅಪ್ಪ ಅಮ್ಮನಿಗೆ ಒಪ್ಪಿಗೆ ಇದೆ. ನನಗೂ ಒಪ್ಪಿಗೆ ಇದೆ. ಕಾನೂನು ಕ್ರಮ ನಡೆಯುತ್ತಿದೆ’ ಎಂದು ಸೋನು ಹೇಳಿದ್ದರು. ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಆರಂಭಕ್ಕೂ ಮೊದಲು ‘ಬಿಗ್ ಬಾಸ್ ಒಟಿಟಿ’ ನಡೆದಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:47 am, Fri, 22 March 24

ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
Loading...
Unable to load recommendations.
Follow Us