AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಗು ಜನಿಸಿ ಏಳು ತಿಂಗಳಾಗಿದೆ’; ಇಷ್ಟು ದಿನ ವಿಷಯ ಮುಚ್ಚಿಟ್ಟಿದ್ದೇಕೆ ಮಂಜು ಪಾವಗಡ?

ಮಂಜು ಪಾವಗಡ ಹಾಗೂ ನಂದಿನಿ ದಂಪತಿಗೆ 7 ತಿಂಗಳ ಗಂಡು ಮಗು ಜನಿಸಿದ್ದು, ಈ ಗುಡ್ ನ್ಯೂಸ್ ಅನ್ನು ಮಂಜು ಇಷ್ಟು ದಿನ ರಹಸ್ಯವಾಗಿಟ್ಟಿದ್ದರು. 2024ರಲ್ಲಿ ಸರಳವಾಗಿ ವಿವಾಹವಾಗಿದ್ದ ಈ ಜೋಡಿ, ಮಗುವಿನ ಹುಟ್ಟಿನ ವಿಷಯ ಏಕೆ ಹೇಳಿಲ್ಲ ಎಂಬುದನ್ನು ರಿವೀಲ್ ಮಾಡಿದರು. ಬಿಗ್ ಬಾಸ್ ವಿನ್ನರ್ ಹಾಗೂ ಹಾಸ್ಯ ನಟನಾಗಿ ಜನಪ್ರಿಯರಾಗಿರುವ ಮಂಜು ಪಾವಗಡ, ಈಗ 'ಜೆರಾಕ್ಸ್' ವೆಬ್ ಸರಣಿಯಲ್ಲಿ ನಟಿಸಿದ್ದಾರೆ.

‘ಮಗು ಜನಿಸಿ ಏಳು ತಿಂಗಳಾಗಿದೆ’; ಇಷ್ಟು ದಿನ ವಿಷಯ ಮುಚ್ಚಿಟ್ಟಿದ್ದೇಕೆ ಮಂಜು ಪಾವಗಡ?
ಮಂಜು
ರಾಜೇಶ್ ದುಗ್ಗುಮನೆ
|

Updated on:Apr 23, 2026 | 7:20 AM

Share

ಮಂಜು ಪಾವಗಡ ಅವರು (Manju Pavagada) 2024ರಲ್ಲಿ ನಂದಿನಿ ಎಂಬುವವರ ಜೊತೆ ವಿವಾಹ ಆದರು. ಸರಳವಾಗಿ ಅವರ ಮದುವೆ ನೆರವೇರಿತು. ಏಳು ತಿಂಗಳ ಹಿಂದೆ ಅವರು ತಂದೆಯಾಗಿದ್ದಾರೆ. ಆದರೆ, ಈ ವಿಷಯವನ್ನು ಅವರು ಎಲ್ಲಿಯೂ ರಿವೀಲ್ ಮಾಡಿರಲಿಲ್ಲ. ಈ ವಿಷಯವನ್ನು ಅವರು ಈಗ ಹೇಳಿಕೊಂಡಿದ್ದಾರೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಇಷ್ಟು ದಿನ ಖುಷಿ ಸುದ್ದಿಯನ್ನು ಯಾಕೆ ರಿವೀಲ್ ಮಾಡಿರಲಿಲ್ಲ ಎಂಬ ವಿಷಯವನ್ನು ಕೂಡ ಅವರು ಹೇಳಿಕೊಂಡಿದ್ದಾರೆ.

ಸಾಮಾನ್ಯವಾಗಿ ಚಿತ್ರರಂಗದವರು ಚಿತ್ರರಂಗದವರನ್ನೇ ಮದುವೆ ಆಗುತ್ತಾರೆ. ಆದರೆ, ಮಂಜು ಪಾವಗಡ ಆ ರೀತಿ ಅಲ್ಲ. ಅವರು, ಚಿತ್ರರಂಗದ ಜೊತೆ ನಂಟು ಇಲ್ಲದ ಹುಡುಗಿಯನ್ನು ಮದುವೆ ಆಗಿದ್ದಾರೆ. ಮಂಜು ಪತ್ನಿ ನಂದಿನಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. 2024ರಲ್ಲಿ ಈ ಮದುವೆ ಸರಳವಾಗಿ ನಡೆಯಿತು. ಈಗ ಇವರ ಕಡೆಯಿಂದ ಗುಡ್ ನ್ಯೂಸ್ ಸಿಕ್ಕಿದೆ.

‘ಗಂಡು ಮಗು ಆಗಿ ಏಳು ತಿಂಗಳಾಗಿದೆ. ಹೇಳೋಕೆ ಸಮಯ ಸಿಕ್ಕಿರಲಿಲ್ಲ, ಹಾಗಾಗಿ ಹೇಳಿಲ್ಲ. ಆತ ತುಂಬಾ ತರ್ಲೆ ಮಾಡ್ತಾನೆ’ ಎಂದು ಮಂಜು ಸಂದರ್ಶನ ಒಂದರಲ್ಲಿ ಹೇಳಿಕೊಂಡಿದ್ದಾರೆ. ಈಗ ಎಲ್ಲರೂ ಅವರಿಗೆ ಅಭಿನಂದನೆ ತಿಳಿಸುತ್ತಾ ಇದ್ದಾರೆ.

ಇದನ್ನೂ ಓದಿ: ಮಂಜು ಪಾವಗಡ ಮದುವೆಯಲ್ಲಿ ಶುಭ ಪೂಂಜಾ, ವರನ ಕೆನ್ನೆ ಹಿಂಡಿದ ನಟಿ

ಮಂಜು ಪಾವಗಡ ಅವರು ಹಾಸ್ಯ ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಸಿ ಗಮನ ಸೆಳೆದರು. ‘ಬಿಗ್ ಬಾಸ್ ಕನ್ನಡ ಸೀಸನ್ 8’ರ ವಿನ್ನರ್ ಕೂಡ ಹೌದು. ಮಂಜು ಪಾವಗಡ ಅವರು ಕಲರ್ಸ್ ಕನ್ನಡದ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಅಂತರಪಟ’ ಧಾರಾವಾಹಿಯಲ್ಲಿ ಅವರು ನೆಗೆಟಿವ್ ರೋಲ್ ಮಾಡಿದ್ದರು.ಈಗ ಅವರು ‘ಜೆರಾಕ್ಸ್’ ಹೆಸರಿನ ಸರಣಿಯಲ್ಲಿ ನಟಿಸಿದ್ದಾರೆ. ‘ಬ್ಲಿಂಕ್‌’ ಖ್ಯಾತಿಯ ಶ್ರೀನಿಧಿ ಬೆಂಗಳೂರು ಈ ಸರಣಿಗೆ ನಿರ್ದೇಶನ ಮಾಡಿದ್ದಾರೆ. ನಾಗಭೂಷಣ, ಪಾಯಲ್‌ ಚೆಂಗಪ್ಪ, ಮಂಜು ಪಾವಗಡ, ಓಂ ಪ್ರಕಾಶ್‌ ರಾವ್‌, ಯಶವಂತ್‌ ಶೆಟ್ಟಿ, ಮೊದಲಾದವರು ಇದರಲ್ಲಿ ನಟಿಸಿದ್ದಾರೆ. ಏಪ್ರಿಲ್‌ 24ರಿಂದ ಈ ವೆಬ್‌ ಸರಣಿಯನ್ನು ಜೀ5 ಒಟಿಟಿಯಲ್ಲಿ ನೋಡಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:07 am, Thu, 23 April 26

Follow Us
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!