AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆವಿಎನ್ ಪ್ರೊಡಕ್ಷನ್ಸ್‌ನಿಂದ ‘ಬೀರ್‌ಬಲ್ ಕೇಸ್ 2’ ಅನೌನ್ಸ್; ಇರಲಿದೆ ಹಲವು ವಿಶೇಷ

ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದಲ್ಲಿ 'ಬೀರ್‌ಬಲ್ ಕೇಸ್ 2' ಅಧಿಕೃತವಾಗಿ ಘೋಷಣೆಯಾಗಿದೆ. ಎಂ.ಜಿ. ಶ್ರೀನಿವಾಸ್ ನಿರ್ದೇಶಿಸಿ ನಟಿಸುತ್ತಿರುವ ಈ ಇನ್ವೆಸ್ಟಿಗೇಟಿವ್ ಥ್ರಿಲ್ಲರ್ ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಜೊತೆಗೆ ಖುಷ್ಬೂ, ಡೈಸಿ ಬೋಪಣ್ಣ ಹಾಗೂ ಸಂಪತ್ ರಾಜ್ ಪ್ರಮುಖ ತಾರಾಗಣದಲ್ಲಿದ್ದು, ಅರ್ಜುನ್ ಜನ್ಯ ಅವರ ಸಂಗೀತ ನಿರ್ದೇಶನವಿದೆ.

ಕೆವಿಎನ್ ಪ್ರೊಡಕ್ಷನ್ಸ್‌ನಿಂದ 'ಬೀರ್‌ಬಲ್ ಕೇಸ್ 2' ಅನೌನ್ಸ್; ಇರಲಿದೆ ಹಲವು ವಿಶೇಷ
ಬೀರ್ಬಲ್
ರಾಜೇಶ್ ದುಗ್ಗುಮನೆ
|

Updated on:Sep 10, 2026 | 1:30 PM

Share

ಮುಖ್ಯಾಂಶಗಳು

  • ಶ್ರೀನಿ ಸಿನಿಮ್ಯಾಟಿಕ್ ಯೂನಿವರ್ಸ್ ವಿಸ್ತರಣೆ
  • ಅಖಾಡಕ್ಕೆ ಶಿವಣ್ಣ ಎಂಟ್ರಿ
  • ಖುಷ್ಬೂ ಹಾಗೂ ಡೈಸಿ ಬೋಪಣ್ಣ ಭರ್ಜರಿ ಕಮ್‌ಬ್ಯಾಕ್

ಬಾಕ್ಸ್ ಆಫೀಸ್‌ನಲ್ಲಿ ಬೃಹತ್ ಸಿನಿಮಾಗಳನ್ನು ನಿರ್ಮಿಸುತ್ತಿರುವ ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆ ಇದೀಗ ಕನ್ನಡ ಚಿತ್ರಪ್ರೇಕ್ಷಕರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ನಿರ್ಮಾಪಕ ವೆಂಕಟ್ ಕೆ. ನಾರಾಯಣ ನಿರ್ಮಾಣದಲ್ಲಿ ‘ಬೀರ್‌ಬಲ್ ಟ್ರೈಲಜಿ ಕೇಸ್ 2’ ಸಿನಿಮಾ ಅಧಿಕೃತವಾಗಿ ಘೋಷಣೆಯಾಗಿದೆ. ‘ಟಾಕ್ಸಿಕ್’  ರಿಲೀಸ್ ಬಳಿಕ ಕೆವಿಎನ್ ಅನೌನ್ಸ್ ಮಾಡುತ್ತಿರುವ ಸಿನಿಮಾ ಇದಾಗಿದ್ದು, ನಿರೀಕ್ಷೆ ಮೂಡಿಸಿದೆ.

ಈ ಹಿಂದೆ ತೆರೆಕಂಡು ಪ್ರೇಕ್ಷಕರ ಮನಗೆದ್ದಿದ್ದ ‘ಬೀರ್‌ಬಲ್ ಕೇಸ್ 1: ಫೈಂಡಿಂಗ್ ವಜ್ರಮುನಿ’ ಚಿತ್ರದ ಯಶಸ್ಸಿನ ನಂತರ ಇದೀಗ ದ್ವಿತೀಯ ಭಾಗ ಬರಲು ಸಜ್ಜಾಗಿದೆ. ಚಾಣಾಕ್ಷ ವಕೀಲ ಮಹೇಶ್ ದಾಸ್ ಪಾತ್ರದಲ್ಲಿ ಎಂ.ಜಿ. ಶ್ರೀನಿವಾಸ್ (ಶ್ರೀನಿ) ಮತ್ತೊಮ್ಮೆ ಕಗ್ಗಂಟಾದ ತನಿಖಾ ಪ್ರಕರಣವನ್ನು ಭೇದಿಸಲು ಅಖಾಡಕ್ಕಿಳಿಯಲಿದ್ದಾರೆ.

ಈ ಸಿನಿಮಾದ ಮತ್ತೊಂದು ಪ್ರಮುಖ ಆಕರ್ಷಣೆ ಎಂದರೆ ‘ಶ್ರೀನಿ ಸಿನಿಮ್ಯಾಟಿಕ್ ಯೂನಿವರ್ಸ್’ (SCU) ವಿಸ್ತರಣೆ. ಶ್ರೀನಿ ನಿರ್ದೇಶನದ ‘ಘೋಸ್ಟ್’ ಚಿತ್ರದ ಕಥೆಯ ಲಿಂಕ್ ಈ ಸೀಕ್ವೆಲ್‌ನಲ್ಲಿದ್ದು, ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್‌ಕುಮಾರ್ ಅವರು ಪವರ್‌ಫುಲ್ ಅತಿಥಿ ಪಾತ್ರದಲ್ಲಿ ಅಬ್ಬರಿಸಲಿದ್ದಾರೆ.

ಚಿತ್ರದ ತಾರಾಗಣದಲ್ಲಿ ದಕ್ಷಿಣ ಭಾರತದ ಹಿರಿಯ ನಟಿ ಖುಷ್ಬೂ ಸುಂದರ್ ಹಾಗೂ ನಟಿ ಡೈಸಿ ಬೋಪಣ್ಣ ಭರ್ಜರಿ ಕಮ್‌ಬ್ಯಾಕ್ ಮಾಡುತ್ತಿದ್ದಾರೆ. ಇವರ ಜೊತೆಗೆ ಯುವ ನಟಿ ಯೋಗಲಕ್ಷ್ಮಿ ನಾಯಕಿಯಾಗಿ ಪದಾರ್ಪಣೆ ಮಾಡುತ್ತಿದ್ದು, ನಟ ಸಂಪತ್ ರಾಜ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: ‘ಟಾಕ್ಸಿಕ್’ ಫಲಿತಾಂಶದ ಬಗ್ಗೆ ಯಶ್ ಮೊದಲ ರಿಯಾಕ್ಷನ್ ಏನು? ಕೊನೆಗೂ ಸಿಕ್ಕಿತು ಉತ್ತರ

ಅರ್ಜುನ್ ಜನ್ಯ ಅವರ ಸಂಗೀತ ಸಂಯೋಜನೆ ಹಾಗೂ ಮಹೇನ್ ಸಿಂಹ ಅವರ ಛಾಯಾಗ್ರಹಣ ಈ ಚಿತ್ರಕ್ಕಿರಲಿದೆ. ಅತ್ಯಂತ ಕುತೂಹಲ ಕೆರಳಿಸಿರುವ ಈ ಇನ್ವೆಸ್ಟಿಗೇಟಿವ್ ಥ್ರಿಲ್ಲರ್ ಸಿನಿಮಾ ಶೀಘ್ರದಲ್ಲೇ ಬೆಳ್ಳಿತೆರೆಯಲ್ಲಿ ಪ್ರೇಕ್ಷಕರ ಮುಂದೆ ಬರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:20 pm, Thu, 10 September 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ