AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಿಗರ ಪ್ರೀತಿಯ ನಟ ಪುನೀತ್ ರಾಜಕುಮಾರ್​ಗೆ ಇಂದು ಹೊನ್ನಾಳಿಯಲ್ಲಿ ಸಂಗೀತ ನಮನ, ನೇತ್ರದಾನ ವಾಗ್ದಾನ

Puneeth Rajkumar: ‘ಕರುನಾಡ ಯುವರತ್ನ, ಮರೆಯದ ಮಾಣಿಕ್ಯ ಪುನೀತ್ ರಾಜಕುಮಾರ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ, ಸಂಗೀತ ನಮನ ಹಾಗೂ ನೇತ್ರದಾನ ಅಭಿಯಾನ ಕಾರ್ಯಕ್ರಮವನ್ನು ಹೊನ್ನಾಳಿ ನಗರದ KSRTC ಬಸ್ ನಿಲ್ದಾಣದ ಆವರದಲ್ಲಿ ಸೋಮವಾರ ಸಂಜೆ 5. 00 ಗಂಟೆಗೆ ಆಯೋಜಿಸಲಾಗಿದೆ‘ ಎಂದು ಶಾಸಕ ಎಂಪಿ ರೇಣುಕಾಚಾರ್ಯ ತಿಳಿಸಿದ್ದಾರೆ.

ಕನ್ನಡಿಗರ ಪ್ರೀತಿಯ ನಟ ಪುನೀತ್ ರಾಜಕುಮಾರ್​ಗೆ ಇಂದು ಹೊನ್ನಾಳಿಯಲ್ಲಿ ಸಂಗೀತ ನಮನ, ನೇತ್ರದಾನ ವಾಗ್ದಾನ
ಕನ್ನಡಿಗರ ಪ್ರೀತಿಯ ನಟ ಪುನೀತ್ ರಾಜಕುಮಾರ್​ಗೆ ಇಂದು ಹೊನ್ನಾಳಿಯಲ್ಲಿ ಸಂಗೀತ ನಮನ, ನೇತ್ರದಾನ ವಾಗ್ದಾನ
TV9 Web
| Edited By: |

Updated on:Nov 08, 2021 | 10:45 AM

Share

ದಾವಣಗೆರೆ: ಕನ್ನಡಿಗರ ಪ್ರೀತಿಯ ನಟ ಪುನೀತ್ ರಾಜಕುಮಾರ್ ಅವರ 11ನೇ ದಿನದ ಪುಣ್ಯತಿಥಿ ಇಂದು. ಇಡೀ ನಾಡು ಶೋಕ ಸಾಗರದಲ್ಲಿದೆ. ಇಂದು ರಾಜ್ಯದ ಅನೇಕ ಭಾಗಗಳಲ್ಲಿ ಪುನೀತ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ. ಇತ್ತ ಪುನೀತ್​ ಸಮಾಧಿ ಬಳಿ ಅವರು ಕುಟುಂಬಸ್ಥರು ಇದೀಗ ತಿಥಿ ಕಾರ್ಯ ನೆರವೇರಿಸಿದ್ದಾರೆ. ಇನ್ನು ಕೆಲವೇ ಕ್ಷಣಗಳಲ್ಲಿ ರಾಜ್ಯದ ನಾನಾ ಭಾಗಗಳಿಂದ ಬಂದಿರುವ ಅಭಿಮಾನಿಗಳಿಗೆ ಪುನೀತ್​ ಸಮಾಧಿ ದರ್ಶನಕ್ಕೆ ಅವಕಾಶ ಕಲ್ಪಿಸಲಿದ್ದಾರೆ.

ಈ ಮಧ್ಯೆ, ಹೊನ್ನಾಳಿಯಲ್ಲಿ ಇಂದು ಸಂಜೆ ಪವರ್ ಸ್ಟಾರ್ ಪುನೀತ್ ಪುಣ್ಯಸ್ಮರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸ್ಥಳೀಯ ಶಾಸಕ ರೇಣುಕಾಚಾರ್ಯ ಸೇರಿ ನೂರಾರು ಜನರಿಂದ ನೇತ್ರದಾನ ವಾಗ್ದಾನ ನೆರವೇರಲಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆ ಗೀತ ನಮನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಖ್ಯಾತ ಗಾಯಕ ರಾಜೇಶ್ ಕೃಷ್ಣನ್, ಕಲಾವಿದ ಹೊನ್ನಳ್ಳಿ ಕೃಷ್ಣ ಸೇರಿ 20ಕ್ಕೂ ಹೆಚ್ಚು ಕಲಾವಿದರು ಭಾಗಿಯಾಗಲಿದ್ದಾರೆ.

‘ಕರುನಾಡ ಯುವರತ್ನ, ಮರೆಯದ ಮಾಣಿಕ್ಯ ಪುನೀತ್ ರಾಜಕುಮಾರ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ, ಸಂಗೀತ ನಮನ ಹಾಗೂ ನೇತ್ರದಾನ ಅಭಿಯಾನ ಕಾರ್ಯಕ್ರಮವನ್ನು ಹೊನ್ನಾಳಿ ನಗರದ KSRTC ಬಸ್ ನಿಲ್ದಾಣದ ಆವರದಲ್ಲಿ ಸೋಮವಾರ ಸಂಜೆ 5. 00 ಗಂಟೆಗೆ ಆಯೋಜಿಸಲಾಗಿದೆ‘ ಎಂದು ಶಾಸಕ ಎಂಪಿ ರೇಣುಕಾಚಾರ್ಯ ತಿಳಿಸಿದ್ದಾರೆ.

ಸಂಗೀತ ನಮನ ಕಾರ್ಯಕ್ರಮ: ನಟರಾಜ್ ಎಂಟರ್ಟೈನರ್ಸ್ ಸಾರಥ್ಯದಲ್ಲಿ ಖ್ಯಾತ ಹಿನ್ನೆಲೆ ಗಾಯಕ ರಾಜೇಶ್ ಕೃಷ್ಣನ್ ಹಾಗೂ ತಂಡ, ಖ್ಯಾತ ಕಲಾವಿದರಾದ ಹೊನ್ನವಳ್ಳಿ ಕೃಷ್ಣ, ಟೆನ್ನಿಸ್ ಕೃಷ್ಣ ಭಾಗವಹಿಸಲಿದ್ದಾರೆ. ದಿನಾಂಕ 08/11/2021 ಸೋಮವಾರ, ಸಮಯ ಸಂಜೆ 5:00 ಗಂಟೆಗೆ. ಸ್ಥಳ: KSRTC ಬಸ್ ನಿಲ್ದಾಣ, ಹೊನ್ನಾಳಿ

Puneeth : ಅಪ್ಪುಗೆ ಪದ್ಮಶ್ರೀ ಪ್ರಶಸ್ತಿ ಬಗ್ಗೆ ಶಿವಣ್ಣ ಹೇಳಿದ್ದೇನು |Tv9kannada

BJP MLA MP Renukacharya organises eye donation camp and musical nite in remembrance of puneeth rajkumar today

Published On - 10:30 am, Mon, 8 November 21

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ