ಡಿಕೆ ಶಿವಕುಮಾರ್ ಭೇಟಿ ಮಾಡಿದ ಜಗ್ಗೇಶ್, ರಾಜಕೀಯ ಭೇಟಿಯಲ್ಲ ಎಂದ ನವರಸ ನಾಯಕ

Jaggesh-DK Shivakumar: ನಟ ಜಗ್ಗೇಶ್, ಪತ್ನಿ ಪರಿಮಳ ಅವರಜೊತೆಗೂಡಿ ರಾಜ್ಯದ ಉಪಮುಖ್ಯ ಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.

ಡಿಕೆ ಶಿವಕುಮಾರ್ ಭೇಟಿ ಮಾಡಿದ ಜಗ್ಗೇಶ್, ರಾಜಕೀಯ ಭೇಟಿಯಲ್ಲ ಎಂದ ನವರಸ ನಾಯಕ
ಜಗ್ಗೇಶ್-ಡಿಕೆ ಶಿವಕುಮಾರ್
Follow us
ಮಂಜುನಾಥ ಸಿ.
|

Updated on:Jun 12, 2023 | 4:26 PM

ಕಾಂಗ್ರೆಸ್​ನಿಂದ ರಾಜಕೀಯ ಆರಂಭಿಸಿ ಈಗ ಬಿಜೆಪಿಯಲ್ಲಿರುವ ಅಪ್ಪಟ ಮೋದಿ ಅನುಯಾಯಿ ನಟ ಜಗ್ಗೇಶ್ (Jaggesh) ಇಂದು ಉಪಮುಖ್ಯಮಂತ್ರಿ, ಹಳೆಯ ಸ್ನೇಹಿತ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಪತ್ನಿ ಪರಿಮಳಾ ಅವರೊಟ್ಟಿಗೆ ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ ತೆರಳಿ ಹೂಗುಚ್ಛ ನೀಡಿ ಶಿವಕುಮಾರ್ ಅವರಿಗೆ ಅಭಿನಂದನೆಯನ್ನು ನಟ ಜಗ್ಗೇಶ್ ತಿಳಿಸಿದ್ದಾರೆ.

ಡಿ.ಕೆ.ಶಿವಕುಮಾರ್ ಭೇಟಿ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ನಟ ಜಗ್ಗೇಶ್, ಇದೊಂದು ಸಾಮಾನ್ಯ ಭೇಟಿಯಾಗಿತ್ತು, ಗೆಳೆಯನಿಗೆ ಅಭಿನಂದನೆ ಹೇಳುವ ಕಾರಣದಿಂದ ಬಂದೆ. ಅವರು ಅಧಿಕಾರ ವಹಿಸಿಕೊಂಡಾಗ ನಾನು ಅಮೆರಿಕದಲ್ಲಿದ್ದೆ. ಹಾಗಾಗಿ ಈಗ ಬಂದು ಅವರಿಗೆ ಶುಭಾಶಯ ತಿಳಿಸಿದ್ದೇನೆ ಎಂದರು. ಮುಂದುವರೆದು ಮಾತನಾಡಿ, ”ರಾಜ್ಯಸಭಾ ಸದಸ್ಯನಾಗಿ ಒಂದು ವರ್ಷ ಪೂರೈಸುತ್ತಿದ್ದು, ನನ್ನ ಕಾರ್ಯವ್ಯಾಪ್ತಿಯಲ್ಲಿ ನನಗೆ ಏನೇನು ಮಾಡಲು ಸಾಧ್ಯವಿದೆಯೋ ಅದೆಲ್ಲವನ್ನೂ ಮಾಡುತ್ತಿದ್ದೇನೆ. ತುಮಕೂರು ಜಿಲ್ಲೆ ನೂಡಲ್ ಡಿಸ್ಟ್ರಿಕ್ಟ್ ಆಗಿದೆ. ಅದರ ಭಾಗವಾಗಿ ಒಂದು ಹೋಬಳಿಯನ್ನು, ಒಂದು ಗ್ರಾಮವನ್ನು ದತ್ತು ತೆಗೆದುಕೊಂಡು ಕೆಲಸ ಮಾಡುತ್ತಿದ್ದೇನೆ. ಈವರೆಗೆ 16-17 ಕೋಟಿ ರೂಪಾಯಿಗಳ ಕೆಲಸ ಆಗಿದೆ ಇನ್ನೂ ಮಾಡಲು ಸಾಕಷ್ಟಿದೆ” ಎಂದರು.

2008 ರಲ್ಲಿ ಕಾಂಗ್ರೆಸ್ ಪಕ್ಷದಿಂದಲೇ ರಾಜಕೀಯ ಆರಂಭಿಸಿದ ಜಗ್ಗೇಶ್​ಗೆ ಚುನಾವಣೆ ಟಿಕೆಟ್ ಕೊಡಿಸುವುದರಲ್ಲಿ ಡಿ.ಕೆ.ಶಿವಕುಮಾರ್ ಪ್ರಧಾನ ಪಾತ್ರ ವಹಿಸಿದ್ದರು. ಆದರೆ ಕಾಂಗ್ರೆಸ್​ನಿಂದ ಚುನಾವಣೆ ಸ್ಪರ್ಧಿಸಿ ಗೆದ್ದ ಬಳಿಕ ಬಿಜೆಪಿಗೆ ಪಕ್ಷಾಂತರ ಮಾಡಿದರು ಜಗ್ಗೇಶ್. ಬಿಜೆಪಿಯಿಂದ 2010 ರಿಂದ 2016ರ ವರೆಗೆ ವಿಧಾನಪರಿಷತ್​ ಸದಸ್ಯರಾದರು. 2018ರಲ್ಲಿ ಯಶವಂತಪುರ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಸೋತರು. ನಂತರ ವರ್ಷದ ಹಿಂದೆ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.

ನರೇಂದ್ರ ಮೋದಿ ಅವರ ಅನುಯಾಯಿ ಆಗಿರುವ ಜಗ್ಗೇಶ್, ಕಾಂಗ್ರೆಸ್ ಪಕ್ಷದಲ್ಲಿಯೂ ಕೆಲವು ಗೆಳೆಯರನ್ನು ಹೊಂದಿದ್ದಾರೆ. ಡಿ.ಕೆ.ಶಿವಕುಮಾರ್ ಸಹ ಅವರಲ್ಲೊಬ್ಬರು. ಇತ್ತೀಚೆಗಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತಾಗ, ಕೊಟ್ಟ ಕುದುರೆಯನ್ನು ಏರಲಾರದವನು ಶೂರನೂ ಅಲ್ಲ ಧೀರನೂ ಅಲ್ಲ ಎಂದು ಮಾರ್ಮಿಕವಾಗಿ ಟ್ವೀಟ್ ಮಾಡಿ ರಾಜ್ಯ ಬಿಜೆಪಿ ವಿರುದ್ಧ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ:ಬಿಜೆಪಿ ಹೀನಾಯ ಸೋಲು: ನಟ, ಸಂಸದ ಜಗ್ಗೇಶ್ ಮಾರ್ಮಿಕ ಟ್ವೀಟ್

ನಟನೆ ಹಾಗೂ ರಾಜಕೀಯ ಎರಡನ್ನೂ ತೂಗಿಸಿಕೊಂಡು ಹೋಗುತ್ತಿದ್ದಾರೆ ನಟ ಜಗ್ಗೇಶ್. ಇತ್ತೀಚೆಗಷ್ಟೆ ಜಗ್ಗೇಶ್ ನಟನೆಯ ರಾಘವೇಂದ್ರ ಸ್ಟೋರ್ಸ್ ಸಿನಿಮಾ ಬಿಡುಗಡೆ ಆಗಿ ಹಿಟ್ ಆಗಿದೆ. ಸಂತೋಶ್ ಆನಂದ್​ರಾಮ್ ನಿರ್ದೇಶನದ ಈ ಸಿನಿಮಾವನ್ನು ಹೊಂಬಾಳೆ ಫಿಲಮ್ಸ್​ನವರು ನಿರ್ಮಾಣ ಮಾಡಿದ್ದರು. ಚುನಾವಣೆ ಸಮಯದಲ್ಲಿ ಸಿನಿಮಾ ಬಿಡುಗಡೆ ಆದರೂ ಉತ್ತಮ ಕಲೆಕ್ಷನ್ ಅನ್ನೇ ಸಿನಿಮಾ ಮಾಡಿಕೊಟ್ಟಿತು. ಈ ಸಿನಿಮಾ ಪ್ರಸ್ತುತ ಅಮೆಜಾನ್ ಪ್ರೈಂನಲ್ಲಿ ಸ್ಟ್ರೀಮ್ ಆಗುತ್ತಿದೆ. ಸಿನಿಮಾಗಳ ಜೊತೆಗೆ ರಿಯಾಲಿಟಿ ಶೋಗಳ ಜಡ್ಜ್ ಆಗಿಯೂ ಜಗ್ಗೇಶ್ ಕಾಣಿಸಿಕೊಳ್ಳುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:47 pm, Mon, 12 June 23

ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ