AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ! Sushant Singh Rajput suicide

‘ಧೋನಿ’ ಹಿಂದಿ ಚಿತ್ರದ ಖ್ಯಾತಿಯ ಬಾಲಿವುಡ್​ ನಟ ಸುಶಾಂತ್ ಸಿಂಗ್ ರಜಪೂತ್ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗ್ತಿದೆ. ನಟನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಕಂಡ ಅವರ ಮನೆಗೆಲಸದಾತ ಕೂಡಲೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗ್ತಿದೆ. ಸುಶಾಂತ್ ಮನೆಯಲ್ಲಿ ಡೆತ್‌ನೋಟ್‌ ಸಿಕ್ಕಿಲ್ಲ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿವಾಸದಲ್ಲಿ ಮುಂಬೈ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಪಂಚನಾಮೆ ಮಾಡುತ್ತಿರುವ ಪೊಲೀಸರು ಮನೆ ಕೆಲಸದವನ […]

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ! Sushant Singh Rajput suicide
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು|

Updated on:Jun 15, 2020 | 11:01 AM

Share

‘ಧೋನಿ’ ಹಿಂದಿ ಚಿತ್ರದ ಖ್ಯಾತಿಯ ಬಾಲಿವುಡ್​ ನಟ ಸುಶಾಂತ್ ಸಿಂಗ್ ರಜಪೂತ್ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗ್ತಿದೆ. ನಟನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಕಂಡ ಅವರ ಮನೆಗೆಲಸದಾತ ಕೂಡಲೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗ್ತಿದೆ.

ಸುಶಾಂತ್ ಮನೆಯಲ್ಲಿ ಡೆತ್‌ನೋಟ್‌ ಸಿಕ್ಕಿಲ್ಲ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿವಾಸದಲ್ಲಿ ಮುಂಬೈ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಪಂಚನಾಮೆ ಮಾಡುತ್ತಿರುವ ಪೊಲೀಸರು ಮನೆ ಕೆಲಸದವನ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಈ ಮಧ್ಯೆ ಸುಶಾಂತ್ ಮನೆಯಲ್ಲಿ ಡೆತ್‌ನೋಟ್‌ ಸಿಕ್ಕಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಕಿರುತೆರೆಯ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ 1986ರ ಜನವರಿ 21ರಂದು ಬಿಹಾರದ ಪಾಟ್ನಾದಲ್ಲಿ ಜನಿಸಿದ್ದ 34 ವರ್ಷದ ಸುಶಾಂತ್​ 2009ರಲ್ಲಿ ಕಿರುತೆರೆಯ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದರು. ‘ಪವಿತ್ರ ರಿಷ್ತಾ’ ಧಾರಾವಾಹಿ ಮೂಲಕ ಕಿರುತೆರೆಯಲ್ಲಿ ಖ್ಯಾತಿ ಪಡೆದ ಇವರು ನಂತರ ‘ಕಾಯ್​ ಪೋಚೆ’ ಎಂಬ ಹಿಂದಿ ಚಿತ್ರದ ಮೂಲಕ ಬಾಲಿವುಡ್​ಗೆ ಎಂಟ್ರಿ ಕೊಟ್ಟರು. ತದನಂತರ 2016ರಲ್ಲಿ ಎಂ.ಎಸ್.ಧೋನಿ ಜೀವನಾಧಾರಿತ ಎಂ.ಎಸ್.ಧೋನಿ(ದಿ ಅನ್​ಟೋಲ್ಡ್ ಸ್ಟೋರಿ) ಚಿತ್ರದಲ್ಲಿ ನಟಿಸುವ ಮೂಲಕ ಎಲ್ಲರ ಮನ್ನಣೆ ಪಡೆದಿದ್ದರು. ಈ ಚಿತ್ರದಲ್ಲಿ ತಮ್ಮ ನಟನೆಗಾಗಿ ಫಿಲ್ಮ್​ಫೇರ್​ ಪ್ರಶಸ್ತಿ ಕೂಡ ಗೆದಿದ್ದರು.

Published On - 2:42 pm, Sun, 14 June 20

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್