ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದ ಖ್ಯಾತ ನೃತ್ಯ ಸಂಯೋಜಕಿ ಸರೋಜ್ ಖಾನ್ ವಿಧಿವಶ

ಮುಂಬೈ: ಖ್ಯಾತ ನೃತ್ಯ ಸಂಯೋಜಕಿ ಸರೋಜ್ ಖಾನ್ ತಮ್ಮ 71 ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಸರೋಜ್ ಖಾನ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಉಸಿರಾಟದ ತೊಂದರೆಯಿಂದಾಗಿ ಜೂನ್ 20 ರಂದು ಮುಂಬೈನ ಬಾಂದ್ರಾದಲ್ಲಿರುವ ಗುರುನಾನಕ್ ಆಸ್ಪತ್ರೆಗೆ ದಾಖಲಾಗಿದ್ರು. ಇತ್ತೀಚೆಗೆ ಅವರ ಮಗ ಅವರ ಯೋಗಕ್ಷೇಮದ ಬಗ್ಗೆ ದೃಢಪಡಿಸಿದ್ದರು. ಆದೆರ ಇಂದು ಮುಂಜಾನೆ 1.52ರ ಸಮಯಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ. ಪೌರಾಣಿಕ ನೃತ್ಯ ಸಂಯೋಜಕಿ ಸರೋಜ್ ಖಾನ್ ಅವರಿಗೆ ತೀವ್ರ ಮಧುಮೇಹ ಮತ್ತು ಹೃದಯ ಸಂಬಂಧಿತ ಕಾಯಿಲೆ […]

ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದ ಖ್ಯಾತ ನೃತ್ಯ ಸಂಯೋಜಕಿ ಸರೋಜ್ ಖಾನ್ ವಿಧಿವಶ

Updated on: Jul 03, 2020 | 7:37 AM

ಮುಂಬೈ: ಖ್ಯಾತ ನೃತ್ಯ ಸಂಯೋಜಕಿ ಸರೋಜ್ ಖಾನ್ ತಮ್ಮ 71 ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಸರೋಜ್ ಖಾನ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಉಸಿರಾಟದ ತೊಂದರೆಯಿಂದಾಗಿ ಜೂನ್ 20 ರಂದು ಮುಂಬೈನ ಬಾಂದ್ರಾದಲ್ಲಿರುವ ಗುರುನಾನಕ್ ಆಸ್ಪತ್ರೆಗೆ ದಾಖಲಾಗಿದ್ರು. ಇತ್ತೀಚೆಗೆ ಅವರ ಮಗ ಅವರ ಯೋಗಕ್ಷೇಮದ ಬಗ್ಗೆ ದೃಢಪಡಿಸಿದ್ದರು. ಆದೆರ ಇಂದು ಮುಂಜಾನೆ 1.52ರ ಸಮಯಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ.

ಪೌರಾಣಿಕ ನೃತ್ಯ ಸಂಯೋಜಕಿ ಸರೋಜ್ ಖಾನ್ ಅವರಿಗೆ ತೀವ್ರ ಮಧುಮೇಹ ಮತ್ತು ಹೃದಯ ಸಂಬಂಧಿತ ಕಾಯಿಲೆ ಇತ್ತು. ಇವರು 3 ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದರು. ಸರೋಜ್ ಖಾನ್ ಕೊನೆಯ ಬಾರಿಗೆ ಕಲಾಂಕ್ ಚಿತ್ರದಲ್ಲಿ ಒಂದು ಹಾಡಿಗೆ ಕೆಲಸ ಮಾಡಿದರು, ಅಲ್ಲಿ ಅವರು ಮಾಧುರಿ ದೀಕ್ಷಿತ್​ಗೆ ನೃತ್ಯ ಸಂಯೋಜನೆ ಮಾಡಿದರು.