ಬಾಲಿವುಡ್ನವರು ಸಿನಿಮಾ ಮಾಡುವುದಕ್ಕೂ ದಕ್ಷಿಣ ಭಾರತದವರು ಸಿನಿಮಾ ಮಾಡುವುದಕ್ಕೂ ಸಾಕಷ್ಟು ವ್ಯತ್ಯಾಸ ಇದೆ. ಇದನ್ನು ಎಲ್ಲರೂ ಒಪ್ಪಿಕೊಳ್ಳುತ್ತಾರೆ. ರಿಷಬ್ ಶೆಟ್ಟಿ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಮೆಟ್ರೋ ಸಾಗ’ ಯೂಟ್ಯೂಬ್ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಚಾರದ ಕುರಿತು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ರಿಷಬ್ ಶೆಟ್ಟಿ ನಿರ್ಮಾಣದ ಹಾಗೂ ಪ್ರಮೋದ್ ಶೆಟ್ಟಿ ನಟನೆಯ ‘ಲಾಫಿಂಗ್ ಬುದ್ಧ’ ಸಿನಿಮಾ ಈ ವಾರ ರಿಲೀಸ್ ಆಗುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ರಿಷಬ್ ಅವರು ವಿವಿಧ ಚಾನೆಲ್ಗಳಿಗೆ ಸಂದರ್ಶನ ನೀಡುತ್ತಿದ್ದಾರೆ.
ರಿಷಬ್ ಅವರು ಇತ್ತೀಚೆಗೆ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ‘ಕಾಂತಾರ’ ಸಿನಿಮಾ ನಟನೆಗೆ ಅತ್ಯುತ್ತಮ ನಟ ಅವಾರ್ಡ್ ಅವರಿಗೆ ಸಿಕ್ಕಿದೆ. ಈ ಮೂಲಕ ಅವರ ಜನಪ್ರಿಯತೆ ಹೆಚ್ಚಾಗಿದೆ. ರಿಷಬ್ ಅವರು ಸಾಧನೆ ಅನೇಕರಿಗೆ ಮಾದರಿ. ಸದಾ ಒಳ್ಳೆಯ ಚಿತ್ರಗಳನ್ನು ನೀಡುವ ಕೆಲಸವನ್ನು ಅವರು ಮಾಡುತ್ತಿದ್ದಾರೆ. ಈಗ ರಿಷಬ್ ಅವರು ಬಾಲಿವುಡ್ ಸಿನಿಮಾಗಳ ಬಗ್ಗೆ ಮಾತನಾಡಿದ್ದಾರೆ.
‘ಭಾರತೀಯ ಸಿನಿಮಾಗಳು ಅದರಲ್ಲೂ ವಿಶೇಷವಾಗಿ ಬಾಲಿವುಡ್ ಚಿತ್ರಗಳಲ್ಲಿ ಭಾರತವನ್ನು ಕೆಟ್ಟದಾಗಿ ತೋರಿಸಲಾಗಿದೆ. ಇದೇ ಸಿನಿಮಾ ಮಾಡೋ ಆರ್ಟ್ಸ್ ಎಂದುಕೊಂಡು ಹೊರದೇಶಗಳಿಗೆ ಹೋಗಿ ಅವಾರ್ಡ್ಗಳನ್ನು ಗೆದ್ದು ಬಂದಿದ್ದನ್ನು ನೋಡಿದ್ದೇನೆ. ನಮ್ಮ ದೇಶ ನಮ್ಮ ಹೆಮ್ಮೆ, ನನ್ನ ರಾಜ್ಯ ನನ್ನ ಹೆಮ್ಮೆ, ನನ್ನ ಭಾಷೆ ನನ್ನ ಹೆಮ್ಮೆ. ನಮ್ಮಲ್ಲಿರೋದನ್ನು ಪಾಸಿಟಿವ್ ನೋಟ್ನಲ್ಲಿ ತೋರಿಸಬಹುದಲ್ಲ’ ಎಂದಿದ್ದಾರೆ ಅವರು.
RISHAB SHETTY: Indian films, especially Bollywood shows India in a Bad light, touted as art films, getting invited to global event, red carpets.
My nation, My state, My language-MY PRIDE, why not take it on a +ve note globally & that’s what I try to do.
— Christopher Kanagaraj (@Chrissuccess) August 20, 2024
ಇದನ್ನೂ ಓದಿ: ರಿಷಬ್ ಶೆಟ್ಟಿ ಮೊದಲ ಹೆಸರೇನು? ನಾಮ ಬದಲಿಸಿಕೊಳ್ಳಲು ಕಾರಣವಾಯಿತು ಆ ಘಟನೆ
ರಿಷಬ್ ಶೆಟ್ಟಿ ಅವರ ಹೇಳಿಕೆ ವೈರಲ್ ಆಗಿದೆ. ಅನೇಕರು ರಿಷಬ್ ಹೇಳಿಕೆಯನ್ನು ಬೆಂಬಲಿಸಿದ್ದಾರೆ. ರಿಷಬ್ ಶೆಟ್ಟಿ ಅವರು ಸರಿಯಾದ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ರಿಷಬ್ ಶೆಟ್ಟಿ ಅವರು ನಟನೆ, ನಿರ್ದೇಶನದ ಜೊತೆಗೆ ನಿರ್ಮಾಣದಲ್ಲೂ ಬ್ಯುಸಿ ಇದ್ದಾರೆ. ಹೊಸ ಹೀರೋಗಳ ಸಿನಿಮಾಗಳನ್ನು ಅವರು ನಿರ್ಮಾಣ ಮಾಡುತ್ತಿದ್ದಾರೆ. ಈ ಕಾರಣಕ್ಕೆ ಅವರು ಅನೇಕರಿಗೆ ಇಷ್ಟ ಆಗುತ್ತಾರೆ. ರಿಷಬ್ ಶೆಟ್ಟಿ ಅವರು ಸದ್ಯ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 6:56 am, Wed, 21 August 24