ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ಮುಂಬೈನ ಆಸ್ಪತ್ರೆಗೆ ದಾಖಲು

ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ಮುಂಬೈನ ಆಸ್ಪತ್ರೆಗೆ ದಾಖಲು

ಮುಂಬೈ: ತೀವ್ರ ಅನಾರೋಗ್ಯದಿಂದಾಗಿ ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ಮುಂಬೈನ ಎಚ್‍ಎನ್ ರಿಯಲಯನ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಸ್ವತಃ ಅವರ ಸಹೋದರ ರಣಧೀರ್ ಕಪೂರ್ ತಿಳಿಸಿದ್ದಾರೆ.

67 ವರ್ಷ ವಯಸ್ಸಿನ ರಿಷಿ ಕಪೂರ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಅವರಿಗೆ ಉಸಿರಾಟದ ತೊಂದರೆ ಉಂಟಾಗಿದೆ. ಹಾಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದೇವೆ. ಈಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅವರ ಸಹೋದರ ರಣಧೀರ್ ಕಪೂರ್ ಮಾಹಿತಿ ನೀಡಿದ್ದಾರೆ.

ಸುಮಾರು ಒಂದು ವರ್ಷದ ಹಿಂದೆ ಯುಎಸ್‍ನಲ್ಲಿ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆದಿದ್ದ ಅವರು ಬಳಿಕ ಸ್ವದೇಶಕ್ಕೆ ಆಗಮಿಸಿದ್ದರು. ಕಳೆದ ಫೆಬ್ರವರಿ ತಿಂಗಳಿನಲ್ಲಿಯೇ ರಿಷಿ ಕಪೂರ್ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು.

Published On - 8:24 am, Thu, 30 April 20

Click on your DTH Provider to Add TV9 Kannada