ನಟ ಚೇತನ್ ಹೇಳಿಕೆ ಬ್ರಾಹ್ಮಣ ಸಮುದಾಯಕ್ಕೆ ನೋವು ತಂದಿದೆ, ಅವರು ಕ್ಷಮೆ ಕೇಳಬೇಕು; ಪೊಲೀಸ್ ಆಯುಕ್ತರಿಗೆ ದೂರು
ಬ್ರಾಹ್ಮಣಿಕೆ ಮತ್ತು ಬ್ರಾಹ್ಮಣತ್ವ ಭಯೋತ್ಪಾದಕ ಎಂಬ ರೀತಿಯಲ್ಲಿ ನಟ ಚೇತನ್ ಅವರ ಹೇಳಿಕೆ ಇದೆ. ಈ ಹೇಳಿಕೆಗಳು ಬ್ರಾಹ್ಮಣ ಸಮುದಾಯಕ್ಕೆ ತುಂಬಾ ನೋವು ತಂದಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬ್ರಾಹ್ಮಣರ ಬಗ್ಗೆ ನಟ ಚೇತನ್ ಮಾಡಿದ್ದ ಟ್ವೀಟ್ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಅವರು ಮಾಡಿರುವ ಟ್ವೀಟ್ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆದಿದ್ದವು. ನಟ ಚೇತನ್ ಮಾಡಿದ ಟ್ವೀಟ್ಗೆ ಸಂಬಂಧಿಸಿ ಬಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ದೂರು ನೀಡಿದ್ದಾರೆ.
‘ಬ್ರಾಹ್ಮಣ್ಯವು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ಮನೋಭಾವವನ್ನು ನಿರಾಕರಿಸುತ್ತದೆ… ನಾವು ಬ್ರಾಹ್ಮಣ್ಯವನ್ನು ಬೇರುಸಹಿತ ಕಿತ್ತುಹಾಕಬೇಕು’ ಎಂದು ಅಂಬೇಡ್ಕರ್ ಹೇಳಿದ್ದಾರೆ. ‘ಎಲ್ಲರೂ ಸರಿಸಮಾನರಾಗಿ ಜನಿಸಿದರೆ, ಬ್ರಾಹ್ಮಣರು ಮಾತ್ರ ಅತ್ಯುನ್ನತರು ಮತ್ತು ಉಳಿದವರೆಲ್ಲರೂ ಕೆಳಹಂತದವರು ಮತ್ತು ಅಸ್ಪೃಶ್ಯರು ಎಂದು ಹೇಳುವುದು ಸಂಪೂರ್ಣ ಅಸಂಬದ್ಧ. ಇದೊಂದು ದೊಡ್ಡ ವಂಚನೆ ಎಂಬುದಾಗಿ ಪೆರಿಯಾರ್ ಹೇಳಿದ್ದಾರೆ ಎಂದು ಚೇತನ್ ಟ್ವೀಟ್ ಮಾಡಿದ್ದರು.
‘Brahminism is negation of the spirit of Liberty, Equality, Fraternity…we must uproot Brahminism’— #Ambedkar
‘While all are born as equals, to say that Brahmins alone are highest & all others are low as Untouchables is sheer nonsense. It is a big hoax’ — #Periyar pic.twitter.com/ScIMzWx8X9
— Chetan Kumar / ಚೇತನ್ (@ChetanAhimsa) June 6, 2021
ಬ್ರಾಹ್ಮಣಿಕೆ ಮತ್ತು ಬ್ರಾಹ್ಮಣತ್ವ ಭಯೋತ್ಪಾದಕ ಎಂಬ ರೀತಿಯಲ್ಲಿ ನಟ ಚೇತನ್ ಅವರ ಹೇಳಿಕೆ ಇದೆ. ಈ ಹೇಳಿಕೆಗಳು ಬ್ರಾಹ್ಮಣ ಸಮುದಾಯಕ್ಕೆ ತುಂಬಾ ನೋವು ತಂದಿವೆ. ಚೇತನ್ ಬ್ರಾಹ್ಮಣ ಸಮುದಾಯದ ಬೇಷರತ್ ಕ್ಷಮೆ ಕೇಳಲಿ. ನಟ ಚೇತನ್ ವಿರುದ್ಧ ಕಾನೂನು ರೀತಿ ಕ್ರಮಕೈಗೊಳ್ಳಬೇಕು ಎಂದು ಸಚ್ಚಿದಾನಂದ ಮೂರ್ತಿ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ನಟ ಚೇತನ್ ಬಹುಶಃ ಪ್ರಧಾನಿ ಮೋದಿ ಬಗ್ಗೆ ಮಾತ್ನಾಡಿರಬೇಕು: ಸುದೀಪ್ ಹೀಗ್ಯಾಕಂದ್ರು?