ನಟ ಚೇತನ್ ಹೇಳಿಕೆ ಬ್ರಾಹ್ಮಣ ಸಮುದಾಯಕ್ಕೆ ನೋವು ತಂದಿದೆ, ಅವರು ಕ್ಷಮೆ ಕೇಳಬೇಕು; ಪೊಲೀಸ್ ಆಯುಕ್ತರಿಗೆ ದೂರು

|

Updated on: Jun 07, 2021 | 6:32 PM

ಬ್ರಾಹ್ಮಣಿಕೆ ಮತ್ತು ಬ್ರಾಹ್ಮಣತ್ವ ಭಯೋತ್ಪಾದಕ ಎಂಬ ರೀತಿಯಲ್ಲಿ ನಟ ಚೇತನ್ ಅವರ ಹೇಳಿಕೆ ಇದೆ. ಈ ಹೇಳಿಕೆಗಳು ಬ್ರಾಹ್ಮಣ ಸಮುದಾಯಕ್ಕೆ ತುಂಬಾ ನೋವು ತಂದಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ನಟ ಚೇತನ್ ಹೇಳಿಕೆ ಬ್ರಾಹ್ಮಣ ಸಮುದಾಯಕ್ಕೆ ನೋವು ತಂದಿದೆ, ಅವರು ಕ್ಷಮೆ ಕೇಳಬೇಕು; ಪೊಲೀಸ್ ಆಯುಕ್ತರಿಗೆ ದೂರು
Follow us on

ಬ್ರಾಹ್ಮಣರ ಬಗ್ಗೆ ನಟ ಚೇತನ್​ ಮಾಡಿದ್ದ ಟ್ವೀಟ್​ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಅವರು ಮಾಡಿರುವ ಟ್ವೀಟ್​ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆದಿದ್ದವು. ನಟ ಚೇತನ್​ ಮಾಡಿದ ಟ್ವೀಟ್​ಗೆ ಸಂಬಂಧಿಸಿ ಬಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ದೂರು ನೀಡಿದ್ದಾರೆ.

‘ಬ್ರಾಹ್ಮಣ್ಯವು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ಮನೋಭಾವವನ್ನು ನಿರಾಕರಿಸುತ್ತದೆ… ನಾವು ಬ್ರಾಹ್ಮಣ್ಯವನ್ನು ಬೇರುಸಹಿತ ಕಿತ್ತುಹಾಕಬೇಕು’ ಎಂದು ಅಂಬೇಡ್ಕರ್​ ಹೇಳಿದ್ದಾರೆ. ‘ಎಲ್ಲರೂ ಸರಿಸಮಾನರಾಗಿ ಜನಿಸಿದರೆ, ಬ್ರಾಹ್ಮಣರು ಮಾತ್ರ ಅತ್ಯುನ್ನತರು ಮತ್ತು ಉಳಿದವರೆಲ್ಲರೂ ಕೆಳಹಂತದವರು ಮತ್ತು ಅಸ್ಪೃಶ್ಯರು ಎಂದು ಹೇಳುವುದು ಸಂಪೂರ್ಣ ಅಸಂಬದ್ಧ. ಇದೊಂದು ದೊಡ್ಡ ವಂಚನೆ ಎಂಬುದಾಗಿ ಪೆರಿಯಾರ್ ಹೇಳಿದ್ದಾರೆ ಎಂದು ಚೇತನ್​ ಟ್ವೀಟ್ ಮಾಡಿದ್ದರು.

ಬ್ರಾಹ್ಮಣಿಕೆ ಮತ್ತು ಬ್ರಾಹ್ಮಣತ್ವ ಭಯೋತ್ಪಾದಕ ಎಂಬ ರೀತಿಯಲ್ಲಿ ನಟ ಚೇತನ್ ಅವರ ಹೇಳಿಕೆ ಇದೆ. ಈ ಹೇಳಿಕೆಗಳು ಬ್ರಾಹ್ಮಣ ಸಮುದಾಯಕ್ಕೆ ತುಂಬಾ ನೋವು ತಂದಿವೆ. ಚೇತನ್ ಬ್ರಾಹ್ಮಣ ಸಮುದಾಯದ ಬೇಷರತ್‌ ಕ್ಷಮೆ ಕೇಳಲಿ. ನಟ ಚೇತನ್ ವಿರುದ್ಧ ಕಾನೂನು ರೀತಿ ಕ್ರಮಕೈಗೊಳ್ಳಬೇಕು ಎಂದು ಸಚ್ಚಿದಾನಂದ ಮೂರ್ತಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ನಟ ಚೇತನ್​ ಬಹುಶಃ ಪ್ರಧಾನಿ ಮೋದಿ ಬಗ್ಗೆ ಮಾತ್ನಾಡಿರಬೇಕು: ಸುದೀಪ್​ ಹೀಗ್ಯಾಕಂದ್ರು?