ಕಿಚ್ಚ ಸುದೀಪ್ ಚಿತ್ರರಂಗದ ಪಯಣಕ್ಕೆ 25 ವರ್ಷ; ಶಾಲು ಹೊದಿಸಿ ಸನ್ಮಾನಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

ಕನ್ನಡ ಮಾತ್ರವಲ್ಲದೆ ಸುದೀಪ್​ ತೆಲುಗು ಹಾಗೂ ಬಾಲಿವುಡ್​ನಲ್ಲೂ ನಟಿಸಿದ್ದಾರೆ. ಎಲ್ಲಾ ಭಾಷೆಯ ಸಿನಿಮಾಗಳನ್ನೂ ಸೇರಿಸಿದರೆ ಸುದೀಪ್‌ 50ಕ್ಕೂ ಹೆಚ್ಚು ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ.

ಕಿಚ್ಚ ಸುದೀಪ್ ಚಿತ್ರರಂಗದ ಪಯಣಕ್ಕೆ 25 ವರ್ಷ; ಶಾಲು ಹೊದಿಸಿ ಸನ್ಮಾನಿಸಿದ ಮುಖ್ಯಮಂತ್ರಿ ಯಡಿಯೂರಪ್ಪ
ಕಿಚ್ಚ ಸುದೀಪ್​ಗೆ ಸನ್ಮಾನ ಮಾಡಿದ ಯಡಿಯೂರಪ್ಪ
Follow us
ರಾಜೇಶ್ ದುಗ್ಗುಮನೆ
|

Updated on: Mar 15, 2021 | 7:42 PM

ನಟ ಕಿಚ್ಚ ಸುದೀಪ್​ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷ ಕಳೆದಿದೆ. ಭಿನ್ನ ಭಿನ್ನ ಸಿನಿಮಾಗಳಲ್ಲಿ ನಟಿಸಿ ಸುದೀಪ್​ ಅಭಿಮಾನಿಗಳನ್ನು ರಂಜಿಸಿದ್ದಾರೆ.  ಈ ಸಂದರ್ಭದಲ್ಲಿ ಕಿಚ್ಚ ಸುದೀಪ್​ ಅವರನ್ನು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಸನ್ಮಾನ ಮಾಡಿದ್ದಾರೆ. ಈ ಅಪರೂಪದ ಕ್ಷಣಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಸಾಕ್ಷಿಯಾದರು. ಕನ್ನಡ ಮಾತ್ರವಲ್ಲದೆ ಸುದೀಪ್​ ತೆಲುಗು ಹಾಗೂ ಬಾಲಿವುಡ್​ನಲ್ಲೂ ನಟಿಸಿದ್ದಾರೆ. ಎಲ್ಲಾ ಭಾಷೆಯ ಸಿನಿಮಾಗಳನ್ನೂ ಸೇರಿಸಿದರೆ ಸುದೀಪ್‌ 50ಕ್ಕೂ ಹೆಚ್ಚು ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ. ಕನ್ನಡ ಚಿತ್ರರಂಗಕ್ಕೆ ದೊಡ್ಡ ಕೊಡುಗೆಯನ್ನು ನೀಡಿದ ನಟನಿಗೆ ಯಡಿಯೂರಪ್ಪ ಶಾಲು ಹೊದಿಸಿ ಸನ್ಮಾನ ಮಾಡಿದರು.

ಸುದೀಪ್​ ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕೋಟಿಗೊಬ್ಬ3 ಚಿತ್ರತಂಡ ಸೋಮವಾರ ಸಂಜೆ ಬೆಳ್ಳಿ ಹಬ್ಬ ಆಚರಣೆ ಮಾಡುತ್ತಿದೆ. ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಕಿಚ್ಚನ ಬೆಳ್ಳಿ ಹಬ್ಬಕ್ಕೆ ಸ್ಯಾಂಡಲ್​ವುಡ್​ ಸಾಕ್ಷಿಯಾಗಿದೆ. ಕ್ರೇಜಿಸ್ಟಾರ್​ ರವಿಚಂದ್ರನ್, ಸೆಂಚ್ಯುರಿ ಸ್ಟಾರ್​ ಶಿವರಾಜ್ ಕುಮಾರ್ ಸೇರಿದಂತೆ ಬಹುತೇಕ ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದಾರೆ. ಈ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್​​ಗೆ ಯಡಿಯೂರಪ್ಪ ಸನ್ಮಾನಿಸಿದ್ದಾರೆ.

1997ರಲ್ಲಿ ತೆರೆಕಂಡ ತಾಯವ್ವ ಸಿನಿಮಾ ಮೂಲಕ ಸುದೀಪ್​​ ಸ್ಯಾಂಡಲ್​ವುಡ್​ಗೆ ಕಾಲಿಟ್ಟರು. ನಂತರ ಅವರು ಸಾಲು ಸಾಲು ಚಿತ್ರಗಳಲ್ಲಿ ನಟಿಸಲು ಆರಂಭಿಸಿದರು. ಅವರ ನಟನೆಯನ್ನು ನೋಡಿ ಪರಭಾಷೆಯವರು ಕೂಡ ಸುದೀಪ್​ಗೆ ಆಹ್ವಾನ ನೀಡಿದ್ದರು. ಸದ್ಯ ಸುದೀಪ್​ ಕೋಟ್ಟಿಗೊಬ್ಬ 3, ವಿಕ್ರಾಂತ್​ ರೋಣ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಉಪೇಂದ್ರ ನಟನೆಯ ಕಬ್ಜಾ ಚಿತ್ರದಲ್ಲಿ ಸುದೀಪ್​ ವಿಶೇಷ ಪಾತ್ರ ನಿರ್ವಹಿಸುತ್ತಿದ್ದಾರೆ.

ಕಿಚ್ಚ ಸುದೀಪ್​ ನಟನೆಯ ಕೋಟಿಗೊಬ್ಬ 3 ಸಿನಿಮಾ ಶೀಘ್ರವೇ ತೆರೆಗೆ ಬರುತ್ತಿದೆ. ಮಡೋನಾ ಸೆಬಾಸ್ಟಿಯನ್ ಹಾಗೂ ಶ್ರದ್ಧಾ ದಾಸ್ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಅರ್ಜುನ್​ ಜನ್ಯಾ ಸಿನಿಮಾಗೆ ಸಂಗೀತ ನೀಡಿದ್ದಾರೆ.

ಇದನ್ನೂ ಓದಿ: Bigg Boss Kannada: ಗೀತಾ ಮತ್ತು ವಿಶ್ವನಾಥ್​ಗೆ ಲಾಸ್ಟ್​ ವಾರ್ನಿಂಗ್​ ನೀಡಿದ ಕಿಚ್ಚ ಸುದೀಪ್​! ಕಾರಣ ಏನು?

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್