ಚಲನಚಿತ್ರ, ಕಿರುತೆರೆ ರಂಗದವರಿಗೆ ಗುಡ್ ನ್ಯೂಸ್: ವಿಶೇಷ ಪ್ಯಾಕೇಜ್ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಸೇವಾಸಿಂಧು ವೆಬ್ ಪೋರ್ಟಲ್ನಲ್ಲಿ ಜುಲೈ 9ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು. ಈ ಅವಧಿಯನ್ನು ವಿಸ್ತರಿಸುವಂತೆ ವಿವಿಧ ಸಂಘಗಳು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆ ಅವಧಿಯನ್ನು ಜುಲೈ 31ರ ವರೆಗೆ ವಿಸ್ತರಿಸಲಾಗಿದೆ.
ಕೊರೊನಾ ಎರಡನೇ ಅಲೆಯಿಂದ ಚಿತ್ರರಂಗದವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಕಾರಣಕ್ಕೆ ಚಲನಚಿತ್ರ ಹಾಗೂ ಕಿರುತೆರೆ ಕಲಾವಿದರು, ತಂತ್ರಜ್ಞರು, ಸಿನಿಮಾ ಕಾರ್ಮಿಕರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದರು. ಇದನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 31ರ ವರೆಗೆ ವಿಸ್ತರಿಸಲಾಗಿದೆ.
ಸೇವಾಸಿಂಧು ವೆಬ್ ಪೋರ್ಟಲ್ನಲ್ಲಿ ಜುಲೈ 9ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು. ಈ ಅವಧಿಯನ್ನು ವಿಸ್ತರಿಸುವಂತೆ ವಿವಿಧ ಸಂಘಗಳು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆ ಅವಧಿಯನ್ನು ಜುಲೈ 31ರ ವರೆಗೆ ವಿಸ್ತರಿಸಲಾಗಿದೆ.
ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ವೇಳೆ ಸರ್ಕಾರ ವಿಧಿಸಿದ್ದ ಲಾಕ್ಡೌನ್ನಿಂದ ಚಿತ್ರರಂಗ ಸೇರಿ ಬಹುತೇಕ ಕ್ಷೇತ್ರಗಳು ತೊಂದರೆಗೆ ಸಿಲುಕಿತ್ತು. ಹೀಗಾಗಿ ಜೂನ್ 3ರಂದು ವಿಶೇಷ ಎರಡನೇ ಪರಿಹಾರದ ಪ್ಯಾಕೇಜ್ ಅನ್ನು ಘೋಷಣೆ ಮಾಡಿದ್ದರು. ಚಲನಚಿತ್ರೋದ್ಯಮ ಹಾಗೂ ಕಿರುತೆರೆಯಲ್ಲಿ ತೊಡಗಿಕೊಂಡಿರುವ ನೋಂದಾಯಿತ ಅಸಂಘಟಿತ ಕಾರ್ಮಿಕರಿಗೆ ತಲಾ ಮೂರು ಸಾವಿರ ರೂ. ಪರಿಹಾರ ಘೋಷಣೆ ಮಾಡಲಾಗಿತ್ತು.
ಅವಧಿ ವಿಸ್ತರಣೆ ಬಳಿಕವೂ ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ ಸೇವಾಸಿಂಧು ಪೋರ್ಟಲ್ನಲ್ಲೇ ಸಲ್ಲಿಸಬೇಕು. ಅರ್ಜಿ ಇಲ್ಲವೇ ಶಿಫಾರಸ್ಸು ಪತ್ರಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಯಾವುದೇ ಕಚೇರಿಗಳಲ್ಲಿ ಸ್ವೀಕರಿಸಲಾಗುವುದಿಲ್ಲ. ಅರ್ಜಿ ನಮೂನೆ ಮತ್ತು ಇನ್ನಿತರ ಷರತ್ತುಗಳಿಗಾಗಿ www.sevasindhu.karnataka.gov.in ಗೆ ಭೇಟಿ ನೀಡಿ ಪಡೆದುಕೊಳ್ಳಬಹುದು.
ಆರ್ಥಿಕ ನೆರವಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಮತ್ತು ಆನ್ಲೈನ್ನಲ್ಲಿ ಅರ್ಜಿಯನ್ನು ಭರ್ತಿ ಮಾಡಲು, ತಾಂತ್ರಿಕ ಮಾರ್ಗದರ್ಶನದ ಅಗತ್ಯವಿದ್ದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿಯಲ್ಲಿ ಸ್ಥಾಪಿಸಿರುವ ಸಹಾಯವಾಣಿಯ ಮೊಬೈಲ್ ಸಂಖ್ಯೆ 89046 45529 ಅನ್ನು ಸಂಪರ್ಕಿಸಬಹುದು ಇಲ್ಲವೆ dpmfilm1@gmail.com ಗೆ ಇಮೇಲ್ ಮೂಲಕ ಪಡೆದುಕೊಳ್ಳಬಹುದು.
ಇದನ್ನೂ ಓದಿ: ‘ಅಂಬರೀಷ್ ಏನು ಮಾಡಿದ್ದಾನೆ ಎಂದು ಸ್ಮಾರಕ ಮಾಡಬೇಕು?’; ಕುಮಾರಸ್ವಾಮಿ ಇದೇ ಮಾತನ್ನು ಹೇಳಿದ್ದರು; ದೊಡ್ಡಣ್ಣ ಆರೋಪ