ಶೀಘ್ರವೇ ಚಿತ್ರರಂಗದವರಿಗೆ ವಿಶೇಷ ಪ್ಯಾಕೇಜ್​? ಸಿಎಂ ಯಡಿಯೂರಪ್ಪ ಕಡೆಯಿಂದ ಸಕಾರಾತ್ಮಕ ಸ್ಪಂದನೆ

ಮನವಿಯನ್ನು ಸ್ವೀಕರಿಸಿದ ಬಿ.ಎಸ್​. ಯಡಿಯೂರಪ್ಪ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮೊದಲ ಹಂತದ ಪ್ಯಾಕೇಜ್​ನಲ್ಲಿ ಕೆಲವರು ಬಿಟ್ಟು ಹೋಗಿರುವುದು ಗಮನಕ್ಕೆ ಬಂದಿದ್ದು ಮುಂದಿನ ಪ್ಯಾಕೇಜ್ ಘೋಷಣೆ ಸಂದರ್ಭದಲ್ಲಿ ಚಿತ್ರೋದ್ಯಮಕ್ಕೆ ಆದ್ಯತೆ ನೀಡಲಾಗುವುದು ಎಂದು ಬಿಎಸ್​ವೈ ತಿಳಿಸಿದ್ದಾರೆ.

ಶೀಘ್ರವೇ ಚಿತ್ರರಂಗದವರಿಗೆ ವಿಶೇಷ ಪ್ಯಾಕೇಜ್​? ಸಿಎಂ ಯಡಿಯೂರಪ್ಪ ಕಡೆಯಿಂದ ಸಕಾರಾತ್ಮಕ ಸ್ಪಂದನೆ
ಚಿತ್ರೋದ್ಯಮಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಸಿಎಂಗೆ ಪುರಾಣಿಕ್ ಮನವಿ
Follow us
ರಾಜೇಶ್ ದುಗ್ಗುಮನೆ
|

Updated on: May 24, 2021 | 6:41 PM

ಕೊರೊನಾ ವೈರಸ್​ ನಿಯಂತ್ರಣಕ್ಕೆ ಹೇರಿರುವ ಲಾಕ್​ಡೌನ್​ನಿಂದ ಕನ್ನಡ ಚಿತ್ರೋದ್ಯಮದ ಕಲಾವಿದರು, ತಂತ್ರಜ್ಞರು, ಕಾರ್ಮಿಕರಿಕರು ಸಾಕಷ್ಟು ತೊಂದರೆಗೆ ಒಳಗಾಗಿದ್ದಾರೆ. ಹೀಗಾಗಿ, ಇವರಿಗೆ ವಿಶೇಷ ಪ್ಯಾಕೇಜ್​ ನೀಡುವಂತೆ ಕೋರಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣದಲ್ಲಿ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಅವರ ಕಡೆಯಿಂದ ಸಕಾರಾತ್ಮಕ ಸ್ಪಂದನೆ ಬಂದಿರೋದು ವಿಶೇಷ.

ಕೊವಿಡ್​ ಮೊದಲನೇ ಅಲೆ ನಂತರ ಚಿತ್ರರಂಗ ಸಂಕಷ್ಟಕ್ಕೆ ಸಿಲುಕಿತ್ತು. ಮೊದಲನೇ ಅಲೆ ತಣ್ಣಗಾದ ನಂತರದಲ್ಲಿ ದೊಡ್ಡ ಬಜೆಟ್​ ಸಿನಿಮಾಗಳು ರಿಲೀಸ್​ ಆಗುವ ಮೂಲಕ ಚಿತ್ರರಂಗ ಮತ್ತೆ ಚೇತರಿಕೆ ಕಾಣಲು ಆರಂಭವಾಗಿತ್ತು. ಇನ್ನು, ಸಾಕಷ್ಟು ಸಿನಿಮಾಗಳು ಘೋಷಣೆ ಆಗಿ, ಶೂಟಿಂಗ್​ ಕೂಡ ಶುರುವಾಗಿತ್ತು. ಹೀಗಾಗಿ, ಎಲ್ಲವೂ ಮತ್ತೆ ಮೊದಲಿನಂತಾಯಿತು ಎಂದೇ ಎಲ್ಲರೂ ಭಾವಿಸಿದ್ದರು. ಆದರೆ, ಏಕಾಏಕಿ ಕೊವಿಡ್​ ಎರಡನೇ ಅಲೆ ಹೆಚ್ಚಿದ್ದರಿಂದ ಚಿತ್ರರಂಗದ ಕಲಾವಿದರು, ತಂತ್ರಜ್ಞರು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ, ತಕ್ಷಣವೇ ಚಿತ್ರೋದ್ಯಮದ ನೆರವಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಅವರು‌ ಮನವಿಯಲ್ಲಿ ಕೋರಿದ್ದಾರೆ.

2020ರ ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಚಿತ್ರೋದ್ಯಮದ 6000ಕುಟುಂಬಗಳಿಗೆ ತಲಾ ₹3000 ಮೌಲ್ಯದ ದಿನಸಿ ಪಡಿತರ ರಿಲೆಯನ್ಸ್ ಕೂಪನ್ ಅನ್ನು ಸರ್ಕಾರದ ವತಿಯಿಂದ ನೀಡಲಾಗಿತ್ತು. ಅಂತೆಯೇ ಇಂದಿನ ಸಂಕಷ್ಟದ ಸಮಯದಲ್ಲೂ ಕನಿಷ್ಟ ತಲಾ₹ 5000 ಮೌಲ್ಯದ ಆಹಾರ ಪಡಿತರ ಕೂಪನ್ ಹಾಗೂ ಇತರೆ ವಿಶೇಷ ನೆರವನ್ನು ನೀಡಬೇಕು. ಚಿತ್ರೋದ್ಯಮವನ್ನು ಆದ್ಯತೆ ಎಂದು ಪರಿಗಣಿಸಿ ಕೋವಿಡ್ ಲಸಿಕೆಯನ್ನು ಹಾಕಲು ಪ್ರತ್ಯೇಕವಾದ ವ್ಯವಸ್ಥೆ ಮಾಡುವಂತೆ  ಸುನೀಲ್​ ಪುರಾಣಿಕ್​ ಕೋರಿದ್ದಾರೆ.

ಮನವಿಯನ್ನು ಸ್ವೀಕರಿಸಿದ ಬಿ.ಎಸ್​. ಯಡಿಯೂರಪ್ಪ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮೊದಲ ಹಂತದ ಪ್ಯಾಕೇಜ್​ನಲ್ಲಿ ಕೆಲವರು ಬಿಟ್ಟು ಹೋಗಿರುವುದು ಗಮನಕ್ಕೆ ಬಂದಿದ್ದು ಮುಂದಿನ ಪ್ಯಾಕೇಜ್ ಘೋಷಣೆ ಸಂದರ್ಭದಲ್ಲಿ ಚಿತ್ರೋದ್ಯಮಕ್ಕೆ ಆದ್ಯತೆ ನೀಡಲಾಗುವುದು ಎಂದು ಬಿಎಸ್​ವೈ ತಿಳಿಸಿದ್ದಾರೆ. ಚಲನಚಿತ್ರ ನಿರ್ಮಾಪಕ ಹಾಗೂ ಕಲಾವಿದರ ಸಂಘದ ಕಾರ್ಯದರ್ಶಿ ರಾಕ್ ಲೈನ್ ವೆಂಕಟೇಶ್ ನಿಯೋಗದಲ್ಲಿದ್ದರು.

ಇದನ್ನೂ ಓದಿ: ಚಿತ್ರರಂಗದ ತಂತ್ರಜ್ಞರಿಗೆ ವಿಶೇಷ ಪ್ಯಾಕೇಜ್​ ಘೋಷಿಸಿ; ಸಿಎಂ ಯಡಿಯೂರಪ್ಪ ಬಳಿ ಸುನೀಲ್​ ಪುರಾಣಿಕ್​, ನಟಿ ತಾರಾ ಮನವಿ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು