GGVV: ‘ಗರುಡ ಗಮನ..’ ಚಿತ್ರ ಪ್ರದರ್ಶನಕ್ಕೆ ತಡೆ ಕೋರಿ ಕೋರ್ಟ್​ಗೆ ಅರ್ಜಿ; ಮಾದೇವ ಹಾಡಿನ ಬಗ್ಗೆ ಆಕ್ಷೇಪ

Sojugada Sooju Mallige: ‘ಗರುಡ ಗಮನ ವೃಷಭ ವಾಹನ’ ಚಿತ್ರದ ‘ಸೋಜುಗಾದ ಸೂಜು ಮಲ್ಲಿಗೆ’ ಹಾಡು ಹಿಟ್​ ಆಗಿದೆ. ಆದರೆ ಕೊಲೆ ದೃಶ್ಯದ ಹಿನ್ನೆಲೆಯಲ್ಲಿ ಈ ಗೀತೆಯನ್ನು ಬಳಸಿಕೊಂಡಿರುವುದು ಸರಿಯಲ್ಲ ಎಂಬ ಆಕ್ಷೇಪ ಎದುರಾಗಿದೆ.

GGVV: ‘ಗರುಡ ಗಮನ..’ ಚಿತ್ರ ಪ್ರದರ್ಶನಕ್ಕೆ ತಡೆ ಕೋರಿ ಕೋರ್ಟ್​ಗೆ ಅರ್ಜಿ; ಮಾದೇವ ಹಾಡಿನ ಬಗ್ಗೆ ಆಕ್ಷೇಪ
‘ಗರುಡ ಗಮನ ವೃಷಭ ವಾಹನ’ ಚಿತ್ರದಲ್ಲಿ ರಾಜ್ ಬಿ. ಶೆಟ್ಟಿ
Follow us
TV9 Web
| Updated By: ಮದನ್​ ಕುಮಾರ್​

Updated on: Dec 07, 2021 | 2:31 PM

ಇತ್ತೀಚೆಗೆ ತೆರೆಕಂಡ ‘ಗರುಡ ಗಮನ ವೃಷಭ ವಾಹನ’ (Garuda Gamana Vrishabha Vahana) ಸಿನಿಮಾ ತಂಡಕ್ಕೆ ಈಗೊಂದು ಸಂಕಷ್ಟ ಎದುರಾಗಿದೆ. ನ.19ರಂದು ಬಿಡುಗಡೆಯಾದ ಈ ಚಿತ್ರಕ್ಕೆ ರಾಜ್​ ಬಿ. ಶೆಟ್ಟಿ (Raj B Shetty) ಅವರ ನಿರ್ದೇಶನವಿದೆ. ಖ್ಯಾತ ನಟ-ನಿರ್ದೇಶಕ ರಿಷಬ್​ ಶೆಟ್ಟಿ (Rishab Shetty) ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮಿಧುನ್​ ಮುಕುಂದನ್​ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಗೆಲುವಿಗೆ ಹಾಡುಗಳು (GGVV Songs) ಮತ್ತು ಹಿನ್ನೆಲೆ ಸಂಗೀತ ಕೂಡ ಕಾರಣ ಆಗಿದೆ. ಆದರೆ ಸಿನಿಮಾದಲ್ಲಿ ಬಳಕೆಯಾದ ‘ಸೋಜುಗಾದ ಸೂಜು ಮಲ್ಲಿಗೆ’ (Sojugada Sooju Mallige) ಹಾಡಿನ ಬಗ್ಗೆ ಕೆಲವರು ಆಕ್ಷೇಪ ಎತ್ತಿದ್ದಾರೆ. ಮಲೆ ಮಹದೇಶ್ವರನ ಭಕ್ತಿ ಗೀತೆಯಾಗಿರುವ ಈ ಹಾಡನ್ನು ಕ್ರೈಂ ದೃಶ್ಯದ ಹಿನ್ನೆಲೆಯಲ್ಲಿ ಬಳಸಿಕೊಂಡಿರುವುದಕ್ಕೆ ವಿಜಯಕುಮಾರ್ ಎಂಬುವವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಈ ಕುರಿತಂತೆ ಅವರು ಕೋರ್ಟ್​ ಮೆಟ್ಟಿಲೇರಿದ್ದು ಸಿನಿಮಾ ಪ್ರದರ್ಶನಕ್ಕೆ ತಡೆ ನೀಡುವಂತೆ ಕೋರಿದ್ದಾರೆ.

ಯೂಟ್ಯೂಬ್​ನಲ್ಲಿ ‘ಸೋಜುಗಾದ ಸೂಜು ಮಲ್ಲಿಗೆ’ ಹಾಡು ಈವರೆಗೆ 23 ಲಕ್ಷ ಬಾರಿ ವೀಕ್ಷಣೆ ಕಂಡಿದೆ. ಜನರು ಈ ಹಾಡನ್ನು ಮೆಚ್ಚಿಕೊಂಡಿದ್ದಾರೆ. ಆದರೆ ಒಂದು ಕೊಲೆ ದೃಶ್ಯದ ಹಿನ್ನೆಲೆಯಲ್ಲಿ ಈ ಗೀತೆಯನ್ನು ಬಳಸಿಕೊಂಡಿರುವುದು ಸರಿಯಲ್ಲ ಎಂಬುದು ವಿಜಯಕುಮಾರ್​ ಅವರ ವಾದ. ಹಾಡನ್ನು ಈ ರೀತಿ ಬಳಸಿಕೊಂಡಿರುವುದರಿಂದ ಶ್ರೀಮಹದೇಶ್ವರ ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆ ಆಗಿದೆ. ಹಾಗಾಗಿ ಸಿನಿಮಾದಿಂದ ಈ ಹಾಡಿನ ಸನ್ನಿವೇಶವನ್ನು ತೆಗೆಯಬೇಕು ಎಂದು ಅವರು ಅರ್ಜಿ ಸಲ್ಲಿಸಿದ್ದಾರೆ. ಹಾಡು ತೆಗೆಯುವವರೆಗೂ ಸಿನಿಮಾ ಪ್ರದರ್ಶನಕ್ಕೆ ತಡೆ ನೀಡಬೇಕು ಎಂದು ಸಿವಿಲ್​ ಕೋರ್ಟ್​ಗೆ ಮನವಿ ಸಲ್ಲಿಸಿದ್ದಾರೆ.

ಇದೇ ಸಿನಿಮಾದಲ್ಲಿ ‘ಚಂದ್ರಚೂಡ ಶಿವಶಂಕರ ಪಾರ್ವತಿ ರಮಣ..’ ಹಾಡಿಗೂ ಸಹ ಕೆಲವರಿಂದ ಆಕ್ಷೇಪ ವ್ಯಕ್ತವಾಗಿದೆ. ಶಿವನಿಗೆ ಸಂಬಂಧಿಸಿದ ಈ ಗೀತೆಯನ್ನು ಸಹ ಕ್ರೈಂ ದೃಶ್ಯಗಳ ಹಿನ್ನೆಲೆಯಲ್ಲಿ ಬಳಸಿಕೊಂಡಿರುವುದು ಸರಿಯಲ್ಲ. ಇದರಿಂದ ಹಲವರ ಧಾರ್ಮಿಕ ಭಾವನೆಗೆ ಧಕ್ಕೆ ಆಗಿದೆ ಎಂಬ ಮಾತು ಕೇಳಿಬಂದಿದೆ.

ಇದೇ ವಿಚಾರವಾಗಿ ಇತ್ತೀಚೆಗೆ ಸಾಲೂರು ಬೃಹನ್ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳು ಅಸಮಾಧಾನ ವ್ಯಕ್ತಪಡಿಸಿದ್ದರು. ಬಹಿರಂಗ ಪತ್ರದ ಮೂಲಕ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದರು. ‘ಕೊಲೆಯೆಂಬ ಹೀನಕೃತ್ಯ ಮಾಡಿ ಸಂಭ್ರಮಿಸುವ ದೃಶ್ಯದ ಹಿನ್ನೆಲೆಯಾಗಿ ಮಾದೇವನನ್ನು ಪೂಜಿಸುವ, ಆರಾಧಿಸುವ ಜಾನಪದ ಹಾಡನ್ನು ಬಳಸಿರುವುದನ್ನು ನೋಡಿದಾಗ ನಿರ್ದೇಶಕರ ಮಾರುಕಟ್ಟೆ ಆಧಾರಿತ ಚಿಂತನೆಯ ಬಗ್ಗೆ ಅನುಕಂಪ ಮೂಡುತ್ತದೆ. ಮಹಾಮಹಿಮರ ಬಗ್ಗೆ ಇದ್ದ ಅದ್ಭುತ ಗೀತೆಯೊಂದನ್ನು ಹಾಡುವಾಗ ಯಾವುದೋ ಲೌಕಿಕ ಜಗತ್ತಿಗೆ ಸೇರಿದ ಹಿಂಸಾತ್ಮಕ ಕಥೆಯೊಳಗಿನ ಕ್ರೌರ್ಯವು ನೆನಪಾಗುವಂತೆ ಮಾಡಿದ ನಿರ್ದೇಶಕರನ್ನೂ ಮಹದೇಶ್ವರರು ಹರಸಲಿ; ಅವರಿಗೆ ಮುಂದೆಂದೂ ಇಂತಹ ಚಿಂತನೆಗಳು ಬರದಂತೆ ಸದ್ಬುದ್ಧಿ ನೀಡಲಿ’ ಎಂದು ಅವರು ಹೇಳಿದ್ದರು.

ಇದನ್ನೂ ಓದಿ:

GGVV Review: ಹೀಗೂ ಇರಬಹುದಾ ಕ್ರೈಮ್​ ಲೋಕ? ಇದು ರಾಜ್​ ಬಿ. ಶೆಟ್ಟಿ ಇನ್ನೊಂದು ಮುಖ

ರೌಡಿಸಂ ದೃಶ್ಯಕ್ಕೆ ಮಾದೇಶ್ವರನ ಹಾಡು; ‘ಗರುಡ ಗಮನ..’ ಬಗ್ಗೆ ಶಾಂತಮಲ್ಲಿಕಾರ್ಜುನ ಸ್ವಾಮಿ ಬಹಿರಂಗ ಪತ್ರ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ